ರಾಜ್ಯ ಸರ್ಕಾರ ಇದೆ ಎಂಬ ಅನುಭವವೇ ಇಲ್ಲವಾಗಿದೆ: ಸಂಸದ ಬಿ.ವೈ.ರಾಘವೇಂದ್ರ

Published : Oct 07, 2025, 08:56 AM IST
BY Raghavendra

ಸಾರಾಂಶ

ಅಪರಾಧ ಚಟುವಟಿಕೆಗಳು ಹೆಚ್ಚುತಿದ್ದು, ಸರ್ಕಾರ ಇದೆ ಎಂಬ ಅನುಭವವೇ ಇಲ್ಲವಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರೌಡಿಗಳು ಪರಸ್ಪರ ಹೊಡೆದಾಡಿಕೊಳ್ಳುತ್ತಿದ್ದಾರೆ.

ಶಿವಮೊಗ್ಗ (ಅ.07): ಜಿಲ್ಲೆಯಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚುತಿದ್ದು, ಸರ್ಕಾರ ಇದೆ ಎಂಬ ಅನುಭವವೇ ಇಲ್ಲವಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರೌಡಿಗಳು ಪರಸ್ಪರ ಹೊಡೆದಾಡಿಕೊಳ್ಳುತ್ತಿದ್ದಾರೆ. ಕಿಡಿಗೇಡಿಗಳಿಗೆ ಪೊಲೀಸರ ಭಯವೇ ಇಲ್ಲ. ಭದ್ರಾವತಿಯಲ್ಲಿ ಸರ್ಕಾರವೇ ಇಲ್ಲವಾಗಿದೆ. ಅಲ್ಲಿ ಒಂದು ಕುಟುಂಬದ ಆಡಳಿತ ನಡೆಯುತ್ತಿದೆ. ಅಲ್ಲಿನ ಎಲ್ಲ ನೀಚ ಕೆಲಸಗಳೂ ಆ ಕುಟುಂಬದ ಅಂಕೆಯಲ್ಲಿ ನಡೆಯುತ್ತಿವೆ ಎಂಬ ಅನುಮಾನ ಜನರಿಗೆ ಬಂದಿದೆ. ಎಲ್ಲಿ ಇಸ್ಪೀಟ್ ಆಡಬೇಕು, ಎಲ್ಲಿ ಕ್ಲಬ್ ಇರಬೇಕು ಎಂದು ನಿರ್ಧಾರ ಆಗುತ್ತದೆ. ಈ ಎಲ್ಲ ಕಾರಣಗಳಿಂದಾಗಿ ಬಾರ್‌ಗಳ ಮುಂದೆ ಕೊಲೆಗಳಾಗುತ್ತಿವೆ. ವಿಶ್ವೇಶ್ವರಯ್ಯರ ಕನಸಿನ ಉಕ್ಕಿನ ನಗರಿ ಇಂದು ಇಸ್ಪೀಟ್ ಇತ್ಯಾದಿ ದುಷ್ಕೃತ್ಯಗಳ ಕೇಂದ್ರವಾಗುತ್ತಿದೆ ಎಂದು ಆರೋಪ ಮಾಡಿದರು.

ಒಡೆದು ಆಳುವ ಸಿಎಂ: ಬೆಂಗಳೂರು ಮೆಟ್ರೊ ರೈಲು ನಿಲ್ದಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಸವಣ್ಣನವರ ಹೆಸರು ಪ್ರಸ್ತಾಪ ಮಾಡಿದ್ದಾರೆ. ಇದನ್ನು ಸಂಪೂರ್ಣವಾಗಿ ಸ್ವಾಗತಿಸುತ್ತೇನೆ. ಯಾವುದೇ ಸರ್ಕಾರವಾದರೂ ಬಸವಣ್ಣನವರ ತತ್ವ ಸಿದ್ದಾಂತದಂತೆ ಆಡಳಿತ ನಡೆಸಬೇಕು. ಆದರೆ, ನಮ್ಮ ಮುಖ್ಯಮಂತ್ರಿ ಅವರು ಬರೀ ಭಾಷಣ ಮಾಡುತ್ತಾರೆಯೇ ವಿನಾ ಅದಕ್ಕೆ ತಕ್ಕಂತೆ ಕೆಲಸ ಮಾಡುವುದಿಲ್ಲ. ಬಸವಣ್ಣನವರ ವಿಚಾರಧಾರೆಗಳನ್ನು ಅವರು ಅಳವಡಿಸಿಕೊಂಡಿಲ್ಲ. ಹೀಗೆ ಮಾಡಿದ್ದರೆ ರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ಈ ದುಸ್ಥಿತಿ ಬರುತ್ತಿರಲಿಲ್ಲ ಎಂದು ಕುಟುಕಿದರು.

ಸಿಎಂ ಸಿದ್ದರಾಮಯ್ಯ ಅವರದ್ದು ಒಡೆದು ಆಳುವ ನೀತಿಯಾಗಿದ್ದು, ಲಿಂಗಾಯತ ಧರ್ಮದ ವಿಚಾರದಲ್ಲಿಯೂ ತಮ್ಮ ಬೇಳೆ ಬೇಯಿಸಿಕೊಳ್ಳಲು ಪ್ರಯತ್ನ ಮಾಡುತ್ತಿದ್ದಾರೆ. ಮತಗಳ್ಳತನ ಎಂದು ಕಾಂಗ್ರೆಸ್‌ನವರು ಹೇಳುತ್ತಿರುವುದು ಒಂದು ರಾಜಕಾರಣವಾಗಿದೆ. ಬಿಹಾರ ಮಾದರಿಯಲ್ಲಿ ರಾಜ್ಯದಲ್ಲಿಯೂ ಮತದಾರರ ಪಟ್ಟಿ ಪರಿಷ್ಕರಣೆ ಆಗಬೇಕಿದೆ. ಇಡೀ ದೇಶದಲ್ಲಿ ಈ ಪ್ರಕ್ರಿಯೆ ಆಗಲಿದೆ. ರಾಹುಲ್ ಗಾಂಧಿಯವರು ಬಿಹಾರದಲ್ಲಿ ನಡೆಸಿರುವ ಪಾದಯಾತ್ರೆ ಉಪಯೋಗಕ್ಕೆ ಬರುವುದಿಲ್ಲ ಫಲಿತಾಂಶ ಬಂದ ಮೇಲೆ ಎಲ್ಲವೂ ಬಹಿರಂಗವಾಗಲಿದೆ ಎಂದು ಟೀಕಿಸಿದರು.

ಟೋಲ್ ವಿರುದ್ಧ ಹೋರಾಟ

ಸೊರಬ -ಶಿವಮೊಗ್ಗ ಹೆದ್ದಾರಿಯಲ್ಲಿ ಅಳವಡಿಸಿರುವ ಟೋಲ್ ಗೇಟ್ ವಿರೋಧಿಸಿ ಶಿಕಾರಿಪುರ ಬಂದ್ ನಡೆಸುತ್ತಿರುವುದಕ್ಕೆ ನಮ್ಮ ಬೆಂಬಲ ಇದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಟೋಲ್ ವಿರೋಧಿಸಿ ಜನರು ಹೋರಾಟ ಮಾಡುತಿದ್ದರೂ, ಮರು ಟೆಂಡರ್ ಕರೆದು ಟೋಲ್ ಗೇಟ್‌ಗೆ ಅನುಮತಿ ನೀಡಲಾಗಿದೆ. ಜನರು ಈ ಬಗ್ಗೆ ನಡೆಸುತ್ತಿರುವ ಹೋರಾಟಕ್ಕೆ ನಮ್ಮ ಬೆಂಬಲ ಇದೆ. ಟೋಲ್ ಬಗ್ಗೆ ನಮ್ಮ ಜಿಲ್ಲಾ ಮಂತ್ರಿಗಳಿಗೆ ಎಲ್ಲ ಮಾಹಿತಿ ಇದೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿರುವ ತನಕ ಶಿಕಾರಿಪುರದಲ್ಲಿ ಟೋಲ್ ಅಳವಡಿಸಲು ಬಿಡಲಿಲ್ಲ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಟೋಲ್ ಅಳವಡಿಸಿ ಜನರಿಗೆ ಹೊರೆ ಮಾಡಿದ್ದು, ಬಿಟ್ಟರೆ ಮತ್ತೇನು ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ ಸಿದ್ದರಾಮಯ್ಯನವರೇ ಮತಿಗೇಡಿಗಳಾಗಿ, ಆದ್ರೆ ಅಧಿಕಾರಕ್ಕಾಗಿ ಲಜ್ಜೆಗೇಡಿಗಳಾಗಬೇಡಿ-ಆರ್. ಅಶೋಕ್ ಟೀಕೆ
India Latest News Live: ಭಾರತದ ಶಾಶ್ವತ ಬಾಹ್ಯಾಕಾಶ ನಿವಾಸ ಬಿಎಎಸ್-01ಕ್ಕೆ ನೀಲಿ ನಕ್ಷೆ ಅಂತಿಮಗೊಳಿಸಿದ ಇಸ್ರೋ