ಮುನಿರತ್ನ ಬಂಧನದ ಹಿಂದೆ ದ್ವೇಷಕಾರಣವಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ

By Kannadaprabha NewsFirst Published Sep 16, 2024, 8:05 PM IST
Highlights

ಬಿಜೆಪಿ ಶಾಸಕ, ಮಾಜಿ ಸಚಿವ ಮುನಿರತ್ನ ಅವರ ಬಂಧನದ ಹಿಂದೆ ಯಾವುದೇ ದ್ವೇಷ ರಾಜಕಾರಣವಿಲ್ಲ, ಅವರಿಗೀಗ ಮಾಡಿದ್ದುಣ್ಣೋ ಮಾರಾಯ ಎಂಬಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು. 

ಬೆಳಗಾವಿ (ಸೆ.16): ಬಿಜೆಪಿ ಶಾಸಕ, ಮಾಜಿ ಸಚಿವ ಮುನಿರತ್ನ ಅವರ ಬಂಧನದ ಹಿಂದೆ ಯಾವುದೇ ದ್ವೇಷ ರಾಜಕಾರಣವಿಲ್ಲ, ಅವರಿಗೀಗ ಮಾಡಿದ್ದುಣ್ಣೋ ಮಾರಾಯ ಎಂಬಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಮನಿರತ್ನ ವಿಚಾರದಲ್ಲಿ ಯಾರು ದ್ವೇಷ ರಾಜಕಾರಣ ಮಾಡುತ್ತಾರೆ? ಅವರು ಮಾಡಿರುವುದು ಎಲ್ಲರಿಗೂ ಗೊತ್ತಿದೆ. ಕಾಂಗ್ರೆಸ್ ನಾಯಕರೇನು ಮುನಿರತ್ನ ಅವರಿಗೆ ಕೆಟ್ಟ ಮಾತುಗಳಿಂದ ಬೈಯಿರಿ ಅಥವಾ ಬ್ಲಾಕ್ ಮೇಲ್ ಮಾಡಿ ಎಂದು ಹೇಳಿದ್ದಾರಾ? ಎಂದು ಪ್ರಶ್ನಿಸಿದರು.

ಕೆಲವೊಬ್ಬರು ಮಾತನಾಡುತ್ತಾರೆ ನಿಜ. ಆದರೆ, ಅದನ್ನು ಪ್ರಮಾಣಿಕರಿಸಿ ನೋಡಬೇಕು. ಆದರೆ, ಮುನಿರತ್ನ ವಿಚಾರದಲ್ಲಿ ಏನಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಇದಕ್ಕೆ ಕನ್ನಡಿ ಹಿಡಿಯುವ ಅವಶ್ಯಕತೆ ಇಲ್ಲ. ಮುನಿರತ್ನ ಅವರು ಮಹಿಳೆಯರ ಬಗ್ಗೆ ಆಡಿರುವ ಕೀಳು ಮಾತುಗಳನ್ನು ಯಾರೂ ಕೂಡ ಸಹಿಸಲು ಸಾಧ್ಯವಿಲ್ಲ. ಜಾತಿ, ಜಾತಿಗಳ ಮಧ್ಯೆ ಸಂಘರ್ಷ ತರುವ ಮಾತುಗಳನ್ನು ಯಾರೂ ಕೂಡ ಆಡಬಾರದು ಎಂದರು.

Latest Videos

ಪ್ರಧಾನಿ ಹೇಳಿಕೆಗೆ ಸಚಿವ ಜಾರಕಿಹೊಳಿ ಕಿಡಿ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದ ಗಲಾಟೆ ವಿಷಯವನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿರುವುದಕ್ಕೆ ಕಿಡಿಕಾರಿದ ಸಚಿವ ಸತೀಶ ಜಾರಕಿಹೊಳಿ, ಮೋದಿ ಅವರಿಗೆ ಈ ವಿಷಯ ಬಿಟ್ಟು ಬೇರೆ ಏನಾದರೂ ಇದೆಯಾ ಎಂದು ಪ್ರಶ್ನಿಸಿದರು. ಸುವರ್ಣ ವಿಧಾನಸೌಧದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ 60 ಸಾವಿರ ಸಾರ್ವಜನಿಕ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ. ಆಕಸ್ಮಿಕವಾಗಿ ಒಂದು ಕಡೆ ಇಂತಹ ಘಟನೆ ನಡೆದಿರಬಹುದು. 

ಮುಂದಿನ‌ ಆರೇಳು ವರ್ಷಗಳಲ್ಲಿ ಕರ್ನಾಟಕದಲ್ಲಿ 19,200 ಮೆ. ವ್ಯಾಟ್ಸ್ ಉತ್ಪಾದನೆ: ಗೌರವ್ ಗುಪ್ತಾ

ಈ ಕುರಿತು ಕ್ರಮ ಕೈಗೊಳ್ಳಲು ಪೊಲೀಸರು ಇದ್ದಾರೆ. ಅವರು ಕ್ರಮ ಕೈಗೊಳ್ಳುತ್ತಾರೆ. ಈ ವಿಚಾರವನ್ನು ಮೋದಿ ಗಂಭೀರವಾಗಿ ಏಕೆ ತೆಗೆದುಕೊಳ್ಳಬೇಕು ಎಂದು ಪ್ರಶ್ನಿಸಿದರು. ಶಾಸಕ ಮುನಿರತ್ನ ಬಂಧನದ ಹಿಂದೆ ಯಾವುದೇ ದ್ವೇಷದ ರಾಜಕಾರಣ ಇಲ್ಲ. ಬಾಯಿಗೆ ಬಂದಂತೆ ಮಾತನಾಡಲು ಶಾಸಕ ಮುನಿರತ್ನ ಅವರಿಗೆ ನಾವು ಹೇಳಿದ್ದೇವಾ? ಜೆಡಿಎಸ್‌, ಬಿಜೆಪಿಯವರು ಹೇಳಿದ್ದರಾ? ಎಂದು ಸತೀಶ ಜಾರಕಿಹೊಳಿ ಪ್ರಶ್ನಿಸಿದರು.

click me!