ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲ: ಬಿ.ವೈ.ವಿಜಯೇಂದ್ರ ಆರೋಪ

Published : Apr 29, 2024, 07:23 AM IST
ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲ: ಬಿ.ವೈ.ವಿಜಯೇಂದ್ರ ಆರೋಪ

ಸಾರಾಂಶ

ಕಾಂಗ್ರೆಸ್ ಅಲ್ಪಸಂಖ್ಯಾತರ ತುಷ್ಟೀಕರಣದ ರಾಜಕಾರಣ ಮಾಡುತ್ತಿದೆ. ಅಲ್ಪಸಂಖ್ಯಾತರ ಓಲೈಕೆ ಪರಿಣಾಮ ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು. 

ಹೊಸಪೇಟೆ (ಏ.29): ಕಾಂಗ್ರೆಸ್ ಅಲ್ಪಸಂಖ್ಯಾತರ ತುಷ್ಟೀಕರಣದ ರಾಜಕಾರಣ ಮಾಡುತ್ತಿದೆ. ಅಲ್ಪಸಂಖ್ಯಾತರ ಓಲೈಕೆ ಪರಿಣಾಮ ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು. ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಎಂಬ ಹಿಂದೂ ಯುವತಿ ಬರ್ಬರ ಹತ್ಯೆಯಾಗಿದ್ದರೂ ಖಂಡನೆ ಮಾಡಲಿಲ್ಲ. ಮಾರುಕಟ್ಟೆ, ದೇವಸ್ಥಾನಕ್ಕೆ ಹೋದ ಮಗಳು ಸುರಕ್ಷಿತವಾಗಿ ಮನೆಗೆ ಬರುವುದು ಅನುಮಾನವಾಗಿದೆ ಎಂದರು.

ಕಳೆದ ಹತ್ತು ವರ್ಷಗಳಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ನೀಡಿದ ಕೀರ್ತಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುನ್ನ ಅನೇಕ ಭರವಸೆ ನೀಡಿದ್ದರು. ಆದರೆ, ಮುಖ್ಯಮಂತ್ರಿಗಳಿಂದ ಈಡೇರಿಸಲು ಆಗುತ್ತಿಲ್ಲ. ರಾಜ್ಯದ ಕಾಂಗ್ರೆಸ್ ಸರ್ಕಾರ ಭೀಕರ ಬರದಲ್ಲಿ ರೈತರಿಗೆ ಬರ ಪರಿಹಾರ ಕೊಡುತ್ತಿಲ್ಲ ಎಂದರು. ಕೇಂದ್ರ ಸರ್ಕಾರ ₹3454 ಕೋಟಿ ಬಿಡುಗಡೆ ಮಾಡಿದೆ. ಬಿಎಸ್‌ವೈ ಸಿಎಂ ಇದ್ದಾಗ ಪ್ರವಾಹ ಇದ್ದರೂ ರೈತರಿಗೆ ಸಹಕಾರ ನೀಡಿ ಬೆಂಬಲವಾಗಿದ್ದರು. ಆದರೆ, ಈಗ ಅಭಿವೃದ್ಧಿ ಸಂಪೂರ್ಣವಾಗಿ ನಿಂತು ಬಿಟ್ಟಿದೆ. ದೇಶದ ಭವಿಷ್ಯ ರೂಪಿಸುವ ಚುನಾವಣೆಯನ್ನು ಎಲ್ಲ ಕಾರ್ಯಕರ್ತರು ಗಂಭೀರವಾಗಿ ಕೆಲಸ ಮಾಡಬೇಕು. ಬಿಜೆಪಿ-ಜೆಡಿಎಸ್ ಒಟ್ಟಾಗಿ ಗೆಲುವು ಸಾಧಿಸಬೇಕು ಎಂದರು.

ಅನುಕಂಪ ಇಲ್ಲದ ಕಟುಕ ಕಾಂಗ್ರೆಸ್‌ ಸರ್ಕಾರ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ ಬರೀ ಖಾಲಿ ಚೊಂಬು ಪ್ರದರ್ಶನ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಬರದಿಂದ ಮೇವು, ಕುಡಿವ ನೀರಿಲ್ಲ. ಆದರೂ ರೈತರ ಬಗ್ಗೆ ಅನುಕಂಪ ಇಲ್ಲದ ಕಟುಕ ಸರ್ಕಾರ ರಾಜ್ಯದಲ್ಲಿದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಎಚ್‌.ಡಿ.ರೇವಣ್ಣಗೆ ಬಂಧನ ಭೀತಿ?: ಪ್ರಜ್ವಲ್‌ ಬಳಿಕ ಆರೋಪಿ ನಂ.1 ತಂದೆಗೂ ಸಂಕಷ್ಟ

ಉಪಸಮಿತಿ ತೀರ್ಮಾನದಂತೆ ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ 10 ವರ್ಷಗಳಲ್ಲಿ ರಾಜ್ಯದಿಂದ ಕೇಳಿದ ₹19 ಸಾವಿರ ಕೋಟಿಯಲ್ಲಿ ಕೇವಲ ಒಂದೂವರೆ ಸಾವಿರ ಕೋಟಿ ರು. ಕೊಟ್ಟಿದ್ದರು. ಮೋದಿ ಕಳೆದ ಎಂಟು ವರ್ಷದಲ್ಲಿ ₹18 ಸಾವಿರ ಕೋಟಿಯಲ್ಲಿ ₹7 ಸಾವಿರ ಕೋಟಿ ಬಿಡುಗಡೆ ಮಾಡಿದ್ದಾರೆ. ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡಿದ್ದರೂ ಕಾಂಗ್ರೆಸ್ ಸಣ್ಣತನದ ರಾಜಕಾರಣ ಮಾಡುತ್ತಿದೆ. ಮೋದಿ ವರ್ಚಸ್ಸಿನಿಂದ ಬಿಜೆಪಿ ಗೆಲುವು ಸಾಧಿಸಲಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!