ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ: ಸಚಿವ ಸಂತೋಷ್ ಲಾಡ್

Published : Feb 09, 2025, 07:12 AM IST
ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ: ಸಚಿವ ಸಂತೋಷ್ ಲಾಡ್

ಸಾರಾಂಶ

ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟು ಹೋಗಿದೆ. ರೂಪಾಯಿ ಮೌಲ್ಯ ಡಾಲರ್‌ಗೆ ₹90ಕ್ಕೆ ಬಂದು ನಿಂತಿದೆ. ಕೇಂದ್ರ ಬಿಜೆಪಿ ಸರ್ಕಾರದ ಆರ್ಥಿಕ ನೀತಿಯಿಂದಾಗಿ ಯಾವುದೇ ಅಭಿವೃದ್ಧಿ ಕಾರ್ಯಗಳಾಗುತ್ತಿಲ್ಲ. 

ಜಮಖಂಡಿ (ಫೆ.09): ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟು ಹೋಗಿದೆ. ರೂಪಾಯಿ ಮೌಲ್ಯ ಡಾಲರ್‌ಗೆ ₹90ಕ್ಕೆ ಬಂದು ನಿಂತಿದೆ. ಕೇಂದ್ರ ಬಿಜೆಪಿ ಸರ್ಕಾರದ ಆರ್ಥಿಕ ನೀತಿಯಿಂದಾಗಿ ಯಾವುದೇ ಅಭಿವೃದ್ಧಿ ಕಾರ್ಯಗಳಾಗುತ್ತಿಲ್ಲ. ರೂಪಾಯಿ ಮೌಲ್ಯ ಹೆಚ್ಚಿಸಲು 600 ಬಿಲಿಯನ್‌ ಡಾಲರ್‌ ಖರ್ಚು ಮಾಡಿದೆ. ಇಲ್ಲದಿದ್ದರೆ ಡಾಲರ್‌ ಬೆಲೆ ₹90ರ ಗಡಿ ದಾಟುತ್ತಿತ್ತು ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ ಲಾಡ್‌ ಕೇಂದ್ರ ಸರ್ಕಾರವನ್ನು ದೂರಿದರು. ತಾಲೂಕಿನ ಸಾವಳಗಿ ಗ್ರಾಮದ ಅಂಬಾಭವಾನಿ ಜಾತ್ರೆಯಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು. 

ದೇಶದ ಸಮಸ್ಯೆ ಹಾಗೂ ಆರ್ಥಿಕ ದಿವಾಳಿತನ ಜನರಿಗೆ ತಿಳಿಯಬಾರದೆಂಬ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ ಮುಖಂಡರ ವಿರುದ್ಧ ಆರೋಪ ಮಾಡುತ್ತಿರುತ್ತಾರೆ. ಅವರಿಗೆ ಬೇರೆ ಕೆಲಸವಿಲ್ಲ. ಪ್ರಧಾನಿ ಮೋದಿಯವರು ನೆಹರು ಅವರ ಆರ್ಥಿಕ ನೀತಿಯ ಕುರಿತು ಮಾತನಾಡಿದ್ದಾರೆ. ಬಹಿರಂಗವಾಗಿ ಬಂದು ಸುದ್ದಿಗೋಷ್ಠಿ ನಡೆಸಲಿ ಎಂದು ಸವಾಲು ಹಾಕಿದ ಸಚಿವಪು, ಟೆಲಿ ಪ್ರಾಮ್ಟರ್‌ ಇಲ್ಲದಿದ್ದರೆ ಅವರಿಗೆ ಮಾತನಾಡಲು ಸಾಧ್ಯವಾಗುವುದಿಲ್ಲ ಎಂದು ವ್ಯಂಗ್ಯವಾಡಿದರು.

ಅಮೆರಿಕ ಭಾರತೀಯರನ್ನು ಅಮಾನವೀಯವಾಗಿ ಹೊರದಬ್ಬಿದೆ ಈ ಬಗ್ಗೆ ಮಾತನಾಡಲಿ. ರಾಜ್ಯಕ್ಕೆ ಕೇಂದ್ರ ಸರ್ಕಾರದ ಕೊಡುಗೆ ಏನು ಎಂಬುದನ್ನು ಸ್ಪಷ್ಟಪಡಿಸಲಿ, ಮಾಧ್ಯಮವನ್ನು ತಮ್ಮ ಹಿಡಿತದಲ್ಲಿಟ್ಟುಕೊಂಡಿದ್ದಾರೆ. ಮಾಧ್ಯಮಕ್ಕೆ ಸ್ವತಂತ್ರಕೊಟ್ಟು ನೋಡಲಿ ಅಥವಾ ಮಾಧ್ಯಮದ ಮುಂದೆ ಬಂದು ಮಾತನಾಡಲಿ. ಅಂಕಿ-ಸಂಖ್ಯೆಗಳನ್ನು ಹೇಳಲಿ, ಮಹಾರಾಷ್ಟ್ರ ಚುನಾವಣೆಗಳಲ್ಲಿ ಮತ ಹೆಚ್ಚು ಮಾಡಿಕೊಂಡು ಮೋಸದಿಂದ ಗೆದ್ದಿದ್ದಾರೆ ಎಂದು ದೂರಿದರು.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಟೋಲ್​ ತಪ್ಪಿಸುತ್ತಿದ್ದವರಿಗೆ ಬಿಗ್‌ಶಾಕ್!

ಮಾಜಿ ಶಾಸಕ ಆನಂದ ನ್ಯಾಮಗೌಡ, ಬಿ.ಎಸ್‌. ಸಿಂಧೂರ, ಮುಖಂಡರಾದ ಅರ್ಜುನ ದಳವಾಯಿ, ಶ್ರೀಶೈಲ ದಳವಾಯಿ, ಸಿದ್ದು ಮೀಸಿ, ಈಶ್ವರ ವಾಳೆಣ್ಣವರ, ಮಹೇಶ ಕೋಳಿ, ನಗರಸಭೆ ಅಧ್ಯಕ್ಷ ಪರಮಾನಂದ ಗೌರೋಜಿ, ರವಿಯಡಳ್ಳಿ, ಮಹಾದೇವ ಪಾಟೀಲ, ಬಸವರಾಜ ಹರಕಂಗಿ, ರೋಹಿತ ಸೂರ್ಯವಂಶಿ ಸೇರಿದಂತೆ ಹಲವರು ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ರೈತರ ಬೆಳೆಗಳಿಗೆ ಮಾರುಕಟ್ಟೆ ಕಲ್ಪಿಸಲು 'ಅಂತಾರಾಷ್ಟ್ರೀಯ ಸ್ಯಾಂಡ್‌ವಿಚ್ ಸ್ನಾತಕೋತ್ತರ ಕೋರ್ಸ್': ಸಿಎಂ ಸಿದ್ದರಾಮಯ್ಯ