ಬೆಳಗಾವಿ ಕ್ಷೇತ್ರದ ಜನರ ಉಪಕಾರ ಮರೆಯಲು ಸಾಧ್ಯವಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ

By Kannadaprabha News  |  First Published Jun 19, 2023, 10:43 PM IST

ಸಾಮಾಜಿಕ ಮತ್ತು ರಾಜಕೀಯವಾಗಿ ಎಷ್ಟೇ ಎತ್ತರದ ಸ್ಥಾನಕ್ಕೆ ಏರಿದರೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನರ ಉಪಕಾರ ಮರೆಯಲು ಸಾಧ್ಯವಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು. 


ಬೆಳಗಾವಿ (ಜೂ.19): ಸಾಮಾಜಿಕ ಮತ್ತು ರಾಜಕೀಯವಾಗಿ ಎಷ್ಟೇ ಎತ್ತರದ ಸ್ಥಾನಕ್ಕೆ ಏರಿದರೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನರ ಉಪಕಾರ ಮರೆಯಲು ಸಾಧ್ಯವಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮದಲ್ಲಿ ಭಾನುವಾರ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು ಹಾಗೂ ಮತದಾರರ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನಗೆ ರಾಜಕೀಯ ಜನ್ಮ ನೀಡಿದ್ದು ಬೆಳಗಾವಿ ಗ್ರಾಮೀಣ ಕ್ಷೇತ್ರ. ಕಳೆದ 5 ವರ್ವಷಗಳಿಂದ ಕ್ಷೇತ್ರಕ್ಕೆ ನನ್ನಿಂದಾದಷ್ಟುಕೆಲಸ ಮಾಡಿದ್ದೇನೆ. ಈಗ ಸಚಿವ ಸ್ಥಾನ ಸಿಕ್ಕಿರುವುದರಿಂದ ಇನ್ನಷ್ಟುಹೆಚ್ಚು ಅಭಿವೃದ್ಧಿ ಯೋಜನೆಗಳನ್ನು ಕ್ಷೇತ್ರಕ್ಕೆ ತರಲು ಸಹಾಯವಾಗಿದೆ. 

ಈ ಸ್ಥಾನ ದೊರಕಲು ಪಕ್ಷದ ವರಿಷ್ಠರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಅಷ್ಟೇ ಮುಖ್ಯವಾಗಿ ಗ್ರಾಮೀಣ ಕ್ಷೇತ್ರದ ಜನರು ಕಾರಣ. ಹಾಗಾಗಿ ನಿಮ್ಮ ಋುಣ ತೀರಿಸಲು ಸಾಧ್ಯವಿಲ್ಲ ಎಂದರು. ಕಾಂಗ್ರೆಸ್‌ ಸರ್ಕಾರ ಚುನಾವಣೆಗೂ ಮುನ್ನ ನೀಡಿದ ಎಲ್ಲ ಆಶ್ವಾಸನೆಗಳನ್ನು ಹಂತ,ಹಂತವಾಗಿ ಈಡೇರಿಸಲಿದೆ. ಈ ಬಗ್ಗೆ ಯಾರಿಗೂ ಗೊಂದಲ, ಅನುಮಾನ ಬೇಡ. ಯೋಜನೆಗಳು ಆರಂಭವಾದ ನಂತರ ಸಮಸ್ಯೆಗಳು ಬರಬಾರದೆನ್ನುವ ಕಾರಣಕ್ಕೆ ಕೆಲ ದಿನ ವಿಳಂಬವಾಗುತ್ತಿದೆ. ಇದಕ್ಕೆ ಯಾವುದೇ ಅಪಾರ್ಥ ಬೇಡ. ಕಾಂಗ್ರೆಸ್‌ ಎಂದೂ ಕೊಟ್ಟಮಾತು ತಪ್ಪುವುದಿಲ್ಲ ಎಂದರು. ಕಾಂಗ್ರೆಸ್‌ ಪಕ್ಷದ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೇ, ಶಕ್ತಿ, ಅನ್ನಭಾಗ್ಯ ಮತ್ತಿತರ ಯೋಜನೆಗಳು ಮಹಿಳೆಯರನ್ನು ಸಬಲೀಕರಣದತ್ತ ಕೊಂಡೊಯ್ಯಲಿವೆ. 

Tap to resize

Latest Videos

ಸಾರ್ವಜನಿಕರಿಗೆ ತೊಂದರೆ ಆಗದಂತೆ ಕಾರ್ಯನಿರ್ವಹಿಸಿ: ಅಧಿಕಾರಿಗಳಿಗೆ ಸಚಿವ ಮಹದೇವಪ್ಪ ಸೂಚನೆ

ಮಹಿಳೆಯರಲ್ಲಿ ಶಕ್ತಿ ತುಂಬಲೆಂದೇ ಇಂಥ ಯೋಜನೆಗಳನ್ನು ರೂಪಿಸಲಾಗಿದೆ. ಗೃಹಲಕ್ಷ್ಮೀ ನನ್ನ ಇಲಾಖೆಗೆ ಸಂಬಂಧಿಸಿರುವುದರಿಂದ ಇದು ಮಹಿಳೆಯರಿಗೆ ಅತೀ ಹೆಚ್ಚು ಪ್ರಯೋಜನಕಾರಿಯಾಗಿದ್ದು, ಈ ಯೋಜನೆ ಮೂಲಕ ಮಹಿಳೆಯರ ಮುಖದಲ್ಲಿ ಸಂತಸ ಮೂಡಿಸಲು ನನಗೆ ಬಹಳ ಹೆಮ್ಮೆ ಎನಿಸುತ್ತದೆ. ಮುಂದಿನ ದಿನಗಳಲ್ಲೂ ಕ್ಷೇತ್ರದ ಸಮಗ್ರ ಅಭಿವೃದ್ಧಿ, ಜನಕಲ್ಯಾಣಕ್ಕೆ ಜನತೆ ಸಹಕಾರ ಅಗತ್ಯವಾಗಿದೆ ಎಂದು ತಿಳಿಸಿದರು. ಈ ವೇಳೆ ವಿಧಾನ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ, ಗ್ರಾಮಸ್ಥರು ಹಾಗೂ ಪಕ್ಷದ ಕಾರ್ಯಕರ್ತರು ಸಚಿವೆ ಲಕ್ಷ್ಮೇ ಹೆಬ್ಬಾಳಕರ ಅವರನ್ನು ಸನ್ಮಾನಿಸಿದರು. ಸ್ಥಳೀಯ ಮುಖಂಡರು, ಮಹಿಳೆಯರು ಕಾರ್ಯಕ್ರಮದಲ್ಲಿ ಇದ್ದರು.

ಕ್ಷೇತ್ರದ ಜನರ ಉಪಕಾರ ಮರೆಯಲು ಸಾಧ್ಯವಿಲ್ಲ: ಸಾಮಾಜಿಕ ಮತ್ತು ರಾಜಕೀಯವಾಗಿ ಎಷ್ಟೇ ಎತ್ತರದ ಸ್ಥಾನಕ್ಕೆ ಏರಿದರೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನರ ಉಪಕಾರ ಮರೆಯಲು ಸಾಧ್ಯವಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೇ ಹೆಬ್ಬಾಳಕರ ಹೇಳಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮದಲ್ಲಿ ಭಾನುವಾರ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು ಹಾಗೂ ಮತದಾರರ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನಗೆ ರಾಜಕೀಯ ಜನ್ಮ ನೀಡಿದ್ದು ಬೆಳಗಾವಿ ಗ್ರಾಮೀಣ ಕ್ಷೇತ್ರ. ಕಳೆದ 5 ವರ್ವಷಗಳಿಂದ ಕ್ಷೇತ್ರಕ್ಕೆ ನನ್ನಿಂದಾದಷ್ಟುಕೆಲಸ ಮಾಡಿದ್ದೇನೆ. 

ಈಗ ಸಚಿವ ಸ್ಥಾನ ಸಿಕ್ಕಿರುವುದರಿಂದ ಇನ್ನಷ್ಟು ಹೆಚ್ಚು ಅಭಿವೃದ್ಧಿ ಯೋಜನೆಗಳನ್ನು ಕ್ಷೇತ್ರಕ್ಕೆ ತರಲು ಸಹಾಯವಾಗಿದೆ. ಈ ಸ್ಥಾನ ದೊರಕಲು ಪಕ್ಷದ ವರಿಷ್ಠರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಅಷ್ಟೇ ಮುಖ್ಯವಾಗಿ ಗ್ರಾಮೀಣ ಕ್ಷೇತ್ರದ ಜನರು ಕಾರಣ. ಹಾಗಾಗಿ ನಿಮ್ಮ ಋುಣ ತೀರಿಸಲು ಸಾಧ್ಯವಿಲ್ಲ ಎಂದರು. ಕಾಂಗ್ರೆಸ್‌ ಸರ್ಕಾರ ಚುನಾವಣೆಗೂ ಮುನ್ನ ನೀಡಿದ ಎಲ್ಲ ಆಶ್ವಾಸನೆಗಳನ್ನು ಹಂತ,ಹಂತವಾಗಿ ಈಡೇರಿಸಲಿದೆ. ಈ ಬಗ್ಗೆ ಯಾರಿಗೂ ಗೊಂದಲ, ಅನುಮಾನ ಬೇಡ. ಯೋಜನೆಗಳು ಆರಂಭವಾದ ನಂತರ ಸಮಸ್ಯೆಗಳು ಬರಬಾರದೆನ್ನುವ ಕಾರಣಕ್ಕೆ ಕೆಲ ದಿನ ವಿಳಂಬವಾಗುತ್ತಿದೆ. ಇದಕ್ಕೆ ಯಾವುದೇ ಅಪಾರ್ಥ ಬೇಡ. ಕಾಂಗ್ರೆಸ್‌ ಎಂದೂ ಕೊಟ್ಟಮಾತು ತಪ್ಪುವುದಿಲ್ಲ ಎಂದರು.

ಚಾಮರಾಜನಗರ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವೆ: ಶಾಸಕ ಪುಟ್ಟರಂಗಶೆಟ್ಟಿ

ಕಾಂಗ್ರೆಸ್‌ ಪಕ್ಷದ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೇ, ಶಕ್ತಿ, ಅನ್ನಭಾಗ್ಯ ಮತ್ತಿತರ ಯೋಜನೆಗಳು ಮಹಿಳೆಯರನ್ನು ಸಬಲೀಕರಣದತ್ತ ಕೊಂಡೊಯ್ಯಲಿವೆ. ಮಹಿಳೆಯರಲ್ಲಿ ಶಕ್ತಿ ತುಂಬಲೆಂದೇ ಇಂಥ ಯೋಜನೆಗಳನ್ನು ರೂಪಿಸಲಾಗಿದೆ. ಗೃಹಲಕ್ಷ್ಮೇ ನನ್ನ ಇಲಾಖೆಗೆ ಸಂಬಂಧಿಸಿರುವುದರಿಂದ ಇದು ಮಹಿಳೆಯರಿಗೆ ಅತೀ ಹೆಚ್ಚು ಪ್ರಯೋಜನಕಾರಿಯಾಗಿದ್ದು, ಈ ಯೋಜನೆ ಮೂಲಕ ಮಹಿಳೆಯರ ಮುಖದಲ್ಲಿ ಸಂತಸ ಮೂಡಿಸಲು ನನಗೆ ಬಹಳ ಹೆಮ್ಮೆ ಎನಿಸುತ್ತದೆ. ಮುಂದಿನ ದಿನಗಳಲ್ಲೂ ಕ್ಷೇತ್ರದ ಸಮಗ್ರ ಅಭಿವೃದ್ಧಿ, ಜನಕಲ್ಯಾಣಕ್ಕೆ ಜನತೆ ಸಹಕಾರ ಅಗತ್ಯವಾಗಿದೆ ಎಂದು ತಿಳಿಸಿದರು.

click me!