ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ಪ್ರಪಂಚದ ದೊಡ್ಡ ದೊಡ್ಡ ನಾಯಕರು ಬಯಸುತ್ತಿದ್ದು, ನೀವು ನನಗೆ ನೀಡುವ ಮತ, ಮೋದಿ ಅವರಿಗೆ ನೀಡಿದ ಮತಗಳಾಗಲಿವೆ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ತಿಳಿಸಿದ್ದಾರೆ.
ತುಮಕೂರು (ಮಾ.17): ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ಪ್ರಪಂಚದ ದೊಡ್ಡ ದೊಡ್ಡ ನಾಯಕರು ಬಯಸುತ್ತಿದ್ದು, ನೀವು ನನಗೆ ನೀಡುವ ಮತ, ಮೋದಿ ಅವರಿಗೆ ನೀಡಿದ ಮತಗಳಾಗಲಿವೆ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ತಿಳಿಸಿದ್ದಾರೆ. ನಗರದ ಎಸ್.ಐ.ಟಿ. ಕಾಲೇಜು ಮುಂಭಾಗದಿಂದ ಗಂಗೋತ್ರಿ ರಸ್ತೆ, ಎಸ್.ಐ.ಟಿ. ಮುಖ್ಯ ರಸ್ತೆ,ಎಸ್.ಎಸ್.ಪುರಂ ರಸ್ತೆಯ ಮೂಲಕ ಭದ್ರಮ್ಮ ವೃತದವರೆಗೆ ಜಿಲ್ಲಾ ಬಿಜೆಪಿ ಹಮ್ಮಿಕೊಂಡಿದ್ದ ಮೆರವಣಿಗೆಯಲ್ಲಿ ಭಾಗವಹಿಸಿ, ಪ್ರಚಾರ ನಡೆಸಿದ ಅವರು, ಇದು ಸಿದ್ದರಾಮಯ್ಯನವರ ಗ್ಯಾರಂಟಿಗಳಿಗಾಗಿ ನಡೆಯುತ್ತಿರುವ ಚುನಾವಣೆಯಲ್ಲ, ದೇಶದ ಭದ್ರತೆಗಾಗಿ ನಡೆಯುತ್ತಿರುವ ಚುನಾವಣೆ ಎಂದರು.
ವಿ.ಸೋಮಣ್ಣ ತುಮಕೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಬೇಕೆಂಬುದು ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇ ಗೌಡ, ಎಚ್.ಡಿ.ಕುಮಾರಸ್ವಾಮಿ ಮತ್ತು ಎಚ್.ಡಿ.ರೇವಣ್ಣ ಅವರು ಸೂಚನೆಯಾಗಿತ್ತು. ಆದರಂತೆ ನಮ್ಮ ಪಕ್ಷದ ನಾಯಕರು ನನಗೆ ಟಿಕೇಟ್ ನೀಡಿದ್ದಾರೆ. ಸಿದ್ದಗಂಗಾ ಶ್ರೀಗಳು ಮತ್ತು ಆದಿಚುಂಚನಗಿರಿ ಸ್ವಾಮೀಜಿಗಳ ಆಶೀರ್ವಾದ ನನಗಿದೆ. ಅಲ್ಲದೆ ಇಂದು ಬೆಳಗ್ಗೆಯಿಂದ ಕ್ಷೇತ್ರದ ವ್ಯಾಪ್ತಿಯ ಎಲ್ಲಾ ಮಠಗಳಿಗೂ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದಿದ್ದೇನೆ. ತುಮಕೂರು ಲೋಕಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಅಭಿವೃದ್ಧಿಪಡಿಸಲಿದ್ದೇನೆ ಎಂಬ ಭರವಸೆಯನ್ನು ಸೋಮಣ್ಣ ನೀಡಿದರು.
undefined
ಚುನಾವಣಾ ಬಾಂಡ್ ಬಿಜೆಪಿ ಪಾಲಿಗೆ ಸುಲಿಗೆಯ ಬ್ರಹ್ಮಾಸ್ತ್ರ: ಸಿಎಂ ಸಿದ್ದರಾಮಯ್ಯ
ತುಮಕೂರು ಬೆಂಗಳೂರಿಗೆ ಕೇವಲ 70 ಕಿ.ಮಿ.ದೂರದಲ್ಲಿದೆ.ಬೆಂಗಳೂರಿಗೆ ದೊರೆಯುವ ಎಲ್ಲಾ ಸೌಲಭ್ಯಗಳು ಇಲ್ಲಿಗೆ ಸಿಗಬೇಕಿದೆ. ಮೂರು ಬಾರಿ ತುಮಕೂರು ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿ ಜಿಲ್ಲೆಯ ಎಲ್ಲಾ ಸಮಸ್ಯೆಗಳ ಬಗ್ಗೆ ಅರಿವಿದೆ. ಹಾಗಾಗಿ ನನ್ನ ಮೊದಲ ಆದ್ಯತೆ ಕುಡಿಯುವ ನೀರು, ಎಲೆಕ್ಟ್ರಾನಿಕ್ ಸಿಟಿ ನಿರ್ಮಾಣ, ಮೆಟ್ರೋ ವಿಸ್ತರಣೆ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ಹಲವು ಯೋಜನೆಗಳ ನಮ್ಮ ಕಣ್ಣಮುಂದಿವೆ. ಅವುಗಳನ್ನು ಜಾರಿಗೆ ತರುತ್ತೇವೆ ಎಂದರು. ನಾನು ಹೊರಗಿನವನು ಎಂಬ ಮಾತುಗಳನ್ನು ಕೆಲವರು ಆಡುತ್ತಿದ್ದಾರೆ. ಅವರಿಗಿಂತ ತುಮಕೂರು ಜಿಲ್ಲೆಯ ಪ್ರತಿ ಇಂಚು ಗೊತ್ತಿದೆ.
ಕಾಂಗ್ರೆಸ್‌ನಿಂದ ಮತ್ತೆರಡು ಗ್ಯಾರಂಟಿ ಘೋಷಣೆ: ಮಲ್ಲಿಕಾರ್ಜುನ ಖರ್ಗೆ
ಒಂದು ಕಾಲದಲ್ಲಿ ತುಮಕೂರು ಎಷ್ಟಿತ್ತು. ಇಂದು ಎಷ್ಟಾಗಿದೆ. ಯಾರು ಹೊರಗಿನವರಲ್ಲ. ಗೋವಿಂದರಾಜ ನಗರ, ಬಿನ್ನಿಪೇಟೆ ರೀತಿಯಲ್ಲಿಯೇ ತುಮಕೂರು ಜಿಲ್ಲೆಯನ್ನು ಅಭಿವೃದ್ಧಿ ಮಾಡಿ ತೋರಿಸುತ್ತೇನೆ. ನನ್ನ ಮೇಲೆ ನಂಬಿಕೆ ಇಡೀ ಎಂದು ಮತದಾರರಲ್ಲಿ ಮನವಿ ಮಾಡಿದರು. ಮೆರವಣಿಗೆಯಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಗ್ರಾಮಾಂತರ ಶಾಸಕ ಸುರೇಶಗೌಡ, ಮಾಜಿ ಸಚಿವ ಭೈರತಿ ಬಸವರಾಜು, ಸಂಸದ ಜಿ.ಎಸ್.ಬಸವರಾಜು,ಶಾಸಕರಾದ ಜಿ.ಬಿ.ಜೋತಿಗಣೇಶ್, ಇಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಹೆಬ್ಬಾಕ, ಬ್ಯಾಟರಂಗೇಗೌಡ, ಶಿವಪ್ರಸಾದ್,ಚಿದಾನಂದಗೌಡ,ಬಿ.ಕೆ.ಮಂಜುನಾಥ್,ವೈ.ಹೆಚ್.ಹುಚ್ಚಯ್ಯ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡಿದ್ದರು.