ಕಾಂಗ್ರೆಸ್‌ನಲ್ಲಿ ಮೂರು ರೀತಿಯ ಹುಚ್ಚರಿದ್ದಾರೆ: ಕೆ.ಎಸ್.ಈಶ್ವರಪ್ಪ

Published : May 22, 2025, 06:46 AM IST
ಕಾಂಗ್ರೆಸ್‌ನಲ್ಲಿ ಮೂರು ರೀತಿಯ ಹುಚ್ಚರಿದ್ದಾರೆ: ಕೆ.ಎಸ್.ಈಶ್ವರಪ್ಪ

ಸಾರಾಂಶ

ಕಾಂಗ್ರೆಸ್ ಪಕ್ಷದಲ್ಲಿ ಮೂರು ರೀತಿಯ ಹುಚ್ಚರಿದ್ದಾರೆ ಎಂದು ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ ಕಿಡಿಕಾರಿದರು. 

ಶಿವಮೊಗ್ಗ (ಮೇ.22): ಕಾಂಗ್ರೆಸ್ ಪಕ್ಷದಲ್ಲಿ ಮೂರು ರೀತಿಯ ಹುಚ್ಚರಿದ್ದಾರೆ ಎಂದು ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ ಕಿಡಿಕಾರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ಆಪರೇಷನ್ ಸಿಂದೂರ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯ ನಾಯಕರು, ಮನಸ್ಸಿಗೆ ಬಂದಂತೆ ಹುಚ್ಚಾಟದ ರೀತಿಯಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್‌ನಲ್ಲಿ ಕೆಲವರು ಅರೆ ಹುಚ್ಚರು, ಕೆಲವರು ಪೂರ್ಣ ಹುಚ್ಚರು, ಮತ್ತೆ ಕೆಲವರಿಗೆ ಹುಚ್ಚು ಬಿಟ್ಟಿದೆ. ಹೀಗೆ ಹುಚ್ಚುಬಿಟ್ಟವರ ಪಟ್ಟಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇರುವುದು ಸಂತೋಷ. ಯಾವಾಗ ಅವರು ಹಣೆಗೆ ಸಿಂದೂರವನ್ನಿಟ್ಟುಕೊಂಡರೋ ಆಗ ಅವರಿಗಿದ್ದ ಹುಚ್ಚು ಬಿಟ್ಟು ಹೋಗಿದೆ. ಹಾಗಾಗಿ ಸಿದ್ದರಾಮಯ್ಯನವರು ಮಾತ್ರ ಬುದ್ಧಿಭ್ರಮಣೆಯಿಂದ ಗುಣವಾಗಿದ್ದಾರೆ ಎಂದರು.

ಮುಸ್ಲಿಂರನ್ನು ಓಲೈಸುವುದನ್ನು ಕಾಂಗ್ರೆಸ್‌ನ ನಾಯಕರು ಇನ್ನೂ ಬಿಟ್ಟಿಲ್ಲ. ಪಾಕಿಸ್ತಾನದ ವಿರುದ್ಧ ಯುದ್ಧ ಸಾರಿದಾಗ ದೇಶದ ಜೊತೆ ನಾವಿರುತ್ತೇವೆ. ಮೋದಿಯವರಿಗೆ ಬೆಂಬಲ ಕೊಡುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದರು. ನಂತರ ಅವರ ಮಾತಿನ ರೀತಿಯೇ ಬದಲಾವಣೆಯಾಯಿತು. ಏಕೆ ಹೀಗೆ ವಿರೋಧಬಾಸದ ಹೇಳಿಕೆಗಳನ್ನು ಕೊಡುತ್ತಾರೋ ಗೊತ್ತಿಲ್ಲ. ಪ್ರಿಯಾಂಕ ಗಾಂಧಿಯವರನ್ನು ಮರಿ ಖರ್ಗೆ ಎಂದು ಹೇಳಿದ ಈಶ್ವರಪ್ಪ ಅವರು, ಆತನೊಬ್ಬ ಅರೆ ಹುಚ್ಚ. ಇನ್ನು ಹರಿಪ್ರಸಾದ್, ಸಂತೋಷ್ ಲಾಡ್, ದಿನೇಶ್ ಗುಂಡೂರಾವ್, ಕೊತ್ತೂರು ಮಂಜುನಾಥ್ ಮುಂತಾದವರೆಲ್ಲಾ ಅರೆ ಹುಚ್ಚರೇ ಆಗಿದ್ದಾರೆ ಎಂದು ಟೀಕಿಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ದೇಶದ ಜೊತೆಗೆ ಒಟ್ಟಿಗೆ ಇರುತ್ತೇವೆ ಎಂದವರು ಇದ್ದಕ್ಕಿದ್ದ ಹಾಗೆ ಚೇಂಜ್ ಆಗಿದ್ದಾರೆ. ಯಾರೋ ರಾಷ್ಟ್ರ ದ್ರೋಹಿ ಮುಸಲ್ಮಾನರು ಇದ್ದಕ್ಕಿದ್ದ ಹಾಗೆ ಮೋದಿ ಮತ್ತು ಸೈನಿಕರನ್ನು ಹೊಗಳುತ್ತಿದ್ದೀರಿ ಎಂದು ಹೇಳಿದ್ದರಿಂದ ಟಕ್ ಅಂತ ಬದಲಾವಣೆ ಆಗಿದ್ದಾರೆ ಎಂದು ಕಿಡಿಕಾರಿದರು. ಸೈನಿಕರು ನಮ್ಮ ದೇಶದ ಶಸ್ತ್ರಾಗಳನ್ನು ಬಳಸಿಕೊಂಡು ಪಾಕಿಸ್ತಾನವನ್ನು ಧ್ವಂಸ ಮಾಡಿದ್ದಾರೆ. ಬೇರೆ ದೇಶದವರು ನಮ್ಮ ಶಶಸ್ತ್ರಗಳನ್ನು ಖರೀದಿ ಮಾಡಲು ಬರುತ್ತಿದ್ದಾರೆ. ಪ್ರಪಂಚ ಮೋದಿಯವರ ಜೊತೆ ಇದ್ದ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಏನು ಬಂತೋ ಗೊತ್ತಿಲ್ಲ. 

ಬೆಲೆ ಏರಿಕೆ ಮಾಡಿದ್ದೇ ಕಾಂಗ್ರೆಸ್‌ ಸಾಧನೆ: ಶಾಸಕ ಬಾಲಚಂದ್ರ ಜಾರಕಿಹೊಳಿ

ತಮ್ಮ ಕ್ಷೇತ್ರದಲ್ಲಿ ಮುಸಲ್ಮಾನರಿದ್ದರೆ ಅದಕ್ಕೆ ಅವರ ವೋಟ್ ಬೇಕು ಎಂದು ಈ ರೀತಿ ಹೇಳಿಕೆ ಕೊಡುತ್ತಿದ್ದಾರೆ. ದೇಶದ ಸೈನಿಕರು ಹಾಗೂ ದೇಶದ ಬಗ್ಗೆ ಹಗುರವಾಗಿ ಮಾತನಾಡುವವರಿಗೆ ಗುಂಡಿಟ್ಟು ಹೊಡೆಯುವ ಕಾನೂನು ತರಬೇಕು ಎಂದರು. ಕೋಟ್ಯಾಂತರ ರುಪಾಯಿ ಬಂಗಾರದ ಕಳ್ಳಿ ನಟಿ ರನ್ಯಾರಾವ್ ಅವರಿಗೆ ಹೇಗೆ ಜಾಮೀನು ಸಿಕ್ಕಿತು ಎಂಬುದು ನನಗೆ ಅರ್ಥವಾಗುತ್ತಿಲ್ಲ. ಕೋಟಿಗಟ್ಟಲೇ ಹಣ, ಒಡವೆ ಎಲ್ಲವೂ ಸಿಕ್ಕಿದೆ ಇದು ನ್ಯಾಯಾಂಗಕ್ಕೆ ಬಿಟ್ಟ ವಿಚಾರವಾದರೂ ಇಂತಹ ವಿಚಾರದಲ್ಲಿ ಜಾಮೀನೇ ಸಿಗದಂತಹ ಕಾನೂನುಗಳು ಬರಬೇಕಾಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ