ಮಾದಪ್ಪನ ಸನ್ನಿಧಾನದಲ್ಲಿ ನಡೆಯಬೇಕಿದ್ದ ಸಂಪುಟ ಸಭೆ 3ನೇ ಬಾರಿಗೆ ಮುಂದೂಡಿಕೆ?: ಕಾರಣವೇನು?

Published : Feb 12, 2025, 09:18 PM ISTUpdated : Feb 12, 2025, 09:20 PM IST
ಮಾದಪ್ಪನ ಸನ್ನಿಧಾನದಲ್ಲಿ ನಡೆಯಬೇಕಿದ್ದ ಸಂಪುಟ ಸಭೆ 3ನೇ ಬಾರಿಗೆ ಮುಂದೂಡಿಕೆ?: ಕಾರಣವೇನು?

ಸಾರಾಂಶ

ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆಯಬೇಕಿದ್ದ ಸಚಿವ ಸಂಪುಟ ಸಭೆ ಮೂರನೇ ಬಾರಿಗೆ ಮುಂದಕ್ಕೆ ಹೋಗಿದೆ. ಈಗಾಗಲೇ ಜಿಲ್ಲಾಡಳಿತ ಹಾಗೂ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದಿಂದ ಸಿದ್ದತಾ ಕಾರ್ಯ ಜೋರಾಗಿ ನಡೆದಿತ್ತು. 

ವರದಿ: ಪುಟ್ಟರಾಜು.ಆರ್.ಸಿ, ಏಷಿಯಾನೆಟ್ ಸುವರ್ಣ ನ್ಯೂಸ್, ಚಾಮರಾಜನಗರ

ಚಾಮರಾಜನಗರ (ಫೆ.12): ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆಯಬೇಕಿದ್ದ ಸಚಿವ ಸಂಪುಟ ಸಭೆ ಮೂರನೇ ಬಾರಿಗೆ ಮುಂದಕ್ಕೆ ಹೋಗಿದೆ. ಈಗಾಗಲೇ ಜಿಲ್ಲಾಡಳಿತ ಹಾಗೂ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದಿಂದ ಸಿದ್ದತಾ ಕಾರ್ಯ ಜೋರಾಗಿ ನಡೆದಿತ್ತು. ಮೂರನೇ ಬಾರಿಗೆ ಸಂಪುಟ ಸಭೆಯ ಬದಲಾದ ಬೆನ್ನಲ್ಲೇ ಸಚಿವ ಸಂಪುಟ ಸಭೆ ಚಾಮರಾಜನಗರದಲ್ಲಿ ನಡೆಯುತ್ತಾ ಅಥವಾ ನಡೆಯೊದಿಲ್ವಾ ಅನ್ನೋ ಚರ್ಚೆ ಸಾರ್ವಜನಿಕ ವಲಯದಲ್ಲಿ ಜೋರಾಗ್ತಿದೆ.ಈ ಕುರಿತು ಒಂದು ಸ್ಟೋರಿ ನೋಡಿ.

ಗಡಿ ಜಿಲ್ಲೆ ಚಾಮರಾಜನಗರ ಹೇಳಿ ಕೇಳಿ ಮೊದಲೇ ಹಿಂದುಳಿದ ಜಿಲ್ಲೆ.ಮೂಲಭೂತ ಸೌಕರ್ಯದ ಕೊರತೆ ಸಾಕಷ್ಟಿದೆ.ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಚಾಮರಾಜನಗರದಲ್ಲಿ ಸಚಿವ ಸಂಪುಟ ನಡೆಸಲು ಸರ್ಕಾರ ನಿರ್ಧರಿಸಿತ್ತು. ಇದಕ್ಕೆ ಈಗಾಗಲೇ ಮೂರು ಬಾರಿ ದಿನಾಂಕ ಕೂಡ ನಿಗದಿಯಾಗಿತ್ತು. ಆದ್ರೆ ಮೂರು ಬಾರಿಯೂ ಕೂಡ ದಿನಾಂಕ ಬದಲಾಗುತ್ತಲೇ ಇದೆ.ಜಿಲ್ಲೆಯ ಪವಿತ್ರ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಿಗದಿಯಾಗಿತ್ತು. ಜನರು ವಿದ್ಯುತ್, ಕುಡಿಯುವ  ನೀರು  ಸೇರಿದಂತೆ  ಮೂಲಭೂತ  ಸೌಕರ್ಯ  ನಿರೀಕ್ಷೆ ಹೊಂದಿದ್ದರು. ಅಲ್ಲದೇ ಜಿಲ್ಲೆಯ ಅಭಿವೃದ್ಧಿ ಸಂಬಂಧ ಈ ಒಂದು ಕ್ಯಾಬಿನೆಟ್ ಸಭೆ ವೇಳೆ ವಿಶೇಷ ಪ್ಯಾಕೇಜ್ ಘೋಷಿಸುವ ಬಗ್ಗೆ ಜನರಲ್ಲಿ ಭರವಸೆಯಿತ್ತು. 

ಆದ್ರೆ ಇದೀಗಾ ಮೂರನೇ ಬಾರಿಗೆ ಸಚಿವ ಸಂಪುಟ ಮುಂದೂಡಿಕೆಯಾಗಿರುವುದರಿಂದ ಜಿಲ್ಲೆಗೆ ಸಾಕಷ್ಟು ಅನುದಾನ ಕೊಡುವ ಅನಿವಾರ್ಯತೆ ಎದುರಾಗುವ ದೃಷ್ಟಿಯಿಂದ ಸರ್ಕಾರ ಪದೇ ಪದೇ ದಿನಾಂಕ ಬದಲಾವಣೆ ಮಾಡ್ತಿದೆ. ಇದು ಸರ್ಕಾರ ಚಾಮರಾಜನಗರ ಜಿಲ್ಲೆಯ ಜನರಿಗೆ ಮಾಡ್ತಿರುವ ಮೋಸ ಅಂತಾ ಸಾರ್ವಜನಿಕರು, ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇನ್ನೂ ಫೆ 16 ರಂದು ಚಾಮರಾಜನಗರದಲ್ಲಿ ಸಮಾವೇಶ ಹಾಗೂ ಫೆ 17 ರಂದು ಸಚಿವ ಸಂಪುಟ ಸಭೆ ನಡೆಸಲು ದಿನಾಂಕ ಕೂಡ ಪೈನಲ್ ಆಗಿತ್ತು. ಇದಕ್ಕೆ ಮುಂಚೆ ಎರಡು ಬಾರಿ ದಿನಾಂಕ ಕೂಡ ಬದಲಾಗಿತ್ತು. ಇದು ಸೇರಿ ಮೂರನೇ ಬಾರಿಗೆ ದಿನಾಂಕ ಕೂಡ ಬದಲಾವಣೆಯಾಗಿದೆ. 

ಗಾಂಜಾ ಸೇವನೆಯ ಅಡ್ಡೆ ಆಯ್ತಾ ಪಾಳು ಬಿದ್ದ ಶಿವನ ದೇವಾಲಯ?: ಇಲ್ಲಿ ಹೇಳೋರು ಇಲ್ಲ ಕೇಳೋರು ಇಲ್ಲ!

ಮತ್ತೇ ನಮಗೆ ಮಾರ್ಚ್ 8 ರಂದು ಸಚಿವ ಸಂಪುಟ ಸಭೆ ಹಾಗೂ ಮಾರ್ಚ್  9 ರಂದು ಚಾಮರಾಜನಗರದಲ್ಲಿ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ ಎಂದು ಚಾಮರಾಜನಗರ ಡಿಸಿ ಶಿಲ್ಪಾನಾಗ್ ತಿಳಿಸಿದ್ದಾರೆ. ಒಟ್ನಲ್ಲಿ ಚಾಮರಾಜನಗರಕ್ಕೆ ಬಂದ್ರೆ ಅಧಿಕಾರ ಹೋಗುತ್ತೆ ಎಂಬ ಭಯ ರಾಜ್ಯದ ಬಹುತೇಕ ಮುಖ್ಯಮಂತ್ರಿಗಳಿತ್ತು. ಆ ಮೌಢ್ಯಕ್ಕೆ ಸೆಡ್ಡು ಹೊಡೆದಿದ್ದ ಸಿಎಂ ಸಿದ್ದರಾಮಯ್ಯ ಸಾಕಷ್ಟು ಬಾರಿ ಜಿಲ್ಲೆಗೆ ಎಂಟ್ರಿ ಕೊಟ್ಟಿದ್ದಾರೆ. ಪದೇ ಪದೇ ದಿನಾಂಕ ಬದಲಾಗುತ್ತಿರುವುದ್ಯಾಕೆ? ಬಜೆಟ್ ಅಧಿವೇಶನ  ಮಾರ್ಚ್‌ನಲ್ಲಿ  ನಡೆಯುವ  ಸಾಧ್ಯತೆ  ಹಿನ್ನಲೆ  ಮುಂದೆ ನಿಗಧಿಯಾಗಿರುವ ದಿನಾಂಕದಲ್ಲಾದರೂ  ಸಚಿವ  ಸಂಪುಟ  ನಡೆಯುತ್ತಾ ಅಥವಾ  ಇಲ್ವಾ ಅನ್ನೋ  ಜಿಜ್ಞಾಸೆ ಎಲ್ಲರನ್ನೂ ಕಾಡ್ತಿರೋದು ಮಾತ್ರ ಸುಳ್ಳಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ರೈತರ ಬೆಳೆಗಳಿಗೆ ಮಾರುಕಟ್ಟೆ ಕಲ್ಪಿಸಲು 'ಅಂತಾರಾಷ್ಟ್ರೀಯ ಸ್ಯಾಂಡ್‌ವಿಚ್ ಸ್ನಾತಕೋತ್ತರ ಕೋರ್ಸ್': ಸಿಎಂ ಸಿದ್ದರಾಮಯ್ಯ