ಆಪರೇಷನ್‌ ಕಮಲದ ಭಯ ಇದೆ, ನಾವೂ ಎಚ್ಚರ ಇರಬೇಕು: ಸಚಿವ ಜಾರಕಿಹೊಳಿ

Published : Aug 20, 2023, 10:19 PM IST
ಆಪರೇಷನ್‌ ಕಮಲದ ಭಯ ಇದೆ, ನಾವೂ ಎಚ್ಚರ ಇರಬೇಕು: ಸಚಿವ ಜಾರಕಿಹೊಳಿ

ಸಾರಾಂಶ

ಬಿಜೆಪಿ ಅವರು ಸುಮ್ಮನಿರುವವರಲ್ಲ, ತೊಂದರೆ ಮಾಡುತ್ತಲೇ ಇರುತ್ತಾರೆ. ನಮ್ಮನ್ನು ಜಗ್ಗಬಾರದು ಅಂಥಲೇ ಅವರನ್ನು ಜಗ್ಗಿದೀವಿ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. 

ಚಾಮರಾಜನಗರ (ಆ.20): ಬಿಜೆಪಿ ಅವರು ಸುಮ್ಮನಿರುವವರಲ್ಲ, ತೊಂದರೆ ಮಾಡುತ್ತಲೇ ಇರುತ್ತಾರೆ. ನಮ್ಮನ್ನು ಜಗ್ಗಬಾರದು ಅಂಥಲೇ ಅವರನ್ನು ಜಗ್ಗಿದೀವಿ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಪರೇಷನ್‌ ಕಮಲ ಸಂಬಂಧ ಆಡಳಿತ ನಡೆಸುವವರಿಗೆ ಭಯ ಇದ್ದೇ ಇರಲಿದೆ. ಈ ನಿಟ್ಟಿನಲ್ಲಿ ನಾವು 24 ಗಂಟೆಯೂ ಎಚ್ಚರದಿಂದಿರಬೇಕು ಎಂದರು. ಬಿಜೆಪಿ, ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬರಲಿರುವ 20 ಮಂದಿ ನಮ್ಮ ಸಂಪರ್ಕದಲ್ಲಿದ್ದಾರೆ ಎಂದ ಅವರು ಯಾವ ಶಾಸಕರ ಹೆಸರನ್ನೂ ಪ್ರಸ್ತಾಪಿಸದೆ, ಪಕ್ಷದ ತತ್ವ ಸಿದ್ಧಾಂತಕ್ಕೆ ಒಪ್ಪಿ ಬರುವವರು ಖಂಡಿತ ಬರಬಹುದು ಎಂದರು. ಇನ್ನು, ಬೆಳಗಾವಿ ಜಿಲ್ಲೆ ದೇಶದಲ್ಲೇ ಅತಿ ದೊಡ್ಡ ಜಿಲ್ಲೆಯಾಗಿದೆ. ಈ ಹಿನ್ನೆಲೆಯಲ್ಲಿ ಪ್ರತ್ಯೇಕ ಜಿಲ್ಲೆಯ ಅನಿವಾರ್ಯತೆ ಇದೆ ಎಂದು ಇದೇ ವೇಳೆ ಪ್ರಸ್ತಾಪಿಸಿದರು.

ಗ್ಯಾರಂಟಿ ಬಗ್ಗೆ ಟೀಕಿಸಿದವರಿಗೆ ತಕ್ಕ ಉತ್ತರ: ಗ್ಯಾರಂಟಿ ಯೋಜನೆಗಳನ್ನು ಹೇಗೆ ನೀಡುತ್ತಾರೆ? ಹೇಗೆ ದುಡ್ಡು ಹೊಂದಿಸುತ್ತಾರೆ? ಎಂಬ ಪ್ರಶ್ನೆ ಬಿಜೆಪಿಯವರು ಸೇರಿದಂತೆ ಹಲವರಲ್ಲಿ ಮೂಡಿತ್ತು. ಆದರೆ, ಸಿಎಂ ಸಿದ್ದರಾಮಯ್ಯನವರ ಆರ್ಥಿಕ ನೀತಿಯಿಂದ .40 ಸಾವಿರ ಕೋಟಿ ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿಯೇ ಮೀಸಲಿಟ್ಟು, ಟೀಕೆ ಮಾಡಿದವರಿಗೆ ಉತ್ತರ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯನವರಿಗೆ ಎಷ್ಟೇ ಅಭಿನಂದನೆ ಸಲ್ಲಿಸಿದರೂ ಸಾಲದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು.

ರಾಜ್ಯದಲ್ಲಿ ಅವನತಿಯ ಹಾದಿಯಲ್ಲಿ ಬಿಜೆಪಿ ಸಾಗಿದೆ: ಐವನ್‌ ಡಿಸೋಜ ಟೀಕೆ

ಯಮಕನಮರಡಿ ಮತಕ್ಷೇತ್ರದ ಅರಳಿಕಟ್ಟಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕುಂದು-ಕೊರತೆಗಳ ಸಭೆ ಹಾಗೂ ಬನ್ನಿಬಾಗಿ, ಚಿಲಬಾಂವಿ, ಜಾರಕಿಹೊಳಿ ಗ್ರಾಮಸ್ಥರಿಂದ ಜರುಗಿದ ಸನ್ಮಾನ ಸಮಾರಂಭದಲ್ಲಿ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ನಾವು ಪ್ರಣಾಳಿಕೆಯಲ್ಲಿ ನೀಡಿದ ಪ್ರಮುಖ 5 ಭರವಸೆಗಳಲ್ಲಿ 3 ಭರವಸೆಗಳನ್ನು ಈಡೇರಿಸಿದ್ದು, ಇನ್ನೇರಡು ಭರವಸೆಗಳನ್ನು ಶೀಘ್ರದಲ್ಲೇ ಈಡೇರಿಸುತ್ತೇವೆ ಎಂದು ಭರವಸೆ ನೀಡಿದರು. ಯಮಕನಮರಡಿ ಕ್ಷೇತ್ರದಲ್ಲಿ ಕಳೆದ 15 ವರ್ಷಗಳಿಂದ ರಸ್ತೆ ಸೇರಿದಂತೆ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇವೆ. ಕ್ಷೇತ್ರದಲ್ಲಿ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಲಾಗುವುದು, ಪ್ರಸ್ತುತ ಬಜೆಟ್‌ನಲ್ಲಿ ಕಡಿಮೆ ಅನುದಾನ ಇದ್ದು, ಮುಂದಿನ ಆರ್ಥಿಕ ವರ್ಷದಲ್ಲಿ ಇನ್ನಷ್ಟು ರಸ್ತೆಗಳನ್ನು ಸುಧಾರಣೆ ಮಾಡೋಣ. 

ನಾನು ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ: ಶಾಸಕ ಜಿ.ಟಿ.ದೇವೇಗೌಡ

ರಾಜ್ಯದಲ್ಲಿ ನಮ್ಮ ಇಲಾಖೆಯಿಂದ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಕಾಂಗ್ರೆಸ್‌ ಪಕ್ಷದ 135 ಅಭ್ಯರ್ಥಿಗಳು ಗೆಲುವು ಸಾಧಿಸಿ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ರಚಿಸಲು ಕಾರಣಿಕರ್ತರಾದ ಮುಖಂಡರಿಗೆ, ಮತದಾರರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಶಶಿಕಾಂತ ನಾಯಿಕ, ಗುರು ಪಾಟೀಲ, ಕರುಣಾಕರ ಶೆಟ್ಟಿ, ಅಬ್ದುಲ… ಘನಿ ದರ್ಗಾ ಸೇರಿದಂತೆ ಅರಳಿಕಟ್ಟಿ, ಬನ್ನಿಬಾಗಿ, ಚಿಲಬಾಂವಿ, ಜಾರಕಿಹೊಳಿ ಗ್ರಾಮದ ಮುಖಂಡರು, ಅಪಾರ ಸಂಖ್ಯೆಯ ಕಾರ್ಯಕರ್ತರು ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
ದ್ವೇಷ ಭಾಷಣ ತಡೆಗೆ ಕಾನೂನು ಯತ್ನ: ಕಾಂಗ್ರೆಸ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ