
ಹೈದರಾಬಾದ್, (ಜೂನ್.21) : ತೆಲಂಗಾಣದ ಕಾಂಗ್ರೆಸ್ ಹಿರಿಯ ನಾಯಕ ವಿ. ಹನುಮಂತ ರಾವ್‌ಗೂ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಹನುಮಂತರಾವ್ ಅವರನ್ನು ಹೈದರಾಬಾದ್ ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ವೇಳೆ ಹನುಮಂತರಾವ್ ಅವರಲ್ಲಿ ಕೊರೊನಾ ಸೋಂಕು ತಗುಲಿದೆ.
ಗುಡ್ ನ್ಯೂಸ್: ಕೊರೋನಾ ಚಿಕಿತ್ಸೆಗೆ ಬಂತು ಮಾತ್ರೆ: ಬೆಲೆ 1ಕ್ಕೆ 103 ರು.!
ಸದ್ಯ ಹನುಮಂತರಾವ್ ಅವರಿಗೆ ಹೈದರಾಬಾದ್‌ನ ಆಸ್ಪತ್ರೆಗೆ ದಾಖಲಿಸಿ ಕೋವಿಡ್ ಚಿಕಿತ್ಸೆ ನೀಡಲಾಗುತ್ತಿದೆ. ಕೆಲ ದಿನಗಳ ಹಿಂದೆ ರಾವ್ ಅವರು ಗಾಂಧಿ ಆಸ್ಪತ್ರೆಯಲ್ಲಿ ವೈದ್ಯರೊಬ್ಬರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಆಸ್ಪತ್ರೆಗೆ ಭೇಟಿ ನೀಡಿದ್ದರು.
ಈ ವೇಳೆ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿರಬಹುದು ಎಂದು ಶಂಕಿಸಲಾಗಿದೆ. ಇನ್ನು ಇವರ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಮಾಡುವ ಕೆಲಸವೂ ಸಹ ನಡೆದಿದೆ.
ಇನ್ನು ಕೊರೋನಾ ಸೋಂಕಿಗೆ ತುತ್ತಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರಿಗೆ ಪ್ಲಾಸ್ಮಾ ಚಿಕಿತ್ಸೆ ನೀಡಿರುವುದನ್ನು ಇಲ್ಲಿ ಸ್ಮರಿಸಬಹುದು.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.