ಚುನಾವಣಾ ಸಮಯದಲ್ಲಿ ಮನೆ, ಮನೆಗೆ ಗ್ಯಾರಂಟಿ ಕಾರ್ಡ್ ನೀಡಿದ ಹಾಗೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು ಸಾಧ್ಯವಿಲ್ಲ. ನಿರ್ಗತಿಕರು, ಬಡವರು ಯಾರಿದ್ದಾರೆ ಅವರನ್ನು ಗುರುತಿಸಿ ಗ್ಯಾರಂಟಿ ಯೋಜನೆಗಳನ್ನು ತಲುಪಿಸುತ್ತೇವೆ ಎಂದು ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟಪಡಿಸಿದ್ದಾರೆ.
ತುಮಕೂರು (ಮೇ.29): ಚುನಾವಣಾ ಸಮಯದಲ್ಲಿ ಮನೆ, ಮನೆಗೆ ಗ್ಯಾರಂಟಿ ಕಾರ್ಡ್ ನೀಡಿದ ಹಾಗೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು ಸಾಧ್ಯವಿಲ್ಲ. ನಿರ್ಗತಿಕರು, ಬಡವರು ಯಾರಿದ್ದಾರೆ ಅವರನ್ನು ಗುರುತಿಸಿ ಗ್ಯಾರಂಟಿ ಯೋಜನೆಗಳನ್ನು ತಲುಪಿಸುತ್ತೇವೆ ಎಂದು ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟಪಡಿಸಿದ್ದಾರೆ. ನೂತನ ಸಚಿವರಾದ ಬಳಿಕ ನಗರಕ್ಕೆ ಆಗಮಿಸಿದ ರಾಜಣ್ಣ ಅವರಿಗೆ ಟೋಲ್ಗೇಟ್ ಬಳಿ ಆತ್ಮೀಯವಾಗಿ ಸ್ವಾಗತ ಕೋರಲಾಯಿತು. ಈ ವೇಳೆ, ಸುದ್ದಿಗಾರರ ಜೊತೆ ಮಾತನಾಡಿ, ನಾವು ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ 5 ಗ್ಯಾರಂಟಿಗಳನ್ನು ಜಾರಿ ಮಾಡಿಯೇ ತೀರುತ್ತೇವೆ. ಆದರೆ, ಎಲ್ಲರಿಗೂ ಈ ಯೋಜನೆಗಳನ್ನು ನೀಡಲು ಸಾಧ್ಯವಿಲ್ಲ.
ಬಡವರ ಪಾಲಿನ ಸೌಲಭ್ಯಗಳನ್ನು ಆರ್ಥಿಕವಾಗಿ ಬಲಾಢ್ಯರಾಗಿರುವವರಿಗೆ ನೀಡುವ ಅಗತ್ಯವಿಲ್ಲ. ಹೀಗಾಗಿ, ಯೋಜನೆಯ ಫಲಾನುಭವಿಗಳಾಗಲು ಅರ್ಹರನ್ನು ಗುರುತಿಸಬೇಕು. ಹೀಗಾಗಿ, ಮುಂದಿನ ಕ್ಯಾಬಿನೆಟ್‌ಗೆ ಎಲ್ಲಾ ಸಿದ್ಧತೆಗಳೊಂದಿಗೆ ಬರಲು ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು. ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ಯೋಜನೆಯನ್ನು ಜಾರಿಗೊಳಿಸುತ್ತೇವೆ. ಸ್ವಲ್ಪ ಸಮಯಾವಕಾಶ ಬೇಕು. ಜನರು ಮುಗ್ಧರಿದ್ದಾರೆ. ಆದರೆ, ಅವರನ್ನು ಎತ್ತಿಕಟ್ಟುವ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ. ಹಾಗೆ ಮಾಡಬಾರದು. ಯೋಜನೆಗಳ ಸಾಧಕ-ಬಾಧಕಗಳನ್ನು ಚರ್ಚೆ ಮಾಡಿ, ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ ಎಂದು ಭರವಸೆ ನೀಡಿದರು.
ಡೆಪ್ಯುಟಿ ಸ್ಪೀಕರ್ ಸ್ಥಾನ ನನಗೆ ಬೇಡ, ಶಾಸಕನಾಗಿಯೇ ಮುಂದುವರಿಯುತ್ತೇನೆ: ಶಾಸಕ ಸಿ.ಪುಟ್ಟರಂಗಶೆಟ್ಟಿ
ಐದು ಗ್ಯಾರಂಟಿ ಜಾರಿಗೆ ತರುವಲ್ಲಿ ಅನುಮಾನವಿಲ್ಲ: ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವದಲ್ಲಿ ನೀಡಿರುವ ಐದು ಗ್ಯಾರಂಟಿಯನ್ನು ಜಾರಿಗೆ ತರುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ, ವಿರೋಧಪಕ್ಷಗಳು ಈ ನಿಟ್ಟಿನಲ್ಲಿ ಮುಗ್ಧ ಜನರನ್ನು ಎತ್ತಿಕಟ್ಟುವ ಕೆಲಸ ಮಾಡಬಾರದು ಎಂದು ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ಸಚಿವರಾದ ನಂತರ ಇದೇ ಮೊದಲ ಬಾರಿಗೆ ತುಮಕೂರು ನಗರಕ್ಕೆ ಆಗಮಿಸಿದ ಅವರನ್ನು ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ಜಾಸ್‌ಟೋಲ್‌ನಿಂದ ಬೈಕ್ ರಾರಯಲಿಯಲ್ಲಿ ಮೆರವಣಿಗೆ ಮೂಲಕ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಕರೆ ತಂದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಇದೇ ರೀತಿ ಜನರನ್ನು ಎತ್ತಿಕಟ್ಟುವ ಕೆಲಸ ಮಾಡಿದರೆ, ಬಿಜೆಪಿಗರು ವಿಶ್ವಗುರು ಎಂದು ಕೊಂಡಾಡುವ ಮೋದಿ ನೀಡಿದ ವರ್ಷಕ್ಕೆ 2 ಕೋಟಿ ಉದ್ಯೋಗ, ಎಲ್ಲರ ಖಾತೆಗೆ 15 ಲಕ್ಷ ಕಾಳಧನ, 2022ರೊಳಗೆ ಎಲ್ಲರಿಗೂ ಪಕ್ಕಾಮನೆ ಇವುಗಳ ಕುರಿತು ಅಭಿಯಾನ ಆರಂಭಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಓರ್ವ ವಚನಭ್ರಷ್ಟ. 2006ರಲ್ಲಿ ಬಿಜೆಪಿ, ಜೆಡಿಎಸ್ ನಡುವಿನ ಒಪ್ಪಂದದಂತೆ ಬಿ.ಎಸ್.ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟಿದ್ದರೇ, ಇಂದು ಜೆಡಿಎಸ್‌ಗೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. 2023ರ ಚುನಾವಣೆಯಲ್ಲಿ ನಮಗೆ ಬಹುಮತ ಬರಲಿಲ್ಲವೆಂದರೆ ಪಕ್ಷವನ್ನು ವಿಸರ್ಜಿಸುವುದಾಗಿ ಮಾತುಕೊಟ್ಟಿದ್ದ ಹೆಚ್.ಡಿ.ಕುಮಾರಸ್ವಾಮಿ ಮತ್ತು ಸಿ.ಎಂ.ಇಬ್ರಾಹಿಂ ತಾವು ಕೊಟ್ಟಮಾತನ್ನು ಮೊದಲು ಜಾರಿಗೆ ತರಲಿ.
ಕೊಟ್ಟ ಭರವಸೆ ಈಡೇರಿಸುವುದು ಉತ್ತಮ: ಸರ್ಕಾರಕ್ಕೆ ಕಿವಿಮಾತು ಹೇಳಿದ ಬಸವರಾಜ ಹೊರಟ್ಟಿ
ಆ ಮೇಲೆ ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳ ಬಗ್ಗೆ ಮಾತನಾಡಲಿ ಎಂದು ತಿರುಗೇಟು ನೀಡಿದರು. ನನ್ನ ಅಭಿಪ್ರಾಯದಲ್ಲಿ ಬಡವರಿಗೆ ನ್ಯಾಯವಾಗಿ ದೊರೆಯಬೇಕಾದ ಸವಲತ್ತು ಉಳ್ಳುವರು ಪಡೆದರೆ, ಹೆಣದ ಮೇಲಿನ ಅನ್ನ ತಿನ್ನದಂತೆ. ಸರಕಾರ ಕೆಲವು ಸವಲತ್ತು ನೀಡುವಾಗ ನೀತಿ, ನಿಯಮ ರೂಪಿಸಬೇಕಾಗುತ್ತದೆ. ಯಾರಿಗೆಂದರೆ ಅವರಿಗೆ ನೀಡಲಾಗದು. ಜೂನ್ 1ಕ್ಕೆ ಎಲ್ಲಾ ಮಾಹಿತಿಯೊಂದಿಗೆ ಸಭೆಗೆ ಬರುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಸಾಧಕ, ಭಾದಕಗಳನ್ನು ಚರ್ಚಿಸಿ, ಗ್ಯಾರಂಟಿಗಳನ್ನು ಜಾರಿಗೆ ತರಲಿದ್ದೇವೆ ಎಂದು ಕೆ.ಎನ್.ರಾಜಣ್ಣ ಸ್ಪಷ್ಟಪಡಿಸಿದರು.