ಪ್ರಧಾನಿ ಮೋದಿ ಆಡಳಿತದಲ್ಲಿ ದೇಶದ ಚಿತ್ರಣ ಬದಲು: ಕೇಂದ್ರ ಸಚಿವ ಎ.ನಾರಾಯಣಸ್ವಾಮಿ

Published : Jun 04, 2023, 02:00 AM IST
ಪ್ರಧಾನಿ ಮೋದಿ ಆಡಳಿತದಲ್ಲಿ ದೇಶದ ಚಿತ್ರಣ ಬದಲು: ಕೇಂದ್ರ ಸಚಿವ ಎ.ನಾರಾಯಣಸ್ವಾಮಿ

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಅವರು ಒಂಬತ್ತು ವರ್ಷಗಳ ಅಧಿಕಾರಾವಧಿಯಲ್ಲಿ ಸಮಗ್ರ ಅಭಿವೃದ್ಧಿಗಾಗಿ ಸಾಕಷ್ಟುಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೊಳಿಸಿದ್ದು, ದೇಶದ ಚಿತ್ರಣವನ್ನೇ ಬದಲು ಮಾಡಿದ್ದಾರೆಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಹೇಳಿದರು.

ಚಿತ್ರದುರ್ಗ (ಜೂ.04): ಪ್ರಧಾನಿ ನರೇಂದ್ರ ಮೋದಿ ಅವರು ಒಂಬತ್ತು ವರ್ಷಗಳ ಅಧಿಕಾರಾವಧಿಯಲ್ಲಿ ಸಮಗ್ರ ಅಭಿವೃದ್ಧಿಗಾಗಿ ಸಾಕಷ್ಟುಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೊಳಿಸಿದ್ದು, ದೇಶದ ಚಿತ್ರಣವನ್ನೇ ಬದಲು ಮಾಡಿದ್ದಾರೆಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಹೇಳಿದರು. ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2014ರಲ್ಲಿ ಮೋದಿ ಪ್ರಧಾನಿಯಾದಾಗ ನೀರಾವರಿ, ವಸತಿ, ವಿದ್ಯುತ್‌ಗೆ ಪ್ರಾಧಾನ್ಯತೆ ನೀಡಿದ್ದರ ಪರಿಣಾಮ 2019ರಲ್ಲಿ ನಡೆದ ಪಾರ್ಲಿಮೆಂಟ್‌ ಚುನಾವಣೆಯಲ್ಲಿ ಜನತೆ ಮತ್ತೆ ಅಧಿಕಾರಕ್ಕೆ ತಂದರು. 

ಶೋಷಿತರನ್ನು ಗುರಿಯಾಗಿಸಿಕೊಂಡು ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ ಹನ್ನೊಂದು ಕೋಟಿಗೂ ಹೆಚ್ಚು ಮನೆಗಳನ್ನು ನಿರ್ಮಿಸಿದ್ದಾರೆ. ಸ್ವಚ್ಛ ಭಾರತ್‌ ಯೋಜನೆಯಡಿ ಶೌಚಾಲಯ ನಿರ್ಮಾಣ, ಉಜ್ವಲ್‌ ಯೋಜನೆಯಡಿ ಒಂಬತ್ತು ಕೋಟಿ ಕುಟುಂಬಗಳಿಗೆ ಅಡುಗೆ ಅನಿಲ ವಿತರಣೆ, ಕಿಸಾನ್‌ ಸಮ್ಮಾನ್‌ ಅಡಿ ಪ್ರತಿ ರೈತನಿಗೆ ತಿಂಗಳಿಗೆ ಆರು ಸಾವಿರ ರು.ನೀಡಿದ್ದಾರೆಂದು ಶ್ಲಾಘಿಸಿದರು. ವಾಜಪೇಯಿ ಪ್ರಧಾನಿಯಾಗಿದ್ದಾಗ ನಿರ್ಮಾಣಗೊಂಡ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೊಳಿಸಿ ಈಶಾನ್ಯ ರಾಜ್ಯಗಳಿಗೆ ಸಂಪರ್ಕ ಕಲ್ಪಿಸಿದೆ. ಕರ್ನಾಟಕದಲ್ಲಿ ಆರು ಹೊಸ ಏರ್‌ಪೋರ್ಚ್‌ ಗಳನ್ನು ನಿರ್ಮಾಣ ಮಾಡಲಾಗಿದೆ. 

ಆರೋಗ್ಯವಂತ ಸಮಾಜದ ಉಳಿವಿಗೆ ಪುಸ್ತಕ ಅಗತ್ಯ: ಸಿಎಂ ಸಿದ್ದರಾಮಯ್ಯ

ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್‌ 370ನ್ನು ರದ್ಧುಪಡಿಸಿದ ಪ್ರಧಾನಿ ಮೋದಿ ಭಯೋತ್ಪಾದನೆಗೆ ತೆರೆ ಎಳೆದಿದ್ದಾರೆ. ಇಂತಹ ದಿಟ್ಟತನವನ್ನು ದೇಶದ ಯಾವ ಪ್ರಧಾನಿಯೂ ಇದುವರೆಗೂ ಕೈಗೊಂಡಿಲ್ಲ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ, ಯುವಕರು ಸ್ವ-ಉದ್ಯೋಗ ಕೈಗೊಳ್ಳಲು ಮುದ್ರಾ ಯೋಜನೆಯಡಿ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗಿದೆ. ಬೀದಿ ಬದಿ ವ್ಯಾಪಾರ ಮಾಡುವ ಮೂವತ್ತೈದು ಲಕ್ಷ ಮಂದಿಗೆ ಹತ್ತರಿಂದ ಐವತ್ತು ಸಾವಿರ ರು.ಗಳವರೆಗೆ ಬ್ಯಾಂಕ್‌ನಲ್ಲಿ ಸಾಲ ಕೊಟ್ಟಿದೆ.  ಜಲಜೀವನ್‌ ಮಿಷನ್‌ ಯೋಜನೆಯಡಿ ಶುದ್ಧ ಕುಡಿಯುವ ನೀರು ಪೂರೈಸಿದ್ದಾರೆ. 

ವಿಶ್ವವಿದ್ಯಾಲಯಗಳನ್ನು ತೆರೆಯಲಾಗಿದೆ. ಮೂರು ಸಾವಿರ ಪರಿಶಿಷ್ಟಜಾತಿ ವಿದ್ಯಾರ್ಥಿಗಳಿಗೆ ಐಎಎಸ್‌ ಕೋಚಿಂಗ್‌ ನೀಡಲಾಗುತ್ತಿದೆ. ಅದಕ್ಕಾಗಿ ಪ್ರತಿ ತಿಂಗಳು ನಾಲ್ಕು ಸಾವಿರ ರು.ಗಳ ಸ್ಟೇಫಂಡ್‌ ನೀಡಲು ಆದೇಶಿಸಿದ್ದೇನೆ ಎಂದರು. ಒಳಮೀಸಲಾತಿಯ ಕೂಗು ದೇಶದೆಲ್ಲೆಡೆ ಚರ್ಚೆಯಾಗುತ್ತಿದೆ. ಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿಯೇ ವಿನಃ. ರಾಜಕೀಯಕ್ಕಾಗಿ ಅಲ್ಲ ಎನ್ನುವುದನ್ನು ಗಮನದಲ್ಲಿಟ್ಟುಕೊಂಡು ಬಸವರಾಜ್‌ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರಕ್ಕೆ ಶಿಫಾರಸ್ಸು ಮಾಡಿದರು. ಇದಕ್ಕೂ ನಮ್ಮ ಪಕ್ಷದ ಹಿನ್ನಡೆಗೂ ಸಂಬಂಧವಿಲ್ಲ ಎಂದು ಎ. ನಾರಾಯಣಸ್ವಾಮಿ ಸ್ಪಷ್ಟಪಡಿಸಿದರು.

ಕಾಂಗ್ರೆಸ್‌ ಗ್ಯಾರಂಟಿ ಜಾರಿಗೆ ಕರಾರು: ಸಂಸದ ಎಸ್‌.ಮುನಿಸ್ವಾಮಿ ಆಕ್ಷೇಪ

20 ರಂದು ಡಿಜಿಟಲ್‌ ರ್ಯಾಲಿ: ವಿಧಾನ ಪರಿಷತ್‌ ಸದಸ್ಯ ಕೆ.ಎಸ್‌.ನವೀನ್‌ ಮಾತನಾಡಿ, ಪಕ್ಷದ ವತಿಯಿಂದ ಒಂದು ತಿಂಗಳ ಕಾಲ ವಿಕಾಸ ತೀರ್ಥ ಯಾತ್ರೆ ಅಭಿಯಾನ ನಡೆಯಲಿದೆ. ರಾಜ್ಯದ ಕೆಲವು ನಾಯಕರುಗಳು ಜಿಲ್ಲೆಗೆ ಆಗಮಿಸಿ ಶಕ್ತಿ ಕೇಂದ್ರ, ಬೂತ್‌ ಅಧ್ಯಕ್ಷರು, ಫಲಾನುಭವಿಗಳನ್ನು ಭೇಟಿ ಮಾಡಲಿದ್ದಾರೆ. ಶಾಸಕರು, ಮಾಜಿ ಶಾಸಕರು, ಕಾರ್ಯಕರ್ತರು, ಪದಾಧಿಕಾರಿಗಳ ಸಭೆ ನಡೆಸಲಾಗುವುದು. ಜೂ.20 ರಂದು ಪ್ರಧಾನಿ ಮೋದಿ ಡಿಜಿಟಲ್‌ ರಾರ‍ಯಲಿ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಏಳು ದಿನಗಳ ಕಾಲ ಜಿಲ್ಲೆಯಲ್ಲಿ ಮನೆ ಮನೆ ಸಂಪರ್ಕಕ್ಕೂ ಸಿದ್ಧತೆ ನಡೆಸಲಾಗುವುದು ಎಂದು ಹೇಳಿದರು. ಪಕ್ಷದ ಜಿಲ್ಲಾಧ್ಯಕ್ಷ ಜಿಲ್ಲಾಧ್ಯಕ್ಷ ಎ. ಮುರಳಿ, ಪ್ರಧಾನ ಕಾರ್ಯದರ್ಶಿ ನರೇಂದ್ರ ಹೊನ್ನಾಳ್‌, ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್‌, ವಕ್ತಾರ ನಾಗರಾಜ್‌ ಬೇದ್ರೆ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ವೆಂಕಟೇಶ್‌ ಯಾದವ್‌ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!