ಲೋಕಸಭಾ ಚುನಾವಣೆಯಿಂದ ದೇಶದ ಭವಿಷ್ಯ ನಿರ್ಧಾರ: ವಿ.ಸೋಮಣ್ಣ

Published : Mar 16, 2024, 08:03 AM IST
ಲೋಕಸಭಾ ಚುನಾವಣೆಯಿಂದ ದೇಶದ ಭವಿಷ್ಯ ನಿರ್ಧಾರ: ವಿ.ಸೋಮಣ್ಣ

ಸಾರಾಂಶ

ಈಗ ನಡೆಯುವ ಚುನಾವಣೆ ದೇಶದ ಭವಿಷ್ಯ ನಿರ್ಧರಿಸುವುದರಿಂದ 3ನೇ ಬಾರಿ ಮೋದಿಯನ್ನು ಪ್ರಧಾನ ಮಂತ್ರಿಯಾಗಿ ಮಾಡಬೇಕೆಂದು ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ತಿಳಿಸಿದರು.

ಗುಬ್ಬಿ (ಮಾ.16): ಈಗ ನಡೆಯುವ ಚುನಾವಣೆ ದೇಶದ ಭವಿಷ್ಯ ನಿರ್ಧರಿಸುವುದರಿಂದ 3ನೇ ಬಾರಿ ಮೋದಿಯನ್ನು ಪ್ರಧಾನ ಮಂತ್ರಿಯಾಗಿ ಮಾಡಬೇಕೆಂದು ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ತಿಳಿಸಿದರು. ಗುಬ್ಬಿ ಶ್ರೀ ಚನ್ನಬಸವೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆ ಅಲ್ಲ. ದೇಶದ ಭವಿಷ್ಯನ್ನು ನಿರ್ಧರಿಸುವಂತಹ ಚುನಾವಣೆ ಆದ್ದರಿಂದ ಈ ಸಾರಿ ಬಿಜೆಪಿ ಗೆಲ್ಲುಸುವ ಮನಸು ಮಾಡಬೇಕೆಂದು ತಿಳಿಸಿದರು.

ತುಮಕೂರು ಜಿಲ್ಲೆ ಅತಿವೇಗವಾಗಿ ಬೆಳೆಯತ್ತಿರುವ ಜಿಲ್ಲೆ. ಇಲ್ಲಿಗೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯ ದೊರೆಯಬೇಕು ಎಂಬುದು ನಮ್ಮ ದೂರದೃಷ್ಟಿ. ಬೆಂಗಳೂರಿನಿಂದ ತುಮಕೂರಿನವರೆಗೆ ಪ್ಲೈ ಓವರ್ ಹಾಗೆಯೇ ಮೆಟ್ರೋ ರೈಲು ಬರಬೇಕೆಂಬ ಕನಸಿನ ಜೊತೆಗೆ ತುಮಕೂರನ್ನು ಮತ್ತೊಂದು ವಾರಣಾಸಿ ಮಾಡಬೇಕೆಂಬ ಕನಸಿದೆ. ಅವಕಾಶ ಸಿಕ್ಕರೆ ಈ ಕನಸನ್ನು ನನಸು ಮಾಡಲು ಪ್ರಾಮಾಣಿಕ ಪ್ರಯತ್ನ ನಡೆಸಲಿದ್ದೇನೆ ಎಂದರು.

ಈ ಭಾಗದ ಮತದಾರರದ್ದು. ಹಿರಿಯರ ಆಶೀರ್ವಾದ ಇದ್ದು, ಇದು ದೇಶದ ಚುನಾವಣೆ ಭವಿಷ್ಯ ಭಾರತದ ದೊಡ್ಡ ಚುನಾವಣೆ. ಎನ್‌ಡಿಎ ಮೈತ್ರಿಕೂಟದ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಿಜೆಪಿ ಜತೆ ಸೇರಿ ಚುನಾವಣೆಯನ್ನು ಒಟ್ಟಾಗಿ ಚುನಾವಣೆ ಎದುರಿಸಲಾಗುತ್ತಿದ್ದಾರೆ. ತುಮಕೂರಿನ ಜನ ಪಕ್ಷಾತೀತವಾಗಿ, ಜಾತ್ಯತೀತವಾಗಿ ದೇವೇಗೌಡರ ಮಾತಿಗೆ ಮನ್ನಣೆ ಕೊಟ್ಟು ಮತ್ತೊಮ್ಮೆ ನರೇಂದ್ರ ಮೋದಿಯವರನ್ನು ಪ್ರಧಾನ ಮಂತ್ರಿ ಮಾಡಲು ಸಹಕರಿಸುತ್ತಾರೆ ಎಂದು ತಿಳಿಸಿದರು.

ಲೋಕಸಭೆ ಚುನಾವಣೆ ಎಂಪಿ ಅಭ್ಯರ್ಥಿ ನಾನೇ ಎಂದು ಬೆಂಬಲಿಸಿ: ಎಚ್‌.ಡಿ.ಕುಮಾರಸ್ವಾಮಿ

ಈ ಸಂದರ್ಭದಲ್ಲಿ ಸಂಸದ ಜಿ ಎಸ್ ಬಸವರಾಜ್, ಚುನಾವಣಾ ಉಸ್ತುವಾರಿ, ಬೈರಣ್ಣ, ಜಿಲ್ಲಾ ಉಪಾಧ್ಯಕ್ಷ ಎಚ್ ಟಿ ಬೈರಪ್ಪ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಸಿದ್ದರಾಮಣ್ಣ, ಮಂಡಲ ಅಧ್ಯಕ್ಷ ಬಿ.ಎಸ್ ಪಂಚಾಕ್ಷರಿ, ಪ್ರಧಾನ ಕಾರ್ಯದರ್ಶಿ ಯತೀಶ್,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಶೇಖರ್ ಬಾಬು, ಡಾ. ನವ್ಯ ಬಾಬು, ಭಾರತಿ ಹಿತೇಶ್, ಮುಖಂಡರಾದ ಜಿ ಎನ್ ಬೆಟ್ಟಸ್ವಾಮಿ, ಹೊನ್ನಗಿರಿ ಗೌಡ, ಎನ್. ಸಿ ಪ್ರಕಾಶ್, ಸಾಗರನಹಳ್ಳಿ ವಿಜಯ್ ಕುಮಾರ್ , ಅಣ್ಣಪ್ಪ ಸ್ವಾಮಿ, ಕೃಷ್ಣಮೂರ್ತಿ, ಶಿವಕುಮಾರ್, ಸೇರಿದಂತೆ ಹಲವರು ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ