ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲು ಬಸ್ ಯಾತ್ರೆ ಶೀಘ್ರದಲ್ಲೇ ಆರಂಭಿಸಲಾಗುವುದು. ಈ ವಿಷಯದಲ್ಲಿ ಪಕ್ಷದ ಯಾವ ನಾಯಕರು ಯಾವುದೇ ಷರತ್ತು ಹಾಕಿಲ್ಲ. ಎಲ್ಲ ನಾಯಕರೊಂದಿಗೆ ಚರ್ಚಿಸಿಯೇ ತೀರ್ಮಾನ ಕೈಗೊಳ್ಳಲಾಗುತ್ತಿದೆ. ಪಕ್ಷದ ನಿರ್ಧಾರವೇ ಅಂತಿಮವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಹುಬ್ಬಳ್ಳಿ (ಡಿ.19): ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲು ಬಸ್ ಯಾತ್ರೆ ಶೀಘ್ರದಲ್ಲೇ ಆರಂಭಿಸಲಾಗುವುದು. ಈ ವಿಷಯದಲ್ಲಿ ಪಕ್ಷದ ಯಾವ ನಾಯಕರು ಯಾವುದೇ ಷರತ್ತು ಹಾಕಿಲ್ಲ. ಎಲ್ಲ ನಾಯಕರೊಂದಿಗೆ ಚರ್ಚಿಸಿಯೇ ತೀರ್ಮಾನ ಕೈಗೊಳ್ಳಲಾಗುತ್ತಿದೆ. ಪಕ್ಷದ ನಿರ್ಧಾರವೇ ಅಂತಿಮವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಪಕ್ಷದ ಅಧ್ಯಕ್ಷನಾಗಿದ್ದರೂ ಎಲ್ಲ ವಿಷಯವನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪಕ್ಷದ ಕಾರ್ಯಾಧ್ಯಕ್ಷ ಸೇರಿ ವಿವಿಧ ಪದಾಧಿಕಾರಿಗಳ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇನೆ. ಪಕ್ಷದ ತೀರ್ಮಾನವೇ ಅಂತಿಮವಾಗಿದೆ ಎಂದರು. ಬಸ್ ಯಾತ್ರೆಗೂ ಮುನ್ನ ಡಿ. 30ರಂದು ಕೃಷ್ಣಾ ನದಿ ನೀರು ಹಂಚಿಕೆ ಕುರಿತು ವಿಜಯಪುರದಲ್ಲಿ, ಜ. 2ರಂದು ಮಹಾದಾಯಿ ಯೋಜನೆ ಅನುಷ್ಠಾನ ಕುರಿತು ಹುಬ್ಬಳ್ಳಿಯಲ್ಲಿ ಹಾಗೂ ಜ. 8ರಂದು ಚಿತ್ರದುರ್ಗದಲ್ಲಿ ಎಸ್ಸಿ, ಎಸ್ಟಿಮೀಸಲಾತಿ ಕುರಿತು ಸಭೆ ನಡೆಸಲಾಗುವುದು ಎಂದರು.
ಯಾರೂ ಅಭ್ಯರ್ಥಿ ಘೋಷಣೆ ಮಾಡುವಂತಿಲ್ಲ: ಡಿಕೆಶಿ ಎಚ್ಚರಿಕೆ
ಟಿಕೆಟ್ ಬಯಸಿ ಕೆಪಿಸಿಸಿಗೆ ಸಾವಿರಕ್ಕೂ ಅಧಿಕ ಅರ್ಜಿ ಬಂದಿವೆ. ಗೆಲ್ಲುವುದಷ್ಟೇ ನಮಗೆ ಮುಖ್ಯ. ಅಂತಹವರಿಗೆ ಮಾತ್ರ ಟಿಕೆಟ್ ಕೊಡುತ್ತೇವೆ. ಈ ಕುರಿತು ಎಐಸಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಿದೆ. ಅನೇಕರು ಕಷ್ಟಕಾಲದಲ್ಲಿ ಗೆದ್ದು, ಕ್ಷೇತ್ರ ಉಳಿಸಿಕೊಂಡಿದ್ದಾರೆ. ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಟಿಕೆಟ್ ನೀಡಲಾಗುವುದು. ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್‌ಗೆ ಆಕಾಂಕ್ಷಿಗಳ ಅರ್ಜಿ ಕಳಿಸಿ, ಅಭಿಪ್ರಾಯ ಸಂಗ್ರಹಿಸಲಾಗುವುದು. ರಾಜ್ಯದಲ್ಲಿ 78 ಲಕ್ಷ ಮಂದಿ ಕಾಂಗ್ರೆಸ್ ಸದಸ್ಯತ್ವ ಪಡೆದಿದ್ದು, ಅವರ ಅಭಿಪ್ರಾಯ ಪಡೆಯುವ ಬಗ್ಗೆಯೂ ಎಐಸಿಸಿ ಚಿಂತನೆ ನಡೆಸಿದೆ ಎಂದರು.
ಸಮರ್ಥನೆ: ಭಯೋತ್ಪಾದನಾ ಚಟುವಟಿಕೆಯಿಂದಾಗಿ ಕಾಂಗ್ರೆಸ್ ತನ್ನ ಮೇರು ನಾಯಕರನ್ನು ಕಳೆದುಕೊಂಡಿದೆ. ಪಕ್ಷವು ಪ್ರತಿ ಹಂತದಲ್ಲಿ ಭಯೋತ್ಪಾದನಾ ಚಟುವಟಿಕೆ ವಿರೋಧಿಸಿಕೊಂಡು ಬಂದಿದೆ. ಭಯೋತ್ಪಾದನೆ ನಿಯಂತ್ರಿಸಲಾಗದ ರಾಜ್ಯ ಸರ್ಕಾರವನ್ನೇ ವಜಾ ಮಾಡಿದೆ. ಮಂಗಳೂರಿನಲ್ಲಿ ನಡೆದ ಕುಕ್ಕರ್ ಸ್ಫೋಟ ಪ್ರಕರಣ ಕುರಿತ ನನ್ನ ಹೇಳಿಕೆ ಬಗ್ಗೆ ಯಾರೆಷ್ಟೇ ವಿವಾದ ಮಾಡಿದರೂ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು. ಕುಕ್ಕರ್ ಸ್ಫೋಟವನ್ನು ನಾವು ಸಹ ಖಂಡಿಸಿದ್ದೇವೆ. ಘಟನೆ ನಡೆದ ಬಳಿಕ ಸುದ್ದಿಗೋಷ್ಠಿ ನಡೆಸಿದ್ದ ಮಂಗಳೂರು ಪೊಲೀಸ್ ಕಮಿಷನರ್, ಆರೋಪಿಗೆ ಪ್ರಜ್ಞೆ ಬಂದಿಲ್ಲ.
ಸಿದ್ದರಾಮಯ್ಯ, ನನ್ನ ಮಧ್ಯೆ ಜಗಳ ಶುದ್ಧ ಸುಳ್ಳು: ಡಿ.ಕೆ.ಶಿವಕುಮಾರ್
ಆತನ ವಿಚಾರಣೆ ನಡೆಸದೆ ನಾವು ಯಾವುದೇ ಹೇಳಿಕೆ ನೀಡಲು ಸಾಧ್ಯವಿಲ್ಲ ಎಂದಿದ್ದರು. ಆದರೆ, ಯಾವುದೇ ತನಿಖೆ ನಡೆಯದೆ ಡಿಜಿಪಿ, ಗೃಹ ಸಚಿವರು ಅಂತಿಮ ತೀರ್ಮಾನಕ್ಕೆ ಬಂದವರಂತೆ ಹೇಳಿಕೆ ನೀಡಿದರು. ಭ್ರಷ್ಟಾಚಾರ, ಮತ ಕಳ್ಳತನ ಮರೆಮಾಚಲು ಸ್ಫೋಟದ ವಿಷಯವನ್ನು ದೊಡ್ಡದು ಮಾಡುವ ಮೂಲಕ ಮತದಾರರ ಪಟ್ಟಿಪ್ರಕರಣವನ್ನು ಬೇರೆಡೆಗೆ ಸೆಳೆಯಲು ಬಿಜೆಪಿಯವರು ಯತ್ನಿಸಿದರು ಎಂದು ಆರೋಪಿಸಿದರು. ಸಚಿವ ಆರ್. ಅಶೋಕ ನನಗೆ ಅಮಾಯಕ ಅವಾರ್ಡ್ ನೀಡುವುದಾಗಿ ಹೇಳಿದ್ದಾರೆ. ಯಾವಾಗ ಕೊಡುತ್ತಾರೆ ಎಂದು ದಿನಾಂಕ, ಸಮಯ ನಿಗದಿಪಡಿಸಲಿ ಸ್ವೀಕಾರ ಮಾಡಲು ನಾನು ಸಿದ್ಧನಿದ್ದೇನೆ ಎಂದು ಅಶೋಕಗೆ ಸವಾಲೆಸೆದರು.