ಜನರನ್ನು ಯಾಮಾರಿಸಿದ್ದೇ ಬಿಜೆಪಿ ಸರ್ಕಾರದ ಸಾಧನೆ: ಸಚಿವ ಎಂ.ಸಿ.ಸುಧಾಕರ್

Published : Apr 10, 2024, 05:30 PM IST
ಜನರನ್ನು ಯಾಮಾರಿಸಿದ್ದೇ ಬಿಜೆಪಿ ಸರ್ಕಾರದ ಸಾಧನೆ: ಸಚಿವ ಎಂ.ಸಿ.ಸುಧಾಕರ್

ಸಾರಾಂಶ

ದೇಶದ ಜನರನ್ನು ಕಳೆದ ಹತ್ತು ವರ್ಷಗಳಿಂದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಯಾಮಾರಿಸಿಕೊಂಡು ಬಂದಿದ್ದೇ ಅವರ ಸಾಧನೆ ಅಂತವರಿಗೆ ಯಾವುದೇ ಕಾರಣಕ್ಕೂ ಮತ ಹಾಕಬೇಡಿ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.   

ಕೋಲಾರ (ಏ.10): ದೇಶದ ಜನರನ್ನು ಕಳೆದ ಹತ್ತು ವರ್ಷಗಳಿಂದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಯಾಮಾರಿಸಿಕೊಂಡು ಬಂದಿದ್ದೇ ಅವರ ಸಾಧನೆ ಅಂತವರಿಗೆ ಯಾವುದೇ ಕಾರಣಕ್ಕೂ ಮತ ಹಾಕಬೇಡಿ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು. ತಾಲೂಕಿನ ವೇಮಗಲ್ ಹೋಬಳಿಯ ಚೌಡದೇನಹಳ್ಳಿ ಮಾಜಿ ಕೃಷಿ ಸಚಿವ ದಿವಂಗತ ಸಿ.ಬೈರೇಗೌಡ ಸಮಾಧಿಗೆ ಭೇಟಿ ನೀಡಿ ವೇಮಗಲ್ ಪಟ್ಟಣದಲ್ಲಿನ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ಪರ ಪ್ರಚಾರ ನಡೆಸಿದರು.

ಬೆಲೆ ಏರಿಕೆ ನಿಯಂತ್ರಿಸಲಿಲ್ಲ: ಬಿಜೆಪಿ ಕೇವಲ ರಾಜಕೀಯ ಅಧಿಕಾರಕ್ಕಾಗಿ ಸುಳ್ಳು ಭರವಸೆಗಳನ್ನು ನೀಡಿ ಹತ್ತು ವರ್ಷ ಅಧಿಕಾರ ಅನುಭವಿಸಿದೆ. ದಿನನಿತ್ಯ ವಸ್ತುಗಳ ಬೆಲೆಏರಿಕೆ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿದ್ದು ಅಲ್ಲದೇ ದೇಶವನ್ನು ದಿವಾಳಿ ಮಾಡಿ ಭಾವನಾತ್ಮಕ ವಿಚಾರಗಳ ಬಗ್ಗೆ ಭಾಷಣಗಳನ್ನು ಮಾಡಿ ಯಾಮಾರಿಸಿದ್ದಾರೆ. ರೈತರು ದೆಹಲಿಯಲ್ಲಿ ಪ್ರತಿಭಟನೆ ಮಾಡುವ ಸಂದರ್ಭದಲ್ಲಿ ರೈತರ ಹಿತ ಕಾಯುವ ಕೆಲಸ ಮಾಡುವುದನ್ನು ಬಿಟ್ಟು ಕೇಂದ್ರ ಸರ್ಕಾರ ರೈತರ ಮೇಲೆ ಪೋಲೀಸರಿಂದ ಹಲ್ಲೆ ಮಾಡಿಸಿದ್ದರು ಎಂದು ಆರೋಪಿಸಿದರು.

‘ಗ್ಯಾರಂಟಿ’ಯಂತ ಮೋಸಕ್ಕೆ ಅವಕಾಶ ನೀಡದೆ ಮೋದಿ ಗೆಲ್ಲಿಸಿ: ಡಾ.ಕೆ.ಸುಧಾಕರ್‌

ರೈತರ ಹೋರಾಟವನ್ನು ಹತ್ತಿಕ್ಕುವ ಕೆಲಸವನ್ನು ಮಾಡಿದ್ದಾರೆ. ಕೇವಲ ರಾಜಕೀಯ ಅಧಿಕಾರಕ್ಕಾಗಿ ಜನರಲ್ಲಿ ಕೋಮು ಭಾವನೆಗಳನ್ನು ಮುಂದಿಟ್ಟುಕೊಂಡು ಕೋಮುಗಲಭೆ ಸೃಷ್ಟಿಸಿ ಅಧಿಕಾರ ಪಡೆದ ಬಿಜೆಪಿಗೆ ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಲಿಲ್ಲ ಆದರೆ ಕಾಂಗ್ರೆಸ್ ನೀಡಿದ್ದ ಭರವಸೆಗಳನ್ನು ಅಧಿಕಾರಕ್ಕೆ ಬಂದ ಕೂಡಲೇ ಕೇವಲ ಎಂಟು ತಿಂಗಳಲ್ಲಿ ೫ ಗ್ಯಾರೆಂಟಿಗಳನ್ನು ಈಡೇರಿಸಿದ್ದೇವೆ ಎಂದರು.

ಕಾಂಗ್ರೆಸ್‌ನ ೨೫ ಗ್ಯಾರಂಟಿ ಕಾರ್ಡು: ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ ಕಳೆದ ಚುನಾವಣೆಯಲ್ಲಿ ಮನೆ ಮನೆಗೆ ಗ್ಯಾರಂಟಿ ಯೋಜನೆಯ ಕಾರ್ಡುಗಳನ್ನು ವಿತರಣೆ ಮಾಡಿದ್ದೇವೆ ಅದರಂತೆ ೫ ಗ್ಯಾರಂಟಿ ಯೋಜನೆ ಅನುಷ್ಠಾನ ಗೊಳಿಸಲಾಗಿದೆ, ಅದರಂತೆ ಲೋಕಸಭಾ ಚುನಾವಣೆಗೆ ೨೫ ಗ್ಯಾರಂಟಿ ಕಾರ್ಡುಗಳಿಗೆ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಸಹಿ ಮಾಡಿದ್ದಾರೆ ಕಾಂಗ್ರೆಸ್ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಅಷ್ಟು ಗ್ಯಾರೆಂಟಿಗಳನ್ನು ಜಾರಿ ಮಾಡುತ್ತೇವೆ ಹಾಗಾಗಿ ಪ್ರತಿಯೊಬ್ಬರು ಕಾಂಗ್ರೇಸ್ ಪಕ್ಷಕ್ಕೆ ಮತ ನೀಡುವ ಮೂಲಕ ಅಭ್ಯರ್ಥಿ ಕೆ.ವಿ ಗೌತಮ್ ಅವರನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಬಡವರನ್ನು ಬೀದಿಗೆ ತಳ್ಳಿ ಶ್ರೀಮಂತರಿಗೆ ಅಧ್ಯತೆ ನೀಡಿದ್ದಾರೆ ದೇಶದಲ್ಲಿನ ಬಿಜೆಪಿ ಸರಕಾರವನ್ನು ಅಧಿಕಾರದಿಂದ ದೂರವಿಟ್ಟು ಬಡವರ ಪರವಾದ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರುವ ಸಮಯ ಬಂದಿದೆ, ಬಿಜೆಪಿ ಸರ್ಕಾರವನ್ನು ದೇಶದಿಂದ ತೊಲಗಿಸಿದರೇ ಮಾತ್ರ ಸಾಮಾನ್ಯ ಜನರಿಗೂ ಅಚ್ಚೇ ದಿನ್ ಬರುತ್ತೆ ಎಂದರು.

ದೇಶವನ್ನು ಕತ್ತಲೆಗೆ ನೂಕಿದ ಬಿಜೆಪಿ: ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ಮಾತನಾಡಿ, ಕಳೆದ ೧೦ ವರ್ಷದಲ್ಲಿ ದೇಶವನ್ನು ಕತ್ತಲೆಯ ಕೂಪಕ್ಕೆ ಬಿಜೆಪಿಯವರು ನೂಕಿದ್ದಾರೆ ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು ದೇಶದ ಭವಿಷ್ಯವನ್ನು ರೂಪಿಸಿಕೊಳ್ಳಲು ಇದೊಂದು ಸುವರ್ಣವಕಾಶ. ಹಾಗಾಗಿ ಪ್ರತಿಯೊಬ್ಬರು ಕಾಂಗ್ರೇಸ್ ಸರ್ಕಾರದ ೫ ಗ್ಯಾರೆಂಟಿ ಯೋಜನೆಗಳನ್ನು ಮನೆ ಮನೆಗೆ ತಲುಪಿಸಿ ಲೋಕಸಭಾ ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸುವ ಮೂಲಕ ಗೆಲ್ಲಿಸಿ, ನಾನು ನಿಮ್ಮ ಮನೆ ಮಗನಂತೆ ನಿಮ್ಮ ಸೇವೆ ಮಾಡುವೆ ಎಂದು ಮನವಿ ಮಾಡಿದರು.

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಘೋರ ಅನ್ಯಾಯ: ಸಚಿವ ಚಲುವರಾಯಸ್ವಾಮಿ ವಾಗ್ದಾಳಿ

ಎಂಎಲ್ಸಿ ಎಂ. ಎಲ್ ಅನಿಲ್ ಕುಮಾರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ್, ಮಾಜಿ ಸಭಾಪತಿ ವಿ.ಆರ್.ಸುದರ್ಶನ್, ಮುಖಂಡರಾದ ನಾಗನಾಳ ಸೋಮಣ್ಣ, ಮುನಿಆಂಜಪ್ಪ, ವಕ್ಕಲೇರಿ ರಾಜಪ್ಪ, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ಕೆ.ವಿ.ದಯಾನಂದ್, ಚಂಜಿಮಲೆ ರಮೇಶ್, ಮೈಲಾಂಡಹಳ್ಳಿ ಮುರಳಿ, ಮುನಿಯಪ್ಪ ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕರ್ನಾಟಕಕ್ಕೆ ಮಹಾತ್ಮ ಗಾಂಧಿ ನರೇಗಾ ಯೋಜನೆ 5 ಕೋಟಿ ಮಾನವ ದಿನ ಕಡಿತ; ಪ್ರಿಯಾಂಕ್ ಖರ್ಗೆ ಆರೋಪ
ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?