ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ರಾಜಕೀಯದಲ್ಲಿ ಸಣ್ಣಪುಟ್ಟ ಅಭಿಪ್ರಾಯ ಭೇದಗಳು ಸಹಜ. ಅದನ್ನೇ ಭಿನ್ನಮತ ಎನ್ನುವುದು ಸರಿಯಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಬೆಂಗಳೂರು (ಏ.05): ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ರಾಜಕೀಯದಲ್ಲಿ ಸಣ್ಣಪುಟ್ಟ ಅಭಿಪ್ರಾಯ ಭೇದಗಳು ಸಹಜ. ಅದನ್ನೇ ಭಿನ್ನಮತ ಎನ್ನುವುದು ಸರಿಯಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಶಿವಕುಮಾರ್ ಮತ್ತು ನನ್ನ ನಡುವೆ ಭಿನ್ನಾಭಿಪ್ರಾಯವಿಲ್ಲ. ಬೇಕೆಂದರೆ ಈಗಲೇ ನಾನು ಅವರ ಮನೆಗೆ ಹೋಗುತ್ತೇನೆ. ನಮ್ಮಿಬ್ಬರಲ್ಲಿ ಅಂಥ ಆತ್ಮೀಯತೆ ಇದೆ. ನಮ್ಮ ನಡುವೆ ಯಾವುದೇ ಸಮಸ್ಯೆಯಿಲ್ಲ. ನಾವು ತುಂಬಾ ಒಳ್ಳೆಯ ಸ್ನೇಹಿತರು.
ನನಗೆ ಪಕ್ಷದ ಯಾವುದೇ ಆಂತರಿಕ ವಿವಾದಗಳ ಬಗ್ಗೆ ತಿಳಿದಿಲ್ಲ. ಅದೆಲ್ಲ ಮಾಧ್ಯಮಗಳ ಸೃಷ್ಟಿ. ಕಾಂಗ್ರೆಸ್ ಅಧಿಕಾರದಲ್ಲಿದೆ ಮತ್ತು ಉತ್ತಮ ಕಾರ್ಯಕ್ರಮಗಳನ್ನು ನೀಡುತ್ತಿದೆ. ಸಣ್ಣ ಭಿನ್ನಾಭಿಪ್ರಾಯಗಳೆಲ್ಲ ಸಹಜ. ಆದರೆ, ಅವು ಆಂತರಿಕ ಸಂಘರ್ಷಗಳಿಗೆ ಕಾರಣವಾಗುವುದಿಲ್ಲ ಎಂದರು. ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ಹನಿಟ್ರ್ಯಾಪ್ ಹಾಗೂ ಅವರ ಪುತ್ರ ರಾಜೇಂದ್ರ ರಾಜಣ್ಣ ಅವರ ಕೊಲೆ ಬೆದರಿಕೆ ಎರಡೂ ಪ್ರಕರಣಗಳ ತನಿಖೆ ನಡೆಯುತ್ತಿದೆ. ತನಿಖೆ ನಡೆದು ವರದಿ ಬಂದ ಬಳಿಕ ಸೂಕ್ತ ಪ್ರತಿಕ್ರಿಯೆ ನೀಡುತ್ತೇನೆ ಎಂದರು.
ಹಾಲು ಉತ್ಪಾದನೆಯಿಂದ ದೇಶದ ಆರ್ಥಿಕತೆ ಬಲಿಷ್ಠ: ಪ್ರಪಂಚದಲ್ಲಿಯೇ ಹೆಚ್ಚು ಹಾಲು ಉತ್ಪಾದನೆ ಮಾಡುವಲ್ಲಿ ಭಾರತ ದೇಶ ಮೊದಲ ಸ್ಥಾನದಲ್ಲಿದ್ದು ಶೇ.25ರಷ್ಟು ಹಾಲು ಉತ್ಪಾದಿಸಿ ವಿವಿಧ ರಾಜ್ಯ, ದೇಶಗಳಿಗೆ ಸರಬರಾಜು ಮಾಡಲಾಗುತ್ತಿದೆ. ನಮ್ಮ ರಾಜ್ಯವೂ ಹೆಚ್ಚು ಹಾಲು ಉತ್ಪಾದನೆ ಮಾಡಿ ತನ್ನದೇ ಆದ ಕೊಡುಗೆ ನೀಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಇದರಿಂದ ರೈತರ ಹಾಗೂ ದೇಶದ ಆರ್ಥಿಕ ಪರಿಸ್ಥಿತಿ ಬದಲಾವಣೆಯಾಗಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.
ಕೇಂದ್ರ ಸರ್ಕಾರದ ನೀತಿಗಳಿಂದ ಬೆಲೆ ಏರಿಕೆ ಅನಿವಾರ್ಯ: ಗೃಹ ಸಚಿವ ಪರಮೇಶ್ವರ್
ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವತಿಯಿಂದ ನಿರ್ಮಿಸಿರುವ ನಂದಿನಿ ಕ್ಷೀರ ಭವನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕ, ಗುಜರಾತ್, ರಾಜಸ್ಥಾನ,ಮಹಾರಾಷ್ಟ್ರ ಹೆಚ್ಚೆಚ್ಚು ಹಾಲು ಉತ್ಪಾದನೆ ಮಾಡಿ ರಾಷ್ಟ್ರದ ಕೀರ್ತಿ ಹೆಚ್ಚಿಸುತ್ತಿದ್ದೇವೆ. ನಮ್ಮ ನಂದಿನಿ ಬ್ರ್ಯಾಂಡ್ ಉತ್ಪನ್ನಗಳನ್ನು ದೇಶ ವಿದೇಶದಗಳಲ್ಲೂ ನೋಡಬಹುದು. 2ಲಕ್ಷ ಲೀಟರ್ ಹಾಲನ್ನೂ ನಾವು ಪ್ರತಿನಿತ್ಯ ಬಾಂಬೆಗೆ ತುಮೂಲ್‌ನಿಂದ ಕಳುಹಿಸುತ್ತಿದ್ದೇವೆ. ಪ್ರತಿ ಜಿಲ್ಲೆಯಲ್ಲಿ ಕೋಲ್ಡ್ ಸ್ಟೋರೇಜ್ ಸ್ಥಾಪಿಸುವ ಬಗ್ಗೆ ಸರ್ಕಾರ ಚಿಂತನೆ ಮಾಡಿದೆ ಎಂದರು.