ಮಾಜಿ ಸಚಿವ ಎಚ್.ಡಿ.ರೇವಣ್ಣ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ನಡುವೆ ಭಿನ್ನಾಭಿಪ್ರಾಯ ಇದೆ ಎನ್ನುವುದು ಕೆಲವರ ತಪ್ಪು ಕಲ್ಪನೆಯಾಗಿದ್ದು ಇಬ್ಬರು ಅನ್ಯೋನ್ಯವಾಗಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದರು.
ಬೇಲೂರು (ಮಾ.01): ಮಾಜಿ ಸಚಿವ ಎಚ್.ಡಿ.ರೇವಣ್ಣ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ನಡುವೆ ಭಿನ್ನಾಭಿಪ್ರಾಯ ಇದೆ ಎನ್ನುವುದು ಕೆಲವರ ತಪ್ಪು ಕಲ್ಪನೆಯಾಗಿದ್ದು ಇಬ್ಬರು ಅನ್ಯೋನ್ಯವಾಗಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದರು. ಚಿಕ್ಕಮಗಳೂರು ಪಂಚರಥಯಾತ್ರೆಗೆ ತೆರಳುವ ಸಂದರ್ಭದಲ್ಲಿ ನೆಹರೂ ವೃತ್ತದ ಬಳಿ ಶಾಸಕ ಕೆ.ಎಸ್ ಲಿಂಗೇಶ್ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಅವರನ್ನು ಸ್ವಾಗತಿಸಿದ ಸಂದರ್ಭದಲ್ಲಿ ಮಾತನಾಡಿ, ನಾನು 50 ವರ್ಷದಿಂದ ನೋಡುತ್ತಿದ್ದೇನೆ. ರೇವಣ್ಣ, ಕುಮಾರಸ್ವಾಮಿ, ಬಾಲಕೃಷ್ಣ ಮತ್ತು ರಮೇಶ್ ಈ ನಾಲ್ವರು ಸಹೋದರರ ನಡುವೆ ಭಿನ್ನಾ್ನಭಿಪ್ರಾಯ ಇದೆ ಎನ್ನುವುದು ತಪ್ಪು ಕಲ್ಪನೆ ಎಂದರು.
ಕಾಂಗ್ರೆಸ್ ಪಕ್ಷದ ಮನೆಗೆ ಬಾಗಿಲೇ ಇಲ್ಲಾ, ನಾವಾದರೂ ಮೊದಲಿಗೆ 93 ಜನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದೇವೆ. ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಕ್ಕೆ ನಿಜವಾಗಿ ಶಕ್ತಿ ಇದ್ದರೆ ಅವರು ಮೊದಲು ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುವುದನ್ನು ಘೋಷಿಸಲಿ. ನಾವು ರೈತರ ಮಕ್ಕಳು ಅದಕ್ಕಾಗಿ ನಮ್ಮ ಎಚ್.ಡಿ. ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ ಎಂದು ಹೇಳಿದ್ದೇವೆ. ಕಾಂಗ್ರೆಸ್‌ಗೆ ತಾಕತ್ತಿದ್ದರೆ ನಾಳೆ ಬೇಲೂರಿನಲ್ಲಿ ನಡೆಯುವ ಸಭೆಯಲ್ಲಿ ಮುಖ್ಯಮಂತ್ರಿ ಯಾರು ಎಂದು ಘೋಷಣೆ ಮಾಡಲಿ ಎಂದು ಸವಾಲು ಹಾಕಿದರು.
undefined
ಅದೇನ್ ಬಿಚ್ಚಿಡ್ತೀರೋ, ಮೊದಲು ಬಿಚ್ಚಿಡಿ: ಶಾಸಕ ಶಿವಲಿಂಗೇಗೌಡರಿಗೆ ಎಚ್‌ಡಿಕೆ ಸವಾಲು
ಪ್ರಾದೇಶಿಕ ಪಕ್ಷ ಉದಯ ಖಚಿತ: ಈ ಬಾರಿ ಪ್ರಾದೇಶಿಕ ಪಕ್ಷ ಉದಯವಾಗುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಎರಡು ರಾಷ್ಟ್ರೀಯ ಪಕ್ಷಗಳು ರೈತರ ಹಾಗೂ ಜನಸಾಮಾನ್ಯರ ಮೇಲೆ ಮಾಡುತ್ತಿರುವ ದೌರ್ಜನ್ಯ ನಿಲ್ಲಿಸಲು ಎಚ್.ಡಿ ದೇವೇಗೌಡ, ನಿಜಲಿಂಗಪ್ಪ ಹಾಗೂ ವೀರೇಂದ್ರ ಪಾಟೀಲ್ ಕಟ್ಟಿದ ಜೆಡಿಎಸ್ ಪಕ್ಷ ಈ ಬಾರಿ ಅಧಿಕಾರಕ್ಕೆ ಹಿಡಿಯುವುದಕ್ಕೆ ಪ್ರತೀ ತಾಲೂಕಿನಲ್ಲಿ ನಡೆಯುತ್ತಿರುವ ಪಂಚರತ್ನ ರಥಯಾತ್ರೆಯೇ ಸಾಕ್ಷಿ. ಅತಿ ಶೀಘ್ರದಲ್ಲೇ ಬೇಲೂರಿಗೂ ಪಂಚರತ್ನ ರಥಯಾತ್ರೆ ಆಗಮಿಸಲಿದ್ದು ನಮ್ಮ ಶಕ್ತಿ ಏನು ಎಂಬುವುದನ್ನು ಮತ್ತೊಮ್ಮೆ ಪ್ರದರ್ಶನ ಮಾಡುತ್ತೇವೆ. ಶ್ರೀ ಚನ್ನಕೇಶವ ಆಶೀರ್ವಾದದಿಂದ ಲಿಂಗೇಶ್ ಗೆದ್ದು ಬರುತ್ತಾರೆ ನಾವೇ ಅಧಿಕಾರ ಹಿಡಿಯುವುದು ಶತಸಿದ್ಧ ಎಂದರು.
ಈ ಸಂದರ್ಭದಲ್ಲಿ ಶಾಸಕ ಕೆ.ಎಸ್ ಲಿಂಗೇಶ್, ಪ್ರಧಾನ ಕಾರ್ಯದರ್ಶಿ ಸಿ.ಎಚ್ ಮಹೇಶ್, ಮುಖಂಡರಾದ ಬಿ.ಡಿ ಚಂದ್ರೇಗೌಡ, ಚೇತನ್, ಖಾದರ್, ಸೋಮಯ್ಯ, ದಿಲೀಪ್, ಭಾರತಿ, ಸೌಮ್ಯ ಆನಂದ್, ಕಮಲಾ ಚನ್ನಪ್ಪ, ಸುಭಾನ್, ಜಯರಾಂ, ಸತೀಶ್ ಸೇರಿದಂತೆ ಇತರರು ಹಾಜರಿದ್ದರು.
ಸಂವಿಧಾನ ಬದ್ಧವಾಗಿ ಕೆಲಸ ಮಾಡುವ ಪಕ್ಷ ಕಾಂಗ್ರೆಸ್: ಡಿ.ಕೆ.ಶಿವಕುಮಾರ್
ಟಿಕೆಟ್ ಕೇಳುವ ಹಕ್ಕು ಎಲ್ಲರಿಗಿದೆ: ಕೆಲವರು ಹಾಸನ ಕ್ಷೇತ್ರದ ಜೆಡಿಎಸ್ ಟಿಕೆಟ್ ಬಗ್ಗೆ ಗೊಂದಲ ಉಂಟು ಮಾಡುತ್ತಿದ್ದಾರೆ. ಟಿಕೆಟ್ ಕೇಳುವ ಹಕ್ಕು ಸ್ವರೂಪ್ ಹಾಗೂ ಭವಾನಿ ರೇವಣ್ಣ ರವರಿಗೆ ಇದ್ದು, ಕೇವಲ ಅವರಿಗೆ ಮಾತ್ರವಲ್ಲದೆ ಪ್ರತಿಯೊಬ್ಬ ಜನತಾದಳದ ಪ್ರತಿಯೊಬ್ಬ ಕಾರ್ಯಕರ್ತರಿಗೆ ಟಿಕೆಟ್ ಕೇಳುವ ಹಕ್ಕಿದೆ. ಯಾರಿಗೆ ಕೊಡಬೇಕೆನ್ನುವುದು ಪಕ್ಷ ತೀರ್ಮಾನ ಮಾಡುತ್ತದೆ. ಅಲ್ಲದೆ ಮೊನ್ನೆ ಬೆಂಗಳೂರಿನ ಜೆಪಿ ಭವನದಲ್ಲಿ ಸಭೆ ಕರೆದಿದ್ದರು ಎನ್ನುವುದು ಶುದ್ಧ ಸುಳ್ಳು, ಒಬ್ಬ ರಾಜ್ಯಾಧ್ಯಕ್ಷನಾಗಿ ನಾನು ಸಭೆ ಕರೆಯಬೇಕು. ಯಾವ ಸಭೆಯೂ ಇರಲಿಲ್ಲ. ಇದು ಕೆಲವರ ಸೃಷ್ಟಿಯಾಗಿದೆ ಎಂದರು.