ಕಾಂಗ್ರೆಸ್‌ನ ಗ್ಯಾರಂಟಿಗೆ ಬಿಜೆಪಿ ಯೋಜನೆ ಹಣ ಕಡಿತ ಬೇಡ: ಮಾಜಿ ಸಿಎಂ ಬೊಮ್ಮಾಯಿ

By Kannadaprabha NewsFirst Published Jun 2, 2023, 4:45 AM IST
Highlights

ಬಿಜೆಪಿ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳು ಬಡವರು, ದೀನದಲಿತರು ಸೇರಿದಂತೆ ಎಲ್ಲಾ ವರ್ಗದವರ ಹಿತ ಕಾಪಾಡಲು ಅನುಕೂಲಕರವಾಗಿರುವುದರ ಜತೆಗೆ ಆ ವರ್ಗದ ಏಳ್ಗೆಗೆ ಪೂರಕವಾಗಿರುವ ಹಿನ್ನೆಲೆಯಲ್ಲಿ ಯೋಜನೆಗಳಿಗೆ ನೀಡುತ್ತಿರುವ ಅನುದಾನವನ್ನು ಕಡಿತಗೊಳಿಸಬಾರದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. 

ಬೆಂಗಳೂರು (ಜೂ.02): ಬಿಜೆಪಿ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳು ಬಡವರು, ದೀನದಲಿತರು ಸೇರಿದಂತೆ ಎಲ್ಲಾ ವರ್ಗದವರ ಹಿತ ಕಾಪಾಡಲು ಅನುಕೂಲಕರವಾಗಿರುವುದರ ಜತೆಗೆ ಆ ವರ್ಗದ ಏಳ್ಗೆಗೆ ಪೂರಕವಾಗಿರುವ ಹಿನ್ನೆಲೆಯಲ್ಲಿ ಯೋಜನೆಗಳಿಗೆ ನೀಡುತ್ತಿರುವ ಅನುದಾನವನ್ನು ಕಡಿತಗೊಳಿಸಬಾರದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ಬಿಜೆಪಿ ಸರ್ಕಾರದ ಯೋಜನೆಗಳಿಗೆ ಅನುದಾನವನ್ನು ಕಡಿತಗೊಳಿಸದೆ ಮುಂದುವರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕಳೆದ ಎರಡು ವಾರದಿಂದ ಕಾಂಗ್ರೆಸ್‌ ಪಕ್ಷ ನೀಡಿರುವ ಐದು ಗ್ಯಾರಂಟಿಗಳ ಅನುಷ್ಠಾನಕ್ಕಾಗಿ ಹಲವಾರು ಸಭೆಗಳನ್ನು ನಡೆಸಲಾಗಿದೆ. ಅದರಲ್ಲಿಯೂ ಆರ್ಥಿಕ ಇಲಾಖೆಯ ಅಧಿಕಾರಿಗಳ ಜತೆ ಸಭೆ ನಡೆಸುತ್ತಿರುವುದು ತಿಳಿದಿರುವ ಸಂಗತಿ. ತಾವೇ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿರುವಂತೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಲು ಸುಮಾರು ಐವತ್ತು ಸಾವಿರ ಕೋಟಿ ರುಪಾಯಿ ಬೇಕೆಂದು ರಾಜ್ಯದ ಜನತೆಗೆ ತಿಳಿಸಿದ್ದೀರಿ. ಈ ಯೋಜನೆಗಳ ಅನುಷ್ಠಾನದ ಸಂದರ್ಭದಲ್ಲಿ ಕೆಲವು ಎಚ್ಚರಿಕೆ ವಹಿಸುವುದು ಅಗತ್ಯ ಇದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ತನ್ನ ಮಾತು ಕೇಳದವರನ್ನು ಧ್ವಂಸ ಮಾಡುವುದು ಜನಾರ್ದನ ರೆಡ್ಡಿ ಹುಟ್ಟುಗುಣ: ಸೋಮಶೇಖರ ರೆಡ್ಡಿ

ರಾಜ್ಯದ ಪ್ರಮುಖ ಕ್ಷೇತ್ರಗಳಾದ ಶಿಕ್ಷಣ, ಆರೋಗ್ಯ, ಮಹಿಳಾ ಅಭಿವೃದ್ಧಿ, ಮೂಲಭೂತ ಸೌಕರ್ಯ, ರೈತರು, ದೀನ ದಲಿತರು ಹಾಗೂ ಹಿಂದುಳಿದ ವರ್ಗಗಳ ಹಿತ ಕಾಪಾಡುವ ಅವಶ್ಯಕತೆ ಇದೆ ಎನ್ನುವ ಮಾತು ಜನರಲ್ಲಿ ಕೇಳಿಬರುತ್ತಿದೆ. ಅದನ್ನು ತಮ್ಮ ಗಮನಕ್ಕೆ ತರಲು ಬಯಸುತ್ತೇನೆ. ರೈತರಿಗೆ ನೀಡಲಾಗುವ ಬಡ್ಡಿ ರಹಿತ ಅಲ್ಪಾವಧಿ ಸಾಲದ ಮಿತಿ ಮೂರು ಲಕ್ಷದಿಂದ ಐದು ಲಕ್ಷಕ್ಕೆ ಹೆಚ್ಚಿಸಲಾಗಿದ್ದು, ಹಣಕಾಸಿನ ಕಡಿತ ಮಾಡುವುದು ಸೂಕ್ತವಲ್ಲ. ರೈತರ ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಆವರ್ತ ನಿಧಿಯನ್ನು 3,500 ಕೋಟಿ ರು.ಗಳಿಗೆ ಹೆಚ್ಚಿಸಲು 2023-24ರ ಆಯವ್ಯಯದಲ್ಲಿ 1500 ಕೋಟಿ ರು. ಒದಗಿಸಲಾಗಿದ್ದು, ಇದು ಅತ್ಯಂತ ಅಗತ್ಯವಾಗಿದ್ದು ಇದನ್ನು ಕಡಿತಗೊಳಿಸಬಾರದು ಎಂದು ಬೊಮ್ಮಾಯಿ ಹೇಳಿದ್ದಾರೆ.

ವಿವೇಕ ಯೋಜನೆಯಡಿಯಲ್ಲಿ 7,601 ಶಾಲಾ ಕೊಠಡಿಗಳು ಹಾಗೂ ಇತರ ಯೋಜನೆ ಅಡಿಯಲ್ಲಿ ಸೇರಿ ಒಟ್ಟು 9,556 ಶಾಲಾ ಕೊಠಡಿಗಳ ನಿರ್ಮಾಣವನ್ನು ಪ್ರಸ್ತುತ ವರ್ಷ ಪೂರ್ಣಗೊಳಿಸುವ ಉದ್ದೇಶವಿದ್ದು, ಇದರಲ್ಲಿ ಅನುದಾನ ಕಡಿತ ಮಾಡಬಾರದು. ರೈತರು, ಕಾರ್ಮಿಕರು, ಮೀನುಗಾರರು, ನೇಕಾರರು ಇತರರಿಗೆ ರೈತ ವಿದ್ಯಾನಿಧಿ ಕಾರ್ಯಕ್ರಮ ಮುಂದುವರೆಸುವುದು ಅತ್ಯಂತ ಅವಶ್ಯವಿದೆ. ಹೀಗಾಗಿ ಸೂಕ್ತ ಅನುದಾನವನ್ನು ಆಯವ್ಯಯದಲ್ಲಿ ಒದಗಿಸಲಾಗಿದೆ ಎಂದಿದ್ದಾರೆ.

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು: ಶಾಸಕ ಹರೀಶ್‌ ಪೂಂಜ

ರೈತರಿಗೆ ನೀಡಲಾಗುವ ಬಡ್ಡಿ ರಹಿತ ಸಾಲದ ಮಿತಿ 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸಿದ್ದೇವೆ. ಅದಕ್ಕೆ ಹಣಕಾಸಿನ ಕಡಿತ ಮಾಡಬೇಡಿ. ರೈತರ ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಆವರ್ತ ನಿಧಿಯನ್ನು 3,500 ಕೋಟಿ ರು.ಗೆ ಹೆಚ್ಚಿಸಲು ಬಜೆಟ್‌ನಲ್ಲಿ 1500 ಕೋಟಿ ರು. ನೀಡಿದ್ದೇವೆ. ಅದನ್ನೂ ಕಡಿತಗೊಳಿಸಬಾರದು.
- ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ

click me!