ನಮ್ಮ ಸರ್ಕಾರ ಮನಸ್ಸು ಮಾಡಿದ್ದರೆ ಲೋಕಾಯುಕ್ತ ದಾಳಿಯಲ್ಲಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ವಿರುದ್ಧದ ಪ್ರಕರಣ ದಾಖಲಾಗುವುದನ್ನು ತಡೆಯಬಹುದಿತ್ತು. ಆದರೆ, ಹಾಗೆ ಮಾಡಲಿಲ್ಲ. ನಾವು ಯಾವತ್ತಿದ್ದರೂ ಭ್ರಷ್ಟಾಚಾರದ ವಿರುದ್ಧ ಎಂದು ಕೇಂದ್ರ ಸಂಸದೀಯ ವ್ಯವಹಾರ ಖಾತೆ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದರು.
ಬಾಳೆಹೊನ್ನೂರು/ಹುಬ್ಬಳ್ಳಿ (ಮಾ.6) : ನಮ್ಮ ಸರ್ಕಾರ ಮನಸ್ಸು ಮಾಡಿದ್ದರೆ ಲೋಕಾಯುಕ್ತ ದಾಳಿಯಲ್ಲಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ವಿರುದ್ಧದ ಪ್ರಕರಣ ದಾಖಲಾಗುವುದನ್ನು ತಡೆಯಬಹುದಿತ್ತು. ಆದರೆ, ಹಾಗೆ ಮಾಡಲಿಲ್ಲ. ನಾವು ಯಾವತ್ತಿದ್ದರೂ ಭ್ರಷ್ಟಾಚಾರದ ವಿರುದ್ಧ ಎಂದು ಕೇಂದ್ರ ಸಂಸದೀಯ ವ್ಯವಹಾರ ಖಾತೆ ಸಚಿವ ಪ್ರಹ್ಲಾದ್ ಜೋಶಿ(Pralhad Joshi) ಆರೋಪಿಸಿದರು.
ಚಿಕ್ಕಮಗಳೂರಿನ(Chikkamagaluru) ಬಾಳೆಹೊನ್ನೂರು ರಂಭಾಪುರಿ ಪೀಠ(Balehonnur rambhapuri peetha)ದ ಆವರಣ ಹಾಗೂ ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರ ಜತೆಗೆ ಮಾತನಾಡಿ, ಆಡಳಿತಾರೂಢ ಪಕ್ಷದ ಶಾಸಕನ ಪುತ್ರನ ಮೇಲೆ ಲೋಕಾಯುಕ್ತ ದಾಳಿ(Karnataka lokayukta raid)ಯಾಗಿದೆ ಎಂದರೆ ಅದು ನಮ್ಮ ಸರ್ಕಾರದ ಪಾರದರ್ಶಕತೆ ತೋರಿಸುತ್ತದೆ. ತಪ್ಪು ಮಾಡಿದ್ದರೆ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮಕೈಗೊಳ್ಳಲಾಗುತ್ತದೆ ಎಂದರು.
ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಜಾರಿಗೆ ತರಲ್ಲ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಕಾಂಗ್ರೆಸ್‌ಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ. ದೇಶದಲ್ಲಿ ಭ್ರಷ್ಟಾಚಾರದ ರಕ್ತ ಬೀಜಾಸುರನನ್ನು ಉತ್ಪಾದನೆ ಮಾಡಿದ್ದೇ ಕಾಂಗ್ರೆಸ್ ಪಕ್ಷ. ಈ ಹಿಂದೆ ಕಾಂಗ್ರೆಸ್ ಲೋಕಾಯುಕ್ತವನ್ನು ಹಲ್ಲಿಲ್ಲದ ಹಾವು ಮಾಡಿತ್ತು. ಇದೀಗ ನಮ್ಮ ಕಾಲದಲ್ಲಿ ಲೋಕಾಯುಕ್ತವನ್ನು ಬಲಗೊಳಿಸಲಾಗಿದೆ. ಲೋಕಾಯುಕ್ತಕ್ಕೆ ಪೂರ್ಣ ಅಧಿಕಾರ ಕೊಟ್ಟಿದ್ದೇ ನಮ್ಮ ಸರ್ಕಾರ. ಯಾರು ಕಳಂಕಿತರಿರುತ್ತಾರೆ ಅವರ ವಿರುದ್ಧ ಕ್ರಮ ಆಗಲಿದೆ. ಭ್ರಷ್ಟಾಚಾರ ಮಾಡಿದವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದರು.
ಸುಮಲತಾಗೆ ಬಿಜೆಪಿ ಪರ ಒಲವಿದೆ: ಸಚಿವ
ಮಂಡ್ಯ ಸಂಸದೆ ಸುಮಲತಾ(MP Sumalata) ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದಿದ್ದರು. ಲೋಕಸಭೆಯಲ್ಲಿ ಅವರು ಬಿಜೆಪಿಗೆ ಬೆಂಬಲ ನೀಡಿದ್ದಾರೆ. ನಮ್ಮ ಪರ ಮತ ಚಲಾವಣೆ ಮಾಡಿದ್ದರು. ಅವರಿಗೆ ಬಿಜೆಪಿ ಪರ ಒಲವಿದೆ. ಮುಂದಿನ ದಿನಗಳಲ್ಲಿ ಎಲ್ಲವೂ ಸ್ಪಷ್ಟವಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಭ್ರಷ್ಟಾಚಾರ ಹುಟ್ಟು ಹಾಕಿದ ರಕ್ತ ಬೀಜಾಸುರ ಪಕ್ಷ ಕಾಂಗ್ರೆಸ್: ಪ್ರಹ್ಲಾದ್ ಜೋಶಿ ವಾಗ್ದಾಳಿ