ಸಾಲ ಮಾಡೋದ್ರಲ್ಲಿ ದಾಖಲೆ ವೀರ ಸಿದ್ದರಾಮಯ್ಯ: ಬಸವರಾಜ ಬೊಮ್ಮಾಯಿ ವಾಗ್ದಾಳಿ

Kannadaprabha News   | Kannada Prabha
Published : Apr 02, 2026, 10:01 AM IST
The battle for the CM s seat will begin in May Bommai prediction challenge to the CM

ಸಾರಾಂಶ

ದಾವಣಗೆರೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮೇ ತಿಂಗಳಲ್ಲಿ ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ಮತ್ತೆ ಜಂಗಿ ಕುಸ್ತಿ ಶುರುವಾಗಲಿದೆ ಎಂದು ಭವಿಷ್ಯ ನುಡಿದರು. ಸಾಲ ಮಾಡುವುದರಲ್ಲಿ ಸಿದ್ದರಾಮಯ್ಯ ದಾಖಲೆ ವೀರ, ತಮ್ಮ ಹಾಗೂ ಸಿದ್ದರಾಮಯ್ಯ ಕಾಲದ ಸಾಲದ ಬಗ್ಗೆ ಶ್ವೇತಪತ್ರ ಹೊರಡಿಸಲಿ ಎಂದು ಸವಾಲು ಹಾಕಿದರು..

ದಾವಣಗೆರೆ (ಏ.2): ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳ ಉಪ ಚುನಾವಣೆ ಕಾರಣಕ್ಕೆ ರಾಜ್ಯದಲ್ಲಿ ಕುರ್ಚಿ ಕದನಕ್ಕೆ ತಾತ್ಕಾಲಿಕ ವಿರಾಮ ಸಿಕ್ಕಿದ್ದು, ಮೇ ತಿಂಗಳಲ್ಲಿ ಸಿಎಂ ಕುರ್ಚಿಗಾಗಿ ರಾಜ್ಯದಲ್ಲಿ ಜಂಗಿ ನಿಕಾಲಿ ಕುಸ್ತಿ ಶುರುವಾಗಲಿದೆ ಎಂದು ಸಂಸದ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ಕಾಲೆಳೆದಿದ್ದಾರೆ. 

ನಗರದಲ್ಲಿ ನಡೆದ ಸಭೆಯೊಂದರಲ್ಲಿ ಮಾತನಾಡಿದ ಅವರು, ಮೇ ತಿಂಗಳಿನಲ್ಲಿ ಮತ್ತೆ ರಾಜ್ಯದಲ್ಲಿ ಕುರ್ಚಿಗಾಗಿ ಜಂಗಿ ನಿಖಾಲಿ ಕುಸ್ತಿ ಶುರುವಾಗಲಿದೆ. ಸದ್ಯಕ್ಕೆ ಕುರ್ಚಿ ಕುಸ್ತಿಗೆ ಉಪ ಚುನಾವಣೆ ಕಾರಣಕ್ಕೆ ವಿರಾಮ ಸಿಕ್ಕಿದೆಯಷ್ಟೇ ಎಂದರು. ದಕ್ಷಿಣ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ ದಾಸಕರಿಯಪ್ಪ ಅವರನ್ನು ಕಣಕ್ಕಿಳಿಸಿದ್ದೇವೆ. ನಿಮ್ಮ ಆರಾಧ್ಯದೈವ ಶ್ರೀನಿವಾಸನ ಹೆಸರಿನ ಶ್ರೀನಿವಾಸನೇ ನಮ್ಮ ಅಭ್ಯರ್ಥಿ. ನಿಮ್ಮ ಮತವನ್ನು ಶ್ರೀನಿವಾಸನಿಗೆ ನೀಡಿ ಎಂದು ಅವರು ತಿಳಿಸಿದರು.

ಸಾಲ ಮಾಡುವುದರಲ್ಲಿ ದಾಖಲೆ ವೀರ ಸಿದ್ದರಾಮಯ್ಯ:

ಬಳಿಕ, ಸುದ್ದಿಗಾರರ ಜೊತೆ ಮಾತನಾಡಿ, ಸಾಲ ಮಾಡುವುದರಲ್ಲಿ ದಾಖಲೆಯ ವೀರನಾದ ಸಿದ್ದರಾಮಯ್ಯ, ಯಾರ ಅವಧಿಯಲ್ಲಿ ಎಷ್ಟು ಸಾಲ ಮಾಡಲಾಗಿದೆಯೆಂಬ ಬಗ್ಗೆ ಎಲ್ಲ ದಾಖಲೆಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು.

ವಾಸ್ತವಾಂಶಗಳನ್ನು ಮರೆಮಾಚಿ, ತಮ್ಮ ತಪ್ಪುಗಳನ್ನು ಸಮರ್ಥಿಸಿಕೊಳ್ಳುವ ಪರಿಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು. ನಮ್ಮ ಕಾಲದಲ್ಲಿ ಎಷ್ಟು ಸಾಲ ಮಾಡಿದ್ದೆವು, ಸಿದ್ದರಾಮಯ್ಯ ಕಾಲದಲ್ಲಿ ಎಷ್ಟು ಸಾಲ ಮಾಡಿದ್ದಾರೆಂಬ ಬಗ್ಗೆ ದಾಖಲೆಗಳನ್ನು ಬಹಿರಂಗ ಮಾಡಲಿ. ನಮ್ಮ ಕಾಲದಲ್ಲಿ ₹50 ಸಾವಿರ ಕೋಟಿ ಸಾಲ ಮಾಡಿದ್ದರೆ, ಸಿದ್ದರಾಮಯ್ಯ ಅವಧಿಯಲ್ಲಿ ₹1.40 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಸ್ವತಃ ಸಿದ್ದರಾಮಯ್ಯನವರೇ ಬಜೆಟ್ ಮಂಡಿಸಿದ್ದಾರೆ ಎಂದು ಅವರು ಟೀಕಿಸಿದರು.

ಉಪ ಚುನಾವಣೆಗಳು ನಡೆಯುತ್ತಿವೆಯೆಂಬ ಕಾರಣಕ್ಕೆ ಈಗ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ. ಮುಖ್ಯಮಂತ್ರಿಗೆ ಇಂತಹ ಪರಿಸ್ಥಿತಿ ಬರಬಾರದಿತ್ತು. ವಾಸ್ತವಾಂಶಗಳನ್ನು ಮರೆಮಾಚಿ, ತಮ್ಮನ್ನು ತಾವು ಸಮರ್ಥಿಸಿಕೊಳ್ಳುವ ಸ್ಥಿತಿಗೆ ಸಿದ್ದರಾಮಯ್ಯ ತಲುಪಿದ್ದಾರೆ. ವಾಸ್ತವಾಂಶ ಏನಿದೆ ಎಂಬುದರ ಮೇಲೆ ಮಾತನಾಡಬೇಕು ಎಂದು ಸಿಎಂಗೆ ಸಲಹೆ ನೀಡಿದರು.

ರಾಜ್ಯದ ಆರ್ಥಿಕ ಪರಿಸ್ಥಿತಿ ಕುರಿತಂತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿಕೆಗೆ ಸಿದ್ದರಾಮಯ್ಯ ಉತ್ತರ ಕೊಟ್ಟಿದ್ದಾರೆ. ಆರ್ಥಿಕವಾಗಿ ಸುಭದ್ರವಾಗಿದ್ದರೆ ₹15 ಸಾವಿರ ಕೋಟಿಯನ್ನು ಯಾಕೆ ಖರ್ಚು ಮಾಡಿಲ್ಲ?. ಸುಳ್ಳುಗಳನ್ನೇ ನೂರು ಸಲ ಹೇಳಿ, ಅದನ್ನು ಸತ್ಯ ಮಾಡಲು ಹೊರಟಿದ್ದಾರೆ ಎಂದು ಟೀಕಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕೇರಳವನ್ನು ಕಾಂಗ್ರೆಸ್ ಮುಕ್ತ ಮಾಡಲು ರಾಹುಲ್ ಪ್ರಯತ್ನ: ರಾಜೀವ್ ಚಂದ್ರಶೇಖರ್ ವ್ಯಂಗ್ಯ
ನಾನು ಸಾಲರಾಮಯ್ಯ ಅಲ್ಲ, ನಾನು ಅನ್ನದ ರಾಮಯ್ಯ; ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು