ವಿಶ್ವವೇ ಪ್ರಧಾನಿ ಮೋದಿ ನಾಯಕತ್ವ ಒಪ್ಪಿದೆ: ಸಂಸದ ಬಿ.ವೈ.ರಾಘವೇಂದ್ರ

By Kannadaprabha News  |  First Published Mar 19, 2023, 1:30 AM IST

ವಿಶ್ವವೇ ಪ್ರಧಾನಿ ಮೋದಿ ನಾಯಕತ್ವವನ್ನು ಒಪ್ಪಿಕೊಂಡಿದೆ. ಕಾಂಗ್ರೆಸ್‌ ಪಕ್ಷದ ನಾಯಕರಿಗೆ ಮಾತ್ರ ಇದನ್ನು ಅರಗಿಸಿಕೊಳ್ಳುವ ಮನಸ್ಥಿತಿಯಿಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. 


ಹೊಳೆಹೊನ್ನೂರು (ಮಾ.19): ವಿಶ್ವವೇ ಪ್ರಧಾನಿ ಮೋದಿ ನಾಯಕತ್ವವನ್ನು ಒಪ್ಪಿಕೊಂಡಿದೆ. ಕಾಂಗ್ರೆಸ್‌ ಪಕ್ಷದ ನಾಯಕರಿಗೆ ಮಾತ್ರ ಇದನ್ನು ಅರಗಿಸಿಕೊಳ್ಳುವ ಮನಸ್ಥಿತಿಯಿಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪಿನಿಂದ ಆರಂಭವಾದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಮನೆ ಮನೆಗೆ ಗ್ಯಾರಂಟಿ ಕಾರ್ಡ್‌ ಹಂಚುತ್ತಿರುವ ಕಾಂಗ್ರೆಸ್‌ಗೆ ಗ್ಯಾರಂಟಿಯೇ ಇಲ್ಲದಾಗಿದೆ. 70 ವರ್ಷದಿಂದ ಕಣ್ಣು ಮುಚ್ಚಿಕುಳಿತ್ತಿದ್ದ ಕಾಂಗ್ರೆಸ್‌ ಈಗ ಮತದಾರರಿಗೆ ಗ್ಯಾರಂಟಿ ನೀಡುತ್ತಿರುವುದು ಹಾಸ್ಯಾಸ್ಪದ. ಈ ಚುನಾವಣೆ ನಂತರ ಜಿಲ್ಲೆ ಸೇರಿದಂತೆ ರಾಜ್ಯದಿಂದಲೇ ಕಾಂಗ್ರೆಸ್‌, ಜೆಡಿಎಸ್‌ ಮರೆಯಾಗುತ್ತವೆ. ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿ ಕಮಲ ಅರಳುವುದು ನಿಶ್ಚಿತ ಎಂದರು.

ಗ್ರಾಮಾಂತರ ಕ್ಷೇತ್ರ ಶಾಸಕ ಕೆ.ಬಿ. ಅಶೋಕ್‌ ನಾಯ್ಕ, ಗ್ರಾಮಾಂತರ ಕ್ಷೇತ್ರ ಸಂಪೂರ್ಣ ಡಿಜಿಟಲ್‌ ಗ್ರಾಮಗಳಾಗಿ ಪರಿವರ್ತನೆಯಾಗಿ ಸ್ಮಾರ್ಚ್‌ ವಿಲೇಜ್‌ ಕಲ್ಪನೆ ಸಾಕಾರಗೊಳಬೇಕು. ಏತ ನೀರಾವರಿ ಯೋಜನೆಗಳಿಂದಾಗಿ ಗ್ರಾಮಾಂತರದಲ್ಲಿ ಖುಷ್ಕಿ ಪ್ರದೇಶದ ಜನರ ಜೀವನ ಹಸಿರಾಗಿದೆ. ಹೊಳೆಹೊನ್ನೂರು ಪಟ್ಟಣ ಪಂಚಾಯಿತಿಗೆ ಮೇಲ್ದರ್ಜೆಗೇರಿದ ನಂತರ ಅಭಿವೃದ್ಧಿಗೆ ವೇಗ ಸಿಕ್ಕಿದೆ ಎಂದರು. ವಿಧಾನ ಪರಿಷತ್ತು ಸದಸ್ಯ ಎಸ್‌.ರುದ್ರೆಗೌಡ, ಪರಿಷತ್ತು ಸದಸ್ಯ ಡಿ.ಎಸ್‌. ಅರುಣ್‌, ದತ್ತಾತ್ರಿ, ಎಸ್‌.ಶ್ರೀನಿವಾಸ್‌, ಮಂಡಲ ಅಧ್ಯಕ್ಷ ಡಿ.ಮಂಜುನಾಥ್‌, ಉಪಾಧ್ಯಕ್ಷ ಸುಬ್ರಮಣ್ಣಿ, ಪ್ರಧಾನ ಕಾರ್ಯದರ್ಶಿ ಮಲ್ಲೇಶ್‌ ಉಜಿನಪ್ಪ, ರಾಜೇಶ್‌ ಪಾಟೀಲ, ರಾಧಾಕೃಷ್ಣ, ಸಿದ್ದಪ್ಪ, ಪಾಲಾಕ್ಷಪ್ಪ, ನಾಗೇಶ್ವರ ರಾವ್‌, ಷಡಕ್ಷರಪ್ಪ ಗೌಡ, ಗಿರೀಶ್‌, ಕೆ.ಪಿ. ಕಿರಣ್‌ಕುಮಾರ್‌, ಕೊಟ್ರೇಶ್‌, ಓಂಕಾರಮೂರ್ತಿ, ರವಿಕುಮಾರ್‌ ಇತರರಿದ್ದರು.

Latest Videos

undefined

ಸಾಗರ ಪರಿಕ್ರಮ ಕಾರ್ಯಕ್ರಮ: ಮೀನುಗಾರರಲ್ಲಿ ಭರವಸೆ ಮೂಡಿಸಿದ ಕೇಂದ್ರ ಸಚಿವ ಪುರುಷೋತ್ತಮ್ ರೂಪಾಲ

ವಿಜಯ ಸಂಕಲ್ಪ ಯಾತ್ರೆಗೆ ಅದ್ಧೂರಿ ಸ್ವಾಗತ: ವಿಜಯ ಸಂಕಲ್ಪ ಯಾತ್ರೆ ವೀರಗಾಸೆ, ಡೊಳ್ಳು ಕುಣಿತ ಸೇರಿದಂತೆ ವಿವಿಧ ಕಲಾತಂಡಗಳೊಂದಿಗೆ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರ ಸಂಭ್ರಮದೊಂದಿಗೆ ಶನಿವಾರ ಬೆಳಗ್ಗೆ ನಗರದ ಲೋಯರ್‌ ಹುತ್ತಾ ಬಸ್‌ ನಿಲ್ದಾಣದಿಂದ ಆರಂಭಗೊಂಡಿತು. ಯಾತ್ರೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ, ವಿಧಾನ ಪರಿಷತ್ತು ಸದಸ್ಯರಾದ ಎಸ್‌.ರುದ್ರೇಗೌಡ, ಡಿ.ಎಸ್‌. ಅರುಣ್‌, ಪ್ರಮುಖರಾದ ಮಂಗೋಟೆ ರುದ್ರೇಶ್‌, ಎಸ್‌.ಕುಮಾರ್‌, ತೀರ್ಥಯ್ಯ, ಕೂಡ್ಲಿಗೆರೆ ಹಾಲೇಶ್‌, ಪಕ್ಷದ ಹಿರಿಯ ಪ್ರಮುಖರು, ಸ್ಥಳೀಯ ಮುಖಂಡರು ಇನ್ನಿತರರು ಉಪಸ್ಥಿತರಿದ್ದರು. ಸಂಕಲ್ಪ ಯಾತ್ರೆ ಬಿ.ಎಚ್‌. ರಸ್ತೆ ಅಂಬೇಡ್ಕರ್‌ ವೃತ್ತ, ಹಾಲಪ್ಪ ​ವೃತ್ತ, ಮಾಧವಚಾರ್‌ ವೃತ್ತ, ರಂಗಪ್ಪ ವೃತ್ತ, ಅನಂತರ ಹೊಸಮನೆ ಶಿವಾಜಿ ಸರ್ಕಲ್‌ವರೆಗೂ ಸಾಗಿತು.

ರಾಜ್ಯದಲ್ಲಿ 2.32 ಕೋಟಿ ಮನೆ ನಿರ್ಮಾಣ: ದೇಶಕ್ಕೆ ಅಪಾಯ ಎದುರಾದ ಸಂದರ್ಭದಲ್ಲಿ ಅಂಜದೇ ಸರ್ಜಿಕಲ್‌ ಸ್ಟೆ್ರೖಕ್‌ನಂತಹ ಅಚಲ ನಿರ್ಧಾರ ಕೈಗೊಂಡು ದೇಶದ ರಕ್ಷಣೆಗೆ ಮುಂದಾಗಿದ್ದು, ಪ್ರಧಾನಮಂತ್ರಿ ಕಾರ್ಯತತ್ಪರತೆಗೆ ಸಾಕ್ಷಿ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಇಲ್ಲಿನ ಫ್ರೀಡಂ ಪಾರ್ಕ್ನಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಗಳ ಸಹಯೋಗದಲ್ಲಿ ಏರ್ಪಡಿಸಿದ್ದ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಮ್ಮೇಳನದಲ್ಲಿ ಅವರು ಮಾತನಾಡಿದರು.

ಕಳೆದೆರಡು ವರ್ಷದಲ್ಲಿ ಕೊರೋನಾ ವೈರ​ಸ್‌ ತುರ್ತು ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ಯಶಸ್ವಿಯಾಗಿದೆ. ಉತ್ತಮ ಗುಣಮಟ್ಟದ ಲಸಿಕೆಯನ್ನು ದೇಶವಾಸಿಗಳಿಗೆ ಉಚಿತವಾಗಿ ನೀಡಲಾಗಿದೆ. ಆಯುಷ್ಮಾನ್‌ ಭಾರತ್‌- ಆರೋಗ್ಯ ಕರ್ನಾಟಕ ಉತ್ತಮ ಆರೋಗ್ಯ ಯೋಜನೆಯಾಗಿದೆ. ರಾಜ್ಯದಲ್ಲಿ ಈ ಯೋಜನೆಯಡಿ 3.11 ಕೋಟಿ ಜನ ನೋಂದಣಿ ಮಾಡಿಸಿದ್ದಾರೆ. ರಾಜ್ಯದ 2.32 ಕೋಟಿ ಸದಸ್ಯರಿಗೆ ಮನೆಗಳನ್ನು ನಿರ್ಮಿಸಿಕೊಡಲಾಗಿದೆ. ಅತ್ಯಲ್ಪ ಅವಧಿಯಲ್ಲಿ ಜಿಲ್ಲೆಯ 2.90 ಮನೆಗಳಿಗೆ ಶುದ್ಧ ಕುಡಿಯುವ ನೀರಿನ ನಲ್ಲಿ ಸಂಪರ್ಕ ಕಲ್ಪಿಸಲಾಗಿದೆ ಎಂದು ಹೇಳಿದರು.

ಬಿಜೆಪಿಯತ್ತ ಮುಖ ಮಾಡಿದ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ

2008ರಲ್ಲಿ ಅನುಷ್ಠಾನಕ್ಕೆ ತರಲಾಗಿದ್ದ ಭಾಗ್ಯಲಕ್ಷ್ಮೇ ದೂರದೃಷ್ಟಿ ಯೋಜನೆಯಡಿ ಜಿಲ್ಲೆಯಲ್ಲಿ 1.50 ಲಕ್ಷ ಯುವತಿಯರು ಈ ಯೋಜನೆಯ ಲಾಭ ಪಡೆಯಲಿದ್ದಾರೆ. ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್‌ ಸರಬರಾಜು ಮಾಡಲಾಗಿದೆ. ಈ ಯೋಜನೆಯಿಂದಾಗಿ ರಾಜ್ಯ ಸರ್ಕಾರ ಪ್ರತಿವರ್ಷ .20,000 ಕೋಟಿಯನ್ನು ವಿದ್ಯುತ್‌ ನಿಗಮಕ್ಕೆ ರೈತರ ಪರವಾಗಿ ಪಾವತಿಸಿದೆ. ರಸಗೊಬ್ಬರ ಸಬ್ಸಿಡಿ ನೀಡಿ, ರೈತರ ಆರ್ಥಿಕ ಹೊರೆ ಕಡಿಮೆಗೊಳಿಸಲಾಗಿದೆ. ಜಿಲ್ಲೆಯಲ್ಲಿ ರಸ್ತೆ, ರೈಲು, ವಿಮಾನ ಸೇರಿದಂತೆ ಎಲ್ಲ ಸಂಚಾರಕ್ಕೆ ಪೂರಕ ವಾತಾವರಣ ನಿರ್ಮಿಸಲಾಗಿದೆ. ವಿಶೇಷವಾಗಿ ರೈಲು ಸಂಪರ್ಕ ಕಲ್ಪಿಸುವಲ್ಲಿ ವಿಶೇಷ ಕ್ರಾಂತಿಯಾಗಿದೆ ಎಂದರು.

click me!