ಕಳೆದ 19 ವರ್ಷಗಳಿಂದ ಅರಭಾವಿ ಕ್ಷೇತ್ರದಲ್ಲಿ ಜಾತ್ಯಾತೀತ ಮತ್ತು ಪಕ್ಷಾತೀತವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಮೂಡಲಗಿ (ಏ.02): ಕಳೆದ 19 ವರ್ಷಗಳಿಂದ ಅರಭಾವಿ ಕ್ಷೇತ್ರದಲ್ಲಿ ಜಾತ್ಯಾತೀತ ಮತ್ತು ಪಕ್ಷಾತೀತವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲೂಕಿನ ಯಾದವಾಡ ಪಟ್ಟಣದಲ್ಲಿ ಕಳೆದ ಮಂಗಳವಾರದಂದು ಯಾದವಾಡ ಜಿಪಂ ಕ್ಷೇತ್ರದ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಕಾರ್ಯಗಳಲ್ಲಿ ಎಂದಿಗೂ ಯಾವ ತಾರತಮ್ಯವೂ ಮಾಡಿಲ್ಲ ಎಂದು ತಿಳಿಸಿದರು.
ಯಾದವಾಡ ಜಿಲ್ಲಾ ಪಂಚಾಯತಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಸ್ಪಂದಿಸುತ್ತಿದ್ದೇನೆ. ಸಾರ್ವಜನಿಕರಿಗೆ ಅಗತ್ಯವಿರುವ ಎಲ್ಲ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಟ್ಟಿದ್ದೇನೆ. ಕುಡಿಯುವ ನೀರು, ರಸ್ತೆಗಳ ನಿರ್ಮಾಣ, ಶೌಚಾಲಯಗಳು, ಸಾರಿಗೆ ಸಂಪರ್ಕ, ಆರೋಗ್ಯ, ನೀರಾವರಿ, ಶಿಕ್ಷಣ ಮುಂತಾದ ಕ್ಷೇತ್ರಗಳಿಗೆ ಹೆಚ್ಚು ಒತ್ತು ನೀಡಿದ್ದೇನೆ. ಜೊತೆಗೆ ಎಲ್ಲ ಧರ್ಮ ಮತ್ತು ವಿವಿಧ ಸಮುದಾಯಗಳಿಗೆ ಅಗತ್ಯವಿರುವ ದೇವಸ್ಥಾನ, ಮಠ-ಮಂದಿರಗಳಿಗೆ ಕೈಲಾದಷ್ಟು ಸಹಾಯ ನೀಡುವ ಮೂಲಕ ಧಾರ್ಮಿಕ ಕ್ಷೇತ್ರಕ್ಕೆ ನನ್ನದೇಯಾದ ಕೊಡುಗೆಯನ್ನು ನೀಡಿದ್ದೇನೆ. ಯಾದವಾಡ ಪಟ್ಟಣವು ಔದ್ಯೋಗಿಕವಾಗಿ ಹೆಚ್ಚೆಚ್ಚು ಬೆಳೆಯುತ್ತಿರುವುದರಿಂದ ಈ ಭಾಗದಲ್ಲಿ ಕಾರ್ಖಾನೆಗಳಲ್ಲಿ ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಿಕೊಡಲಾಗಿದೆ ಎಂದರು.
ಕುರುಬ, ಹಿಂದುಳಿದ ಸಮುದಾಯ ಕಾಂಗ್ರೆಸ್‌ಗೆ ಮತ ಹಾಕಬೇಕು: ಯತೀಂದ್ರ ಸಿದ್ದರಾಮಯ್ಯ
ಯಾದವಾಡ ಜಿಪಂ ಕ್ಷೇತ್ರ ಮೊದಲಿನಿಂದಲೂ ನಮ್ಮ ಕುಟುಂಬಕ್ಕೆ ನಿಷ್ಠೆ ಹೊಂದಿರುವ ಕ್ಷೇತ್ರವಾಗಿದೆ. 1992 ರಿಂದ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷನಾಗುವ ಮೂಲಕ ಸಹಕಾರ ರಂಗಕ್ಕೆ ಕಾಲಿಟ್ಟನಂತರ ಕ್ಷೇತ್ರದ ಜನರ ಒತ್ತಾಯದ ಮೇರೆಗೆ 2004 ರಲ್ಲಿ ಕ್ಷೇತ್ರದ ಶಾಸಕನಾಗಿ ಜನರ ಆಶೀರ್ವಾದದಿಂದ ಆಯ್ಕೆಯಾಗುತ್ತ ಬರುತ್ತಿದ್ದೇನೆ. ಆದ್ದರಿಂದ ಏಪ್ರಿಲ್-ಮೇ ತಿಂಗಳಲ್ಲಿ ಜರುಗಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡುತ್ತಿದ್ದೇನೆ. ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ನಾನು ಮಾಡಿರುವ ಪ್ರಗತಿಪರ ಸಾಧನೆಗಳನ್ನು ನೋಡಿ ಕಮಲ ಗುರ್ತಿಗೆ ತಮ್ಮ ಮತವನ್ನು ನೀಡುವಂತೆ ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಮುಖಂಡರಾದ ಪರ್ವತಗೌಡ ಪಾಟೀಲ, ಎಂ.ಎಂ.ಪಾಟೀಲ, ಯಲ್ಲಪ್ಪಗೌಡ ನ್ಯಾಮಗೌಡ, ಗೋವಿಂದ ಕೊಪ್ಪದ, ಅಶೋಕ ನಾಯಿಕ, ಸುರೇಶ ಸಾವಳಗಿ, ಅಮೀನಸಾಬ್ ಎಳ್ಳೂರ, ರಂಗಪ್ಪ ಇಟ್ಟನ್ನವರ, ಎಂ.ಎಸ್.ದಂತಾಳಿ, ಹನಮಂತ ಹುಚರಡ್ಡಿ, ಗೌಡಪ್ಪ ಗುರಡ್ಡಿ, ಮಲ್ಲಪ್ಪ ಚಕ್ಕೆನ್ನವರ, ಬಸು ಹಿಡಕಲ್, ಬಸು ಭೂತಾಳಿ, ಬಸು ಕೇರಿ, ಲಕ್ಷ್ಮಣ ಪಾಟೀಲ, ಶಂಕರ ಬೆಳಗಲಿ, ಡಾ.ಶಿವನಗೌಡ ಪಾಟೀಲ, ಗಿರಿಮಲ್ಲಪ್ಪ ಹಳ್ಳೂರ ಸೇರಿದಂತೆ ಯಾದವಾಡ ಜಿಪಂ ಕ್ಷೇತ್ರದ ಮುಖಂಡರು ಉಪಸ್ಥಿತರಿದ್ದರು.
3 ತಿಂಗಳೊಳಗೆ ನೆರೆ ಸಂತ್ರಸ್ತರ ಮನೆ ನಿರ್ಮಾಣ: ಬಾಕಿ ಉಳಿದಿರುವ ನೆರೆ ಸಂತ್ರಸ್ತರ ಮನೆಗಳನ್ನು 3 ತಿಂಗಳೊಳಗೆ ನಿರ್ಮಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲೂಕಿನ ತಳಕಟ್ನಾಳ ಗ್ರಾಮಕ್ಕೆ ಕಳೆದ ಭಾನುವಾರದಂದು ಭೇಟಿ ನೀಡಿ ಮಾತನಾಡಿದ ಅವರು, ಸಂತ್ರಸ್ತರ ಸಮಸ್ಯೆಗಳನ್ನು ಬಗೆಹರಿಸಿ ಬಡಕುಟುಂಬಗಳಿಗೆ ನ್ಯಾಯ ದೊರಕಿಸಿಕೊಡುವುದಾಗಿ ತಿಳಿಸಿದರು. ಪ್ರವಾಹ ಬಂದ ಸಂದರ್ಭದಲ್ಲಿ ನದಿ ತೀರದ ಗ್ರಾಮಗಳು ಮುಳುಗಡೆಯಾಗಿದ್ದರಿಂದ ಇನ್ನು ಕೆಲವರಿಗೆ ಮನೆಗಳು ಮಂಜೂರಾಗಿಲ್ಲ.
ಜೆಡಿಎಸ್ ವರಿಷ್ಠರು ಯಾರನ್ನೂ ಬೆಳೆಯಲು ಬಿಡಲ್ಲ: ಸಚಿವ ನಾರಾಯಣಗೌಡ ಆರೋಪ
ದಂಡಿನ ಮಾರ್ಗ ರಸ್ತೆಗೆ ಹೊಂದಿಕೊಂಡಿರುವ ನದಿ ತೀರದ ನೆರೆಸಂತ್ರಸ್ತರಿಗೆ ಮುಂದಿನ ದಿನಗಳಲ್ಲಿ ಅನುಕೂಲ ಮಾಡಿಕೊಡಲಾಗುವುದು ಎಂದು ತಿಳಿಸಿದರು. ಚುನಾವಣೆಗೆ ಇನ್ನು ಕೆಲವೇ ದಿನಗಳ ಬಾಕಿ ಇದೆ. ಕಾರ್ಯಕರ್ತರು ನಾವು ಮಾಡಿರುವ ಪ್ರಗತಿ ಕಾರ್ಯಗಳನ್ನು ಪ್ರತಿ ಮನೆ ಮನೆಗೆ ತಲುಪಿಸುವ ಕಾರ್ಯ ಮಾಡಬೇಕು. ಕಳೆದ ಚುನಾವಣೆಗಿಂತ ಈ ಬಾರಿ ಅತಿ ಹೆಚ್ಚಿನ ಮತಗಳ ಮುನ್ನಡೆ ದೊರಕಿಸಿ ಕೊಡಬೇಕು. ನಿಮ್ಮ ಸೇವೆಗೆ ಸದಾ ಸಿದ್ಧನಾಗಿದ್ದೇನೆ ಎಂದು ಭರವಸೆ ನೀಡಿದರು. ಪಿಕೆಪಿಎಸ್ ಅಭಿವೃದ್ಧಿಗೆ ಸದಸ್ಯರು ಸಹಕಾರ ತತ್ವದಡಿ ಕಾರ್ಯನಿರ್ವಹಿಸಬೇಕು. ಸದಸ್ಯರಿಗೆ ಸಾಲ ಸೌಲಭ್ಯ ನೀಡುವ ಮೂಲಕ ಅವರ ಆರ್ಥಿಕ ಅಭಿವೃದ್ಧಿಗೆ ನೆರವು ನೀಡುವಂತೆ ಮನವಿ ಮಾಡಿದರು.