
ಕೊಪ್ಪಳ (ಅ.19): ಭಾರತದಲ್ಲಿ ಹಲವು ಧರ್ಮಗಳು ಇದ್ದರೂ ಶಾಂತಿ, ಸೌರ್ಹಾದತೆಯಿಂದ ನಡೆದುಕೊಂಡಿದ್ದಾರೆ. ಆದರೆ, ಈಗ ಕೆಲವೊಂದು ಶಕ್ತಿಗಳು ರಾಜಕೀಯದಲ್ಲಿ ಧರ್ಮ ದಂಗಲ್ ನಡೆಸುವ ಹುನ್ನಾರು ನಡೆಸಿದ್ದಾರೆ ಎಂದು ವಿಪ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ. ಕೊಪ್ಪಳ ನಗರದಲ್ಲಿ ಮಹ್ಮದ್ ಫೈಗಂಬರ ಅವರ 1500 ನೇ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಆದರೆ,ಇದ್ಯಾವುದಕ್ಕೂ ನಾವು ಅವಕಾಶ ನೀಡಬಾರದು. ಶಾಂತಿಯ ಸಂದೇಶ ಸಾರಬೇಕಾಗಿದೆ.
ಪಕ್ಕದ ಮಹಾರಾಷ್ಟ್ರದಲ್ಲಿ ಶಿವಾಜಿ ಮಹಾರಾಜರನ್ನು ಮುಂದಿಟ್ಟುಕೊಂಡು ಶಾಂತಿ ಕದಡುವ ಯತ್ನ ನಡೆಸುತ್ತಾರೆ ಎಂದು ಆರೋಪಿಸಿದರು. ಹಿಂದು, ಮುಸ್ಲಿಂ, ಕ್ರೈಸ್ತ ಸೇರಿ ಏಳು ಧರ್ಮಗಳು ಇದ್ದರೂ ಅತ್ಯಂತ ಅನ್ಯೋನ್ಯತೆಯಿಂದ ನಡೆದುಕೊಳ್ಳುತ್ತಾರೆ. ಮಹಾತ್ಮ ಗಾಂಧಿ ಜಯಂತಿಯನ್ನು ಅಹಿಂಸಾ ದಿನಾಚರಣೆಯನ್ನಾಗಿ ಆಚರಣೆ ಮಾಡಲಾಗುತ್ತದೆ. ಆದರೆ, ಕೆಲಶಕ್ತಿಗಳು ಶಾಂತಿ ಕದಡುವ ಪ್ರಯತ್ನ ಮಾಡುತ್ತಿವೆ ಎಂದರು. ಬ್ರಿಟಿಷರ ವಿರುದ್ಧ ಹೋರಾಟ ಮಾಡುವ ವೇಳೆಯಲ್ಲಿ ಯಾವ ಜಾತಿಯೂ ಇರಲಿಲ್ಲ. ದೇಶದ ಸ್ವಾತಂತ್ರ್ಯಕ್ಕಾಗಿ ಎಲ್ಲರೂ ಹೋರಾಟ ಮಾಡಿದ್ದಾರೆ.
ಅದರ ಫಲವಾಗಿ ನಮಗೆ ಸ್ವಾತಂತ್ರ್ಯ ದೊರೆಯಿತು. ಸಂವಿಧಾನ ರಚನೆಯಾಯಿತು. ನಮಗೆಲ್ಲ ಶಕ್ತಿ ಬಂದಿತು. ಇದಕ್ಕೂ ಮೊದಲು ಮಹ್ಮದ್ ಫೈಗಂಬರ್ ಅವರು ಸಹ ಶಾಂತಿಯ ಸಂದೇಶ ಸಾರಿದ್ದಾರೆ. ಪರಧರ್ಮ ನಿಂದಿಸುವವವರು ಸ್ವಧರ್ಮ ದ್ರೋಹಿಗಳಾಗಿರುತ್ತಾರೆ ಎಂದರು. ಇಂಥ ಮಹತ್ವ ಸಾರಿರುವುದರಿಂದ ನಾವೆಲ್ಲ ಅದನ್ನು ಅನುಸರಿಸಿಕೊಂಡು ಶಾಂತಿ ಮತ್ತು ಸಹಬಾಳ್ವೆ ಸಾಗಿಸಬೇಕಾಗಿದೆ. ಆದರೆ, ಇದನ್ನು ಕದಡುವ ಶಕ್ತಿ ಹತ್ತಿಕ್ಕಲು ಇಂಥ ಕಾರ್ಯಕ್ರಮಗಳ ಆಚರಣೆ ಅಗತ್ಯವೆಂದರು.
‘ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ಭಾರತೀಯ ತಾಲಿಬಾನ್’ ಎಂದು ನೀಡಿದ ಹೇಳಿಕೆ ವಿವಾದಕ್ಕೀಡಾಗಿದೆ. ಇದಕ್ಕೆ ಬಿಜೆಪಿ ಕಿಡಿಕಾರಿದ್ದು, ‘ಕಾಂಗ್ರೆಸ್ ಪ್ರತಿ ರಾಷ್ಟ್ರೀಯವಾದಿ ಸಂಘಟನೆಯನ್ನು ನಿಷೇಧಿಸುತ್ತದೆ. ಆದರೆ ಮೂಲಭೂತ ಸಂಘಟನೆಗಳಾದ ನಿಷೇಧಿತ ಪಿಎಫ್‌ಐ, ಸಿಮಿಗಳ ಮೇಲೆ ಪ್ರೀತಿ ಅತೀವ ತೋರಿಸುತ್ತದೆ’ ಎಂದು ತಿರುಗೇಟು ನೀಡಿದೆ. ಸುದ್ದಿಸಂಸ್ಥೆ ಜತೆ ಮಾತನಾಡಿದ ಹರಿಪ್ರಸಾದ್, ‘ಮೋದಿ ಸ್ವಾತಂತ್ರ್ಯ ದಿನಾಚರಣೆ ದಿನ ಆರ್‌ಎಸ್‌ಎಸ್ ಹೊಗಳಿದ್ದನ್ನು ಟೀಕಿಸುವ ಭರದಲ್ಲಿ, ‘ದೇಶದಲ್ಲಿ ಆರ್‌ಎಸ್‌ಎಸ್ ಶಾಂತಿ ಕದಡಲು ಪ್ರಯತ್ನಿಸುತ್ತಿದೆ. ಅವರು ಭಾರತದ ತಾಲಿಬಾನಿಗಳು. ಆದರೆ ಅಂಥವರನ್ನು ಮೋದಿ ಕೆಂಪುಕೋಟೆಯಲ್ಲಿ ಹೊಗಳುತ್ತಾರೆ’ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.