ರಾಜ್ಯ ಕಾಂಗ್ರೆಸ್‌ ಸರ್ಕಾರದ 2ನೇ ವರ್ಷಾಚರಣೆ ಮುಂದಕ್ಕೆ: ಕಾರಣವೇನು?

Published : May 10, 2025, 08:07 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರದ 2ನೇ ವರ್ಷಾಚರಣೆ ಮುಂದಕ್ಕೆ: ಕಾರಣವೇನು?

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಎರಡು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮೇ 20ರಂದು ಕಲ್ಯಾಣ ಕರ್ನಾಟಕದ ಹೊಸಪೇಟೆಯಲ್ಲಿ ನಡೆಸಲುದ್ದೇಶಿಸಿದ್ದ ಸಾಧನಾ ಸಮಾವೇಶ ಮುಂದೂಡಲಾಗಿದೆ. 

ಬೆಂಗಳೂರು (ಮೇ.10): ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಎರಡು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮೇ 20ರಂದು ಕಲ್ಯಾಣ ಕರ್ನಾಟಕದ ಹೊಸಪೇಟೆಯಲ್ಲಿ ನಡೆಸಲುದ್ದೇಶಿಸಿದ್ದ ಸಾಧನಾ ಸಮಾವೇಶ ಮುಂದೂಡಲಾಗಿದೆ. ಭಾರತ ಹಾಗೂ ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಸಾಧನಾ ಸಮಾವೇಶ ಮುಂದೂಡಿರುವುದಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್‌ ಶುಕ್ರವಾರ ತಿಳಿಸಿದ್ದಾರೆ.

ರಾಜ್ಯ ಸರ್ಕಾರ ತನ್ನ ಎರಡು ವರ್ಷಗಳ ಸಾಧನೆ ಬಿಂಬಿಸುವ ಸಲುವಾಗಿ ವಿವಿಧ ಯೋಜನೆ ಫಲಾನುಭವಿಗಳು ಹಾಗೂ ಪಕ್ಷದ ಕಾರ್ಯಕರ್ತರು, ಸಾರ್ವಜನಿಕರನ್ನು ಸೇರಿಸಿ ಬೃಹತ್‌ ಸಮಾವೇಶ ನಡೆಸಲು ಸಿದ್ಧತೆ ನಡೆಸಿತ್ತು. ವಿಶೇಷವಾಗಿ ಕಂದಾಯ ಇಲಾಖೆ ಮೂಲಕ 1 ಲಕ್ಷ ಕುಟುಂಬಗಳಿಗೆ ಡಿಜಿಟಲ್‌ ಹಕ್ಕುಪತ್ರ ವಿತರಣೆ ಮೂಲಕ ಸಾಧನಾ ಸಮಾವೇಶದ ಹಿರಿಮೆ ಹೆಚ್ಚಿಸಲು ನಿರ್ಧರಿಸಲಾಗಿತ್ತು.

ಹಟ್ಟಿ, ತಾಂಡಾ, ಹಾಡಿ ಮತ್ತಿತರ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳಾಗಿ ಘೋಷಿಸಿ, ಅಲ್ಲಿನ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸುವ ಮೂಲಕ ‘ಸಿದ್ದರಾಮಯ್ಯ -2’ ಸರ್ಕಾರಕ್ಕೆ ಜನಪರ ಸರ್ಕಾರ ಎಂಬ ಸಂದೇಶ ಕೊಡಲು ಉದ್ದೇಶಿಸಲಾಗಿತ್ತು. ಅದಕ್ಕಾಗಿ ವಿಶೇಷವಾಗಿ, ಕಂದಾಯ ಇಲಾಖೆ ಹಾಗೂ ವಿಜಯನಗರ ಜಿಲ್ಲಾಡಳಿತಕ್ಕೆ ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಗಿತ್ತು. ಆದರೆ ಇದೀಗ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಆಪರೇಷನ್‌ ಸಿಂದೂರ ಕಾರ್ಯಾಚರಣೆ ಮುಂದುವರೆದಿದೆ. ಈ ಹಂತದಲ್ಲಿ ಸೈನಿಕರಿಗೆ ಬೆಂಬಲವಾಗಿ ನಿಲ್ಲುವ ಸಲುವಾಗಿ ಸಾಧನಾ ಸಮಾವೇಶ ಮುಂದೂಡಿರುವುದಾಗಿ ಮೂಲಗಳು ತಿಳಿಸಿವೆ.

ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ: ಸಚಿವ ಎಚ್‌.ಕೆ.ಪಾಟೀಲ್‌

ರಥೋತ್ಸವಕ್ಕೆ ಸಿದ್ದರಾಮಯ್ಯ ಚಾಲನೆ: ಜಯನಗರದ ಕನಕನಪಾಳ್ಯದಲ್ಲಿರುವ ಪ್ರಸಿದ್ಧ ಪಟಾಲಮ್ಮ ದೇವಿಯ ರಥೋತ್ಸವ, ಹೂವಿನ ಪಲ್ಲಕ್ಕಿ ಉತ್ಸವ, ಅಗ್ನಿಕೊಂಡೋತ್ಸವಕ್ಕೆ ಸಾವಿರಾರು ಭಕ್ತಾಧಿಗಳ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಕನಕನ ಪಾಳ್ಯದ ಪಟಾಲಮ್ಮ ದೇವಿಯ ಜಾತ್ರಾ ಮಹೋತ್ಸವದಲ್ಲಿ 10 ಸಾವಿರಕ್ಕೂ ಹೆಚ್ಚು ಮಹಿಳೆಯರು ದೀಪದಾರತಿ, ಬೆಲ್ಲ, ತಂಬಿಟ್ಟಿನ ಆರತಿಯೊಂದಿಗೆ ದೇವರ ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. 25ಕ್ಕೂ ಹೆಚ್ಚು ಜಾನಪದ ಕಲಾತಂಡಗಳ ಪ್ರದರ್ಶನ ಗಮನ ಸೆಳೆಯಿತು. ವಿವಿಧ ದೇವರುಗಳ ಪೂಜಾ ಕುಣಿತ ಉತ್ಸವಕ್ಕೆ ಮೆರುಗು ತಂದು ಕೊಟ್ಟವು. ರಾಜಬೀದಿ, ದೇವಾಲಯಗಳ ವಿದ್ಯುತ್‌ ದೀಪಾಲಂಕಾರ, ನೃತ್ಯಗಳು ಜನಮನ ಸೂರೆಗೊಳಿಸಿದವು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!