ಸಿಎಂ ಪೂರ್ಣಾವಧಿ ವಿಚಾರದಲ್ಲಿ ಪಕ್ಷದ ವರಿಷ್ಠರ ತೀರ್ಮಾನ ಅಂತಿಮ: ಸಿದ್ದರಾಮಯ್ಯ

Published : Jan 18, 2024, 09:45 AM IST
ಸಿಎಂ ಪೂರ್ಣಾವಧಿ ವಿಚಾರದಲ್ಲಿ ಪಕ್ಷದ ವರಿಷ್ಠರ ತೀರ್ಮಾನ ಅಂತಿಮ: ಸಿದ್ದರಾಮಯ್ಯ

ಸಾರಾಂಶ

ಮುಖ್ಯಮಂತ್ರಿ ಪೂರ್ಣಾವಧಿ ವಿಚಾರದಲ್ಲಿ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಉದ್ಘಾಟನೆ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.   

ಬೆಳಗಾವಿ (ಜ.18): ಮುಖ್ಯಮಂತ್ರಿ ಪೂರ್ಣಾವಧಿ ವಿಚಾರದಲ್ಲಿ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಉದ್ಘಾಟನೆ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಲೋಕಸಭೆಯಲ್ಲಿ ಅತೀ ಹೆಚ್ಚಿನ ಸ್ಥಾನಗಳನ್ನು ಗಳಿಸಿದರೆ ಸಿದ್ದರಾಮಯ್ಯನವರೇ 5 ವರ್ಷಗಳು ಮುಖ್ಯಮಂತ್ರಿಯಾಗಿ ಮುಂದುರೆಯುತ್ತಾರೆಂದು ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಈ ವಿಚಾರದಲ್ಲಿ ನಾನಾಗಲಿ, ನನ್ನ ಮಗನಾಗಲಿ ಏನೇ ಹೇಳಿದರೂ ಕೂಡ ಪಕ್ಷದ ವರಿಷ್ಠರೇ ತೀರ್ಮಾನ ಮಾಡುತ್ತಾರೆ ಎಂದರು.

ಕರ್ನಾಟಕದ ಗಡಿ ಭಾಗದ 865 ಗ್ರಾಮಗಳಲ್ಲಿ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ಜಾರಿ ಮಾಡಲು ಮುಂದಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ಮಹಾರಾಷ್ಟ್ರ ಕರ್ನಾಟಕದೊಳಗೆ ಬರಬಾರದು ಎಂದು ಮುಖ್ಯ ಕಾರ್ಯದರ್ಶಿ ಈಗಾಗಲೇ ಮಹಾರಾಷ್ಟ್ರದವರಿಗೆ ಸೂಚಿಸಿದ್ದಾರೆ ಎಂದರು. ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಸೀಟುಗಳನ್ನು 65% ರಷ್ಟು ಹಾಗೂ ಇತರೆ ರಾಜ್ಯಗಳಿಗೆ ಶೇ 35 ರಷ್ಟು ಸೀಟುಗಳು ಹಂಚಿಕೆಯಾಗಬೇಕೆಂದು ಕ್ರಮ ಕೈಗೊಳ್ಳಲಾಗಿದೆ. ಗುಣಮಟ್ಟದ ಶಿಕ್ಷಣದೊಂದಿಗೆ ದೇಶಪ್ರೇಮವನ್ನು ಮಕ್ಕಳಲ್ಲಿ ಬೆಳೆಸಲಾಗುವುದು. ಇಲ್ಲಿ ಕಲಿತವರು ಸೇನೆಗೆ ಸೇರ್ಪಡೆಯಾಗುವ ಅವಕಾಶವಿದೆ ಎಂದರು.

ದೇಶಭಕ್ತರಂತೆ ಪೋಸು ಕೊಡುವವರು ಬ್ರಿಟಿಷರ ವಿರುದ್ಧ ಏಕೆ ಹೋರಾಡಲಿಲ್ಲ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಸುಮಾರು 110 ಎಕರೆ ಜಮೀನನ್ನು ಸರ್ಕಾರದ ವತಿಯಿಂದ ರಾಕ್ ಗಾರ್ಡನ್ ಮತ್ತು ವಸ್ತುಸಂಗ್ರಹಾಲಯ ನಿರ್ಮಾಣಕ್ಕಾಗಿ ಅನುದಾನವನ್ನೂ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ನೀಡಲಾಗಿತ್ತು. ಮುಖ್ಯಮಂತ್ರಿಯಾಗಿ ಶಂಕುಸ್ಥಾಪನೆ ಮಾಡಿ, ಉದ್ಘಾಟನೆಯನ್ನೂ ಮಾಡುತ್ತಿದ್ದೇನೆ ಎಂದರು. ಎಲ್ಲವೂ ಉತ್ತಮವಾಗಿ ಮೂಡಿಬಂದಿದೆ. ಅವರ ಜ್ಞಾಪಕಾರ್ಥವಾಗಿ ಇಲ್ಲಿ ರಾಕ್ ಗಾರ್ಡನ್ ಮತ್ತು ವಸ್ತು ಸಂಗ್ರಹಾಲಯ ನಿರ್ಮಾಣವಾಗಿದೆ ಎಂದರು.

ರಾಜ್ಯ ಪೊಲೀಸ್‌ ಇಲಾಖೆಗೆ ಹೈಟೆಕ್‌ ಸ್ಪರ್ಶ: ತಂತ್ರಜ್ಞಾನ ಬಳಕೆಯಲ್ಲಿ ದೇಶದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಪೊಲೀಸ್‌ ಇಲಾಖೆ ಇದೀಗ ಕೃತಕ ಬುದ್ದಿಮತ್ತೆ (ಎಐ) ಮತ್ತು ಮೆಷಿನ್ ಲರ್ನಿಂಗ್ (ಎಂಎಲ್‌)ನಂಥ ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಂಡು ಇಲಾಖೆಗೆ ಮತ್ತಷ್ಟು ಹೈಟೆಕ್‌ ಸ್ಪರ್ಶ ನೀಡಿದೆ. ಎಐ ಮತ್ತು ಎಂಎಲ್‌ ತಂತ್ರಜ್ಞಾನ ಬಳಸಿಕೊಂಡು, ಕೆಎಸ್‌ಪಿ ಎ.ಐ, ಪೊಲೀಸ್ ಐ.ಟಿ. ವಿ2 ತಂತ್ರಾಂಶ, ಐಟಿಪಿಎ ಸರಳ ಮೊಬೈಲ್ ಆ್ಯಪ್, ಚಾಟ್‌ಬಾಟ್, ಅನುಕಂಪ ಆಧಾರದ ನೇಮಕಾತಿ ಪೋರ್ಟಲ್, ಆರ್ಥಿಕ ಅಪರಾಧಗಳ ತನಿಖಾ ತಂತ್ರಾಂಶ, ಕರ್ನಾಟಕ ರಾಜ್ಯ ಪೊಲೀಸ್ ಡೇಟಾಥಾನ್-2024 ರೂಪಿಸಲಾಗಿದೆ.

ಹೆಸರಲ್ಲೇ ಲಕ್ಷ್ಮಣ ಇರುವಾಗ ರಾಮ ಮಂದಿರಕ್ಕೆ ಹೋಗದಿರಲು ಸಾಧ್ಯವೆ: ಶಾಸಕ ಲಕ್ಷ್ಮಣ ಸವದಿ

ರಾಜ್ಯ ಪೊಲೀಸ್‌ ಮಹಾನಿರ್ದೇಶಕರ ಕಚೇರಿಯಲ್ಲಿ ಮಂಗಳವಾರ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಅತ್ಯಾಧುನಿಕ ತಂತ್ರಜ್ಞಾನಗಳಿಗೆ ಚಾಲನೆ ನೀಡಿದರು. ಈ ತಂತ್ರಾಂಶದಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿ ಪೂರ್ಣ ಪ್ರಮಾಣದಲ್ಲಿ ತನಿಖಾ ಪ್ರಕ್ರಿಯೆಯನ್ನು ಸಮಗ್ರವಾಗಿ ಕೈಗೊಳ್ಳಬಹುದು. ಎಫ್‌ಐಆರ್‌ ನೋಂದಣಿಯಿಂದ ಹಿಡಿದು ಪ್ರಕರಣದ ವಿಲೇವಾರಿವರೆಗಿನ ಎಲ್ಲ ಕಾರ್ಯಚಟುವಟಿಕೆಗಳನ್ನು ತಡೆ ರಹಿತವಾಗಿ ನಿರ್ವಹಿಸಬಹುದಾಗಿದೆ. ಡಿಜಿಟಲ್‌ ಸಾಕ್ಷ್ಯ ನಿರ್ವಹಣೆ ಸೇರಿದತೆ ವಿವಿಧ ಸೇವೆಗಳನ್ನು ಒಳಗೊಂಡಂತೆ ಪೊಲೀಸ್‌ ಇಲಾಖೆ ಮತ್ತು ನಾಗರಿಕರಿಗೆ ಹೆಚ್ಚಿನ ಸೇವೆಗಳನ್ನು ಒದಗಿಸುವಂತೆ ಎಐ ಮತ್ತು ಎಂಎಲ್‌ ತಂತ್ರಜ್ಞಾನವನ್ನು ಬಳಸಿ ವಿನ್ಯಾಸಗೊಳಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!