ಬಿಜೆಪಿ ಆಡಳಿತದಿಂದ ಮಾತ್ರ ದೇಶದ ಉನ್ನತಿ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ

By Kannadaprabha News  |  First Published Mar 19, 2023, 10:02 PM IST

ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ರಾಯಬಾರಿಯಾಗಿ ಜಗತ್ತಿನಲ್ಲಿ ದೇಶದ ಗೌರವವನ್ನು ಎತ್ತಿ ಹಿಡಿದಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತೇ ಬಿಜೆಪಿ ಅಧಿಕಾರಕ್ಕೆ ಬರುವಂತೆ ಮಾಡಲು ಸಂಕಲ್ಪ ಮಾಡಬೇಕಾಗಿದೆ ಎಂದು ಲಕ್ಷ್ಮಣ ಸವದಿ ಹೇಳಿದರು. 


ಹಳಿಯಾಳ (ಮಾ.19): ಬಿಜೆಪಿ ಪಕ್ಷದ ಆಡಳಿತದಿಂದ ಮಾತ್ರ ದೇಶವು ಉನ್ನತಿ ಸಾಧಿಸಲು ಸಾಧ್ಯವಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ರಾಯಬಾರಿಯಾಗಿ ಜಗತ್ತಿನಲ್ಲಿ ದೇಶದ ಗೌರವವನ್ನು ಎತ್ತಿ ಹಿಡಿದಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತೇ ಬಿಜೆಪಿ ಅಧಿಕಾರಕ್ಕೆ ಬರುವಂತೆ ಮಾಡಲು ಸಂಕಲ್ಪ ಮಾಡಬೇಕಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಲಿ ವಿಪ ಸದಸ್ಯ ಲಕ್ಷ್ಮಣ ಸವದಿ ಹೇಳಿದರು. ಪಟ್ಟಣದಲ್ಲಿ ಆಯೋಜನೆ ಮಾಡಲಾಗಿದ್ದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿ, ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಮೂರನೇಯ ಬಾರಿಗೆ ದೇಶದ ಪ್ರಧಾನಿಯಾಗುವುದರಲ್ಲಿ ಯಾವುದೇ ಸಂಶಯವೇ ಇಲ್ಲ. 

ದೇಶದಲ್ಲಿ ಡಬಲ್‌ ಎಂಜಿನ ಸರ್ಕಾರವು ದೇಶವನ್ನು ಪ್ರಗತಿಯ ಪಥದಲ್ಲಿ ಮುನ್ನಡೆಸುತ್ತಿದ್ದು ಇದನ್ನು ಜಗತ್ತಿನ ಜನರು ಗಮನಿಸುತ್ತಿದ್ದಾರೆ ಎಂದರು. ಮಾಜಿ ಶಾಸಕ ಸುನೀಲ್‌ ಹೆಗಡೆ ಮಾತನಾಡಿ, ಕ್ಷೇತ್ರವನ್ನು 4 ದಶಕಗಳ ಕಾಲ ಪ್ರತಿನಿಧಿಸಿದ ದೇಶಪಾಂಡೆ ಅವರ ಸಾಧನೆ ಶೂನ್ಯವಾಗಿದೆ. ಮುಂದಿನ ಚುನಾವಣೆಯಲ್ಲಿ ಜನರು ದೇಶಪಾಂಡೆ ಅವರಿಗೆ ತಕ್ಕ ಪಾಠ ಕಲಿಸಲು ಈಗಾಗಲೇ ಸಂಕಲ್ಪ ಮಾಡಿದ್ದಾರೆ. ಬಿಜೆಪಿ ಪಕ್ಷವು ಮುಂದಿನ ಚುನಾವಣೆಯಲ್ಲಿ ಜಯಭೇರಿ ಬಾರಿಸುವುದರ ಜೊತೆಗೆ ಹಳಿಯಾಳ ಮತ ಕ್ಷೇತ್ರದಲ್ಲಿಯೂ ಖಾತೆ ತೆರೆಯಲಿದೆ. ಈಗಾಗಲೇ ಕ್ಷೇತ್ರದ ಜನರು ಮತ್ತು ಪಕ್ಷದ ಕಾರ್ಯಕರ್ತರು ಬಿಜೆಪಿ ಗೆಲ್ಲಿಸಲು ಸಂಕಲ್ಪ ಮಾಡಿದ್ದು ಅದು ಮುಂದಿನ ದಿನಗಳಲ್ಲಿ ಈಡೇರಲಿದೆ ಎಂದರು.

Tap to resize

Latest Videos

ಕರ್ನಾಟಕ ಸಂಘ ಕತಾರ್ ವತಿಯಿಂದ 'ಕಬ್ಜ' ಚಿತ್ರದ ವಿಶೇಷ ಪ್ರದರ್ಶನ

ಕಲಘಟಗಿ ತಾಲೂಕಿನಿಂದ ಕಾವಲವಾಡ ಮತ್ತು ಮುರ್ಕವಾಡ ಗ್ರಾಮಗಳ ಮಾರ್ಗದಿಂದ ಪಟ್ಟಣಕ್ಕೆ ಆಗಮಿಸಿದ ವಿಜಯ ಸಂಕಲ್ಪ ಯಾತ್ರೆಯ ರಥವು ಬಸವೇಶ್ವರ ಸರ್ಕಲ್, ಮರಾಠಾ ಭವನ, ಬಸ್‌ ನಿಲ್ದಾಣ, ಮೇದಾರ ಗಲ್ಲಿ, ಸಂಗೋಳ್ಳಿ ರಾಯಣ್ಣ ಸರ್ಕಲ್, ಬಜಾರ್‌, ಮುಖ್ಯಬೀದಿ ಮೂಲಕ ಸಾಗಿ ನೂತನ ಪುರಸಭೆ ಮುಂದಿನ ಗ್ರಾಮದೇವಿ ಮೈದಾನ ತಲುಪಿತು. ಯಾತ್ರೆಯ ಉದ್ದಕ್ಕೂ ವಿವಿಧ ವಾದ್ಯಗಳ ಮೆರವಣಿಗೆ ಹಾಗೂ ಕಾರ್ಯಕರ್ತರ ಉತ್ಸಾಹ ಕಂಡು ಬಂದಿತು. ವೇದಿಕೆಯ ಮೇಲೆ ಮಂಗೇಶ ದೇಶಪಾಂಡೆ, ಶ್ರೀಪತಿ ಭಚ್‌, ಅಶೋಕ ಚಲವಾದಿ, ಅನಿಲ್‌ ಮುತ್ನಾಳೆ, ಅಜೋಬಾ, ವಿ.ಎಂ. ಪಾಟೀಲ, ನಾಗರಾಜ ನಾಯ್ಕ, ವೆಂಕಟೇಶ ನಾಯ್ಕ, ಯಲ್ಲಪ್ಪ ಹೊನ್ನೋಜಿ ಮತ್ತಿತರರು ಹಾಜರಿದ್ದರು.

ಟಿಕೆಟ್‌ ನೀಡುತ್ತಾರೆಂಬ ಆತ್ಮವಿಶ್ವಾಸ: ಅಥಣಿ ಮತಕ್ಷೇತ್ರದ ಮತದಾರರನ್ನು, ವಿವಿಧ ಸಮುದಾಯಗಳ ಮುಖಂಡರನ್ನು ಕೇಳಿ ಚುನಾವಣೆಗೆ ಹೋಗುವುದು ಸೂಕ್ತ ಎಂದೆನಿಸಿದೆ. ಹೀಗಾಗಿ ಎಲ್ಲರ ಅಭಿಪ್ರಾಯ ಪಡೆದು ಪಕ್ಷದ ವರಿಷ್ಠರಿಗೆ ಟಿಕೆಟ್‌ ಕೇಳುತ್ತೇನೆ. ಪಕ್ಷದ ವರಿಷ್ಠರಿಗೆ ನಾನು ಟಿಕೆಟ್‌ ಕೇಳಿದರೇ ಅವರು ನಿರಾಕರಿಸದೇ ನನಗೆ ಟಿಕೆಟ್‌ ನೀಡುತ್ತಾರೆಂಬ ಆತ್ಮ ವಿಶ್ವಾಸವಿದೆ ಎಂದು ಲಕ್ಷ್ಮಣ ಸವದಿ ಹೇಳಿದರು. ಪಟ್ಟಣದ ನೂರಾನಿ ಹಾಲ್‌ನಲ್ಲಿ ಮುಸ್ಲಿಂ ಸಮುದಾಯದ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಮುಂಬರುವ ವಿಧಾನಸಭಾ ಚುನಾವಣೆ ವಿಚಾರವಾಗಿ ನನ್ನ ಸ್ವಾಭಿಮಾನಕ್ಕೆ ಧಕ್ಕೆ ತರುವ ಪ್ರಯತ್ನಗಳು ನಡೆಯುತ್ತಿವೆ. ಹೀಗಾಗಿ ಮಾ.27 ರಂದು ಎಲ್ಲ ಸಮುದಾಯದವರ ಒಪ್ಪಿಗೆ ಪಡೆದು ಒಂದು ತೀರ್ಮಾನಕ್ಕೆ ಬರುತ್ತಿದ್ದೇನೆ. ನೀವು ಯಾವತ್ತೂ ನನ್ನ ಬೆಂಬಲವಾಗಿ ನಿಲ್ಲಬೇಕು ಎಂದು ಮುಸ್ಲಿಂ ಸಮುದಾಯಕ್ಕೆ ಮನವಿ ಮಾಡಿದರು.

ಡಬಲ್‌ ಎಂಜಿನ್‌ ಸರ್ಕಾರದಿಂದ ದಾಹ ಮುಕ್ತ ರಾಜ್ಯ: ಸಚಿವ ಭೈರತಿ ಬಸವರಾಜ್

ನನ್ನ ಪಾಡಿಗೆ ನಾನು ಸುಮ್ಮನಿದ್ದರೂ, ಕೆಲವರು ನನ್ನನ್ನು ಸುಮ್ಮನೆ ಬಿಡುತ್ತಿಲ್ಲ. ಹಾಗಾಗಿ ಇಂದು ನಾನು ನಿಮ್ಮ ಮುಂದೆ ಬಂದಿದ್ದೇನೆ. ನಿಮ್ಮ ಅಭಿಪ್ರಾಯ ನನಗೆ ಮುಖ್ಯವಾಗಿದೆ. ನಾನು ಭಾರತೀಯ ಜನತಾ ಪಕ್ಷದಲ್ಲಿ ಕಳೆದ 20 ವರ್ಷಗಳಿಂದ ಶಾಸಕನಾಗಿ ಸಚಿವನಾಗಿ, ಉಪಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ನನ್ನ ಅಧಿಕಾರ ಅವಧಿಯಲ್ಲಿ ಯಾವುದೇ ಜಾತಿಭೇದ ಮಾಡದೆ ಎಲ್ಲ ಸಮುದಾಯಗಳ ವಿಶ್ವಾಸ ಪಡೆದುಕೊಂಡು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ಬರುವ 27 ರೊಳಗಾಗಿ ತಾಲೂಕಿನ ಎಲ್ಲ ಸಮುದಾಯದ ಮುಖಂಡರ ಸಭೆ ಕರೆಯುತ್ತೇನೆ. ಅವರು ಅಥಣಿಯಿಂದ ಚುಣಾವಣೆ ಸ್ಪರ್ಧೆ ಮಾಡು ಎಂದರೇ ನಾನು ಪಕ್ಷದಲ್ಲಿ ಟಿಕೆಟ್‌ ಕೇಳುತ್ತೇನೆ. ಟಿಕೆಟ್‌ ನೀಡುವುದು ಬಿಡುವುದು ಪಕ್ಷದ ವರಿಷ್ಠರಿಗೆ ಬಿಟ್ಟವಿಚಾರ. ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧರಾಗಿ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.

click me!