ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ನೀಡುವ ಅಗತ್ಯವಿಲ್ಲ: ಡಿ.ಕೆ.ಶಿವಕುಮಾರ್‌

By Kannadaprabha News  |  First Published Jan 1, 2025, 9:11 AM IST

ಕಲಬುರಗಿ ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆಗೂ ಐಟಿಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೂ ಯಾವುದೇ ಸಂಬಂಧವಿಲ್ಲ. ಸಚಿನ್‌ ಆತ್ಮಹತ್ಯೆ ಪತ್ರದಲ್ಲಿ ಪ್ರಿಯಾಂಕ್‌ ಖರ್ಗೆ ವಿರುದ್ಧ ನೇರ ಆರೋಪ ಮಾಡಿಲ್ಲ, ಬೇರೆಯವರ ಮೇಲೆ ಆರೋಪ ಬಂದಿದ್ದಕ್ಕೆ ಪ್ರಿಯಾಂಕ್‌ ರಾಜೀನಾಮೆ ನೀಡುವ ಅಗತ್ಯವಿಲ್ಲ. 


ಬೆಂಗಳೂರು (ಜ.01): ಕಲಬುರಗಿ ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆಗೂ ಐಟಿಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೂ ಯಾವುದೇ ಸಂಬಂಧವಿಲ್ಲ. ಸಚಿನ್‌ ಆತ್ಮಹತ್ಯೆ ಪತ್ರದಲ್ಲಿ ಪ್ರಿಯಾಂಕ್‌ ಖರ್ಗೆ ವಿರುದ್ಧ ನೇರ ಆರೋಪ ಮಾಡಿಲ್ಲ, ಬೇರೆಯವರ ಮೇಲೆ ಆರೋಪ ಬಂದಿದ್ದಕ್ಕೆ ಪ್ರಿಯಾಂಕ್‌ ರಾಜೀನಾಮೆ ನೀಡುವ ಅಗತ್ಯವಿಲ್ಲ. ಅವರ ಪ್ರಾಮಾಣಿಕತೆ ನಮಗೆ ತಿಳಿದಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಗುತ್ತಿದಾರ ಸಚಿನ್ ಆತ್ಮಹತ್ಯೆಗೆ ಸಂಬಂಧಿಸಿ ಪ್ರಿಯಾಂಕ್‌ ಖರ್ಗೆ ವಿರುದ್ಧ ಆರೋಪ ಮಾಡಿದ ಕೂಡಲೇ ಅವರು ರಾಜೀನಾಮೆ ನೀಡಲು ಸಾಧ್ಯವಿಲ್ಲ. 

ಪ್ರಿಯಾಂಕ್‌ ಖರ್ಗೆ ಅವರ ಪ್ರಮಾಣಿಕತೆ ಬಗ್ಗೆ ನಮಗೆ ತಿಳಿದಿದೆ. ಪ್ರಕರಣದಲ್ಲಿ ಅವರ ಪಾತ್ರವಿಲ್ಲ. ಗುತ್ತಿಗೆದಾರನ ಸಾವಿನ ಕುರಿತು ಕಾನೂನು ಪ್ರಕಾರ ತನಿಖೆ ನಡೆಯಲಿ ಎಂದರು. ಸಚಿನ್‌ ಸಾವಿಗೆ ಕಾರಣವಾಗಿರುವ ಆರೋಪ ಹೊತ್ತಿರುವ ರಾಜು ಜತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಿಯಾಂಕ್‌ ಖರ್ಗೆ ಇರುವ ಫೋಟೋಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಿಡುಗಡೆ ಮಾಡಿರುವ ಕುರಿತು ಇದೇ ವೇಳೆ ಡಿ.ಕೆ.ಶಿವಕುಮಾರ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ವಿಜಯೇಂದ್ರ, ಯಡಿಯೂರಪ್ಪ ಅವರು ಕ್ರಿಮಿನಲ್‌ಗಳು, ರೌಡಿಗಳು ಸೇರಿ ಹಲವರೊಂದಿಗೆ ಫೋಟೋ ತೆಗೆಸಿಕೊಂಡಿದ್ದಾರೆ.

Tap to resize

Latest Videos

ಅವನ್ನೆಲ್ಲ ನಾನು ಬಿಡುಗಡೆ ಮಾಡಲೇ? ಅವರಿಗೆ ಬೇಕು ಎಂದರೆ ಅದನ್ನು ಬಿಡುಗಡೆ ಮಾಡುತ್ತೇನೆ. ಆರೋಪಿಗಳು ಮತ್ತು ನಮ್ಮ ಜತೆ ಮಾತುಕತೆ ನಡೆದಿರುವುದು, ವ್ಯವಹಾರ ಮಾಡಿರುವ ದಾಖಲೆಗಳಿದ್ದರೆ ಆರೋಪ ಮಾಡಲಿ. ನಾವು ಸ್ವಚ್ಛ ಆಡಳಿತ ನೀಡುತ್ತಿದ್ದು, ವಿರೋಧ ಪಕ್ಷದವರು ಸುಮ್ಮನೆ ಮಾತನಾಡಬೇಕು ಎಂಬ ಕಾರಣಕ್ಕೆ ಮಾತನಾಡುತ್ತಿದ್ದಾರೆ ಎಂದು ಹೇಳಿದರು. ಪ್ರಿಯಾಂಕ್‌ ಮೇಲೆ ಅಸೂಯೆ: ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಅವರು ಯಾವ ತಪ್ಪು ಮಾಡಿದ್ದಾರೆಂದು ರಾಜೀನಾಮೆ ನೀಡಬೇಕು? ಪ್ರಿಯಾಂಕ್ ಖರ್ಗೆ ನಮ್ಮ ಪಕ್ಷದ ಧ್ವನಿ. ಅವರ ಮೇಲಿನ ಅಸೂಯೆಯಿಂದ ವಿರೋಧ ಪಕ್ಷದ ನಾಯಕರು ಆರೋಪ ಮಾಡುತ್ತಿದ್ದಾರೆ. 

ಮನಮೋಹನ್ ಸಿಂಗ್ ಹೆಸರಲ್ಲಿ ಬೆಂ.ವಿವಿಯಲ್ಲಿ ಸಂಶೋಧನಾ ಕೇಂದ್ರ ಸ್ಥಾಪಿಸಿ: ಡಿ‌.ಕೆ.ಶಿವಕುಮಾರ್

ದಲಿತ ಸಮುದಾಯದ ನಾಯಕ ಇಷ್ಟು ದೊಡ್ಡ ಮಟ್ಟಕ್ಕೆ ಬೆಳೆಯುತ್ತಿರುವುದನ್ನು ಸಹಿಸಲು ಸಾಧ್ಯವಾಗದೆ ಸಂಚು ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಬಿಜೆಪಿ ನಾಯಕರು ಒತ್ತಾಯಿಸುತ್ತಿರುವ ಕುರಿತು ಮಾತನಾಡಿ, ನನ್ನ ಸಹೋದರ, ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರು ರಾಜರಾಜೇಶ್ವರಿನಗರದ ಕೆಲ ಪ್ರಕರಣಗಳನ್ನು ಪ್ರಸ್ತಾಪಿಸಿದ್ದಾರೆ. ಅವನ್ನೂ ಸೇರಿಸಿ ಸಿಬಿಐಗೆ ವಹಿಸೋಣ. ಈ ಹಿಂದೆ ಕಾಂಗ್ರೆಸ್‌ ಸರ್ಕಾರವಿದ್ದಾಗ ಡಿ.ಕೆ.ರವಿ, ಸೌಜನ್ಯಾ, ಪರೇಶ್‌ ಮೆಸ್ತಾ ಸಾವಿನ ಪ್ರಕರಣ ಸೇರಿ 12 ಪ್ರಕರಣಗಳನ್ನು ಸಿಬಿಐಗೆ ನೀಡಿದ್ದೆವು. ಬಿಜೆಪಿ ಸರ್ಕಾರ ನನ್ನ ಪ್ರಕರಣವನ್ನು ಮಾತ್ರ ಸಿಬಿಐಗೆ ವಹಿಸಿತು. ಅವರ ಸಚಿವರ ಮೇಲಿನ ಪ್ರಕರಣಗಳನ್ನೂ ಸಿಬಿಐ ನೀಡಬಹುದಿತ್ತಲ್ಲವೇ ಎಂದು ಪ್ರಶ್ನಿಸಿದರು.

click me!