ವಿಧಾನಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿಒಂದು ವಾರದೊಳಗೆ ಅಂತಿಮವಾಗಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ನಳೀನ್‌ಕುಮಾರ್ ಕಟೀಲ್ ತಿಳಿಸಿದರು.
ಬಳ್ಳಾರಿ (ಏ.1) : ವಿಧಾನಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿಒಂದು ವಾರದೊಳಗೆ ಅಂತಿಮವಾಗಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ನಳೀನ್‌ಕುಮಾರ್ ಕಟೀಲ್ ತಿಳಿಸಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭ್ಯರ್ಥಿಗಳ ಆಯ್ಕೆ ಸಂಬಂಧ ಇಡೀ ರಾಜ್ಯದಲ್ಲಿ ಎಲ್ಲ ಜಿಲ್ಲೆಗಳಿಗೆ ತಂಡಗಳನ್ನು ಕಳುಹಿಸಿ, ಕಾರ್ಯಕರ್ತರ ಅಭಿಪ್ರಾಯಗಳನ್ನು ಸಂಗ್ರಹಿಸುತ್ತಿದ್ದೇವೆ. ಅಭಿಪ್ರಾಯಗಳ ಮಾನದಂಡ ಇಟ್ಟುಕೊಂಡು ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಶುರುಗೊಳಿಸಿದ್ದೇವೆ. ಇನ್ನೊಂದು ವಾರದೊಳಗೆ ಪೂರ್ಣಗೊಳ್ಳಲಿದೆ ಎಂದರು.
ಸಿದ್ದು ಕ್ಷೇತ್ರ ವರುಣಾದಿಂದ ವಿಜಯೇಂದ್ರ ಸ್ಪರ್ಧೆ: ಕಟೀಲ್ ಹೇಳಿದ್ದಿಷ್ಟು
ಕೂಡ್ಲಿಗಿ ಶಾಸಕ ಎನ್.ವೈ. ಗೋಪಾಲ ಕೃಷ್ಣ (NY Gopalakrishna)ಅವರು ಪಕ್ಷಕ್ಕೆ ರಾಜೀನಾಮೆ ನೀಡುತ್ತಿರುವ ಬಗ್ಗೆ ಮಾಧ್ಯಮಗಳ ಮೂಲಕ ಗೊತ್ತಾಗಿದೆ. ಅವರ ಜತೆ ಮಾತುಕತೆ ಮಾಡಿದ್ದೆವು. ಪಕ್ಷ ಬಿಡಲು ಯಾವುದೇ ಕಾರಣಗಳನ್ನು ಅವರು ನೀಡಿಲ್ಲ. ಚುನಾವಣೆ ಸಂದರ್ಭಗಳಲ್ಲಿ ಈ ರೀತಿಯ ಪ್ರಕ್ರಿಯೆಗಳು ನಡೆಯುತ್ತವೆ. ಪಕ್ಷದಲ್ಲಿದ್ದು ಅಧಿಕಾರ ಅನುಭವಿಸಿ ತಮ್ಮ ಅನುಕೂಲಕ್ಕಾಗಿ ಬೇರೆಡೆ ಹೋಗುವುದು ಸರ್ವೆಸಾಮಾನ್ಯವಾಗಿ ಕಂಡುಬರುತ್ತದೆ. ಗೋಪಾಲಕೃಷ್ಣ ಅವರ ಜತೆ ಬಿಜೆಪಿ(BJP)ಯ ಯಾವ ಶಾಸಕರು ಕಾಂಗ್ರೆಸ್‌ಗೆ ಹೋಗುವುದಿಲ್ಲ. ನಮ್ಮ ಪಕ್ಷಕ್ಕೆ ಬರಲು ಸಾಕಷ್ಟುಜನರು ಸಿದ್ಧರಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲವೂ ಗೊತ್ತಾಗುತ್ತದೆ; ಕಾದು ನೋಡಿ ಎಂದರು.
ಚುನಾವಣೆ ಪ್ರಕ್ರಿಯೆಯಲ್ಲಿ ಬಿಜೆಪಿ ಮುಂದಿದೆ. ನಾಡಿನ ಮತದಾರರ ಒಲವು, ವಾತಾವರಣ ನಮ್ಮ ಪರವಾಗಿದೆ. ಹೀಗಾಗಿ ರಾಜ್ಯದಲ್ಲಿ ಬಿಜೆಪಿ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್‌ನ ಸಿಎಂ ಅಭ್ಯರ್ಥಿಗೆ ಸ್ಪರ್ಧಿಸಲು ಕ್ಷೇತ್ರವೇ ಸಿಗದೆ ಒದ್ದಾಡುತ್ತಿರುವುದನ್ನು ನೋಡುತ್ತಿದ್ದೇವೆ. ಕಾಂಗ್ರೆಸ್ ಹೀನಾಯ ಸೋಲು ಕಾಣುವುದು ಖಚಿತ ಎಂದರು.
ವರುಣಾ ಕ್ಷೇತ್ರದಿಂದ ವಿಜಯೇಂದ್ರ(BY Vijayendra) ಸ್ಪರ್ಧೆಸುವ ಕುರಿತು ಕೇಳಲಾದ ಪ್ರಶ್ನೆಗೆ ಸ್ಪಷ್ಟಉತ್ತರ ನೀಡದ ಕಟೀಲ್(Nalin kumar kateel), ರಾಜ್ಯದ ಎಲ್ಲ ಕಡೆ ಅಭಿಪ್ರಾಯ ಸಂಗ್ರಹ ನಡೆದಿದೆ ಎಂದರು.
ವಾರದೊಳಗೆ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್: ಸಚಿವ ಕೆ.ಸುಧಾಕರ್
ಪಕ್ಷದ ಜಿಲ್ಲಾಧ್ಯಕ್ಷ ಮುರಹರಗೌಡ ಗೋನಾಳ್, ಪಕ್ಷದ ಹಿರಿಯ ಮುಖಂಡ ಡಾ. ಮಹಿಪಾಲ್ ಇದ್ದರು.