ಗ್ಯಾರಂಟಿ ಯೋಜನೆ, ಅಭಿವೃದ್ಧಿ ಕಾರ್ಯ ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಸಚಿವ ಡಾ.ಎಂ.ಸಿ.ಸುಧಾಕರ್

Published : Apr 06, 2025, 04:31 PM ISTUpdated : Apr 06, 2025, 04:33 PM IST
ಗ್ಯಾರಂಟಿ ಯೋಜನೆ, ಅಭಿವೃದ್ಧಿ ಕಾರ್ಯ ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಸಚಿವ ಡಾ.ಎಂ.ಸಿ.ಸುಧಾಕರ್

ಸಾರಾಂಶ

ವಿವಿಧ ಅಗತ್ಯ ಕಾರ್ಯಕ್ರಮಗಳಿಗೆ ಹಣ ಕೊಡುವುದರ ಜೊತೆಗೆ ಹೆಚ್ಚುವರಿ ಗ್ಯಾರಂಟಿಗಳಿಗೆ ಅನುದಾನವನ್ನು ಒದಗಿಸುವಂತಹ ಪ್ರಮಾಣಿಕ ಪ್ರಯತ್ನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡುತ್ತಿದ್ದಾರೆ. 

ಬಾಗೇಪಲ್ಲಿ (ಏ.06): ವಿವಿಧ ಅಗತ್ಯ ಕಾರ್ಯಕ್ರಮಗಳಿಗೆ ಹಣ ಕೊಡುವುದರ ಜೊತೆಗೆ ಹೆಚ್ಚುವರಿ ಗ್ಯಾರಂಟಿಗಳಿಗೆ ಅನುದಾನವನ್ನು ಒದಗಿಸುವಂತಹ ಪ್ರಮಾಣಿಕ ಪ್ರಯತ್ನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳನ್ನು ಹಾಗೂ ಗ್ಯಾರಂಟಿಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದರು. ಪಟ್ಟಣದ ಹೊರವಲಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನೂತನ ಕೊಠಡಿಗಳ ಉದ್ಘಾಟನೆ ಹಾಗೂ 3 ಕೋಟಿ ರೂ.ಗಳ ವೆಚ್ಚದಲ್ಲಿ ಕೊಠಡಿಗಳ ನಿರ್ಮಾಣಕ್ಕೆ ಗುದ್ದಲಿ ಪೂಜೆ, 6ಕೋಟಿ ರೂ.ಗಳ ವೆಚ್ಚದಲ್ಲಿ ಪಾಲಿಟೆಕ್ನಿಕ್ ಕಾಲೇಜು ಕೊಠಡಿಗಳ ನಿರ್ಮಾಣಕ್ಕೆ ಗುದ್ದಲಿ ಪೂಜೆ ಹಾಗೂ 4 ಕೋಟಿ ರೂ.ಗಳ ವೆಚ್ಚದಲ್ಲಿ ಪಟ್ಟಣದಲ್ಲಿ ಬಿಸಿಎಂ ಇಲಾಖೆ ವಿದ್ಯಾರ್ಥಿನಿಲಯಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಹಳೇ ಕೋರ್ಸ್‌ಗಳ ಆರಂಭ: ಮಕ್ಕಳ ಹಾಜರಾತಿಗೆ ಅನುಗುಣವಾಗಿ ಕಾಲೇಜುಗಳ ಅಭಿವೃದ್ದಿ ಮಾಡುವುದಲ್ಲದೆ ಹಂತ ಹಂತವಾಗಿ ಸರ್ಕಾರಿ ಕಾಲೇಜುಗಳಲ್ಲಿ ಹಳೇ ಕೋರ್ಸ್‍ಗಳಾದ ಬಿಎ, ಬಿಕಾಂ ಜೊತೆಗೆ ಬಿಸಿಎ, ಬಿಬಿಎಂ ಇತ್ಯಾಧಿ ಹೊಸ ಹೊಸ ಕೋರ್ಸ್‍ಗಳನ್ನು ಪ್ರಾರಂಭಿಸುವ ಮೂಲಕ ಬಡವರ ಮಕ್ಕಳ ಶೈಕ್ಷನಿಕ ಅಭಿವೃದ್ದಿಗೆ ಒತ್ತು ನೀಡುವಂತಹ ಕೆಲಸಕ್ಕೆ ಸರ್ಕಾರ ಮುಂದಾಗಿದೆ ಎಂದರು. ಹಾಸನದ ಒಂದು ವಿಧಾನ ಸಭಾ ಕ್ಷೇತ್ರದಲ್ಲಿ ಮೂರು ಪಾಲಿಟೆಕ್ನಿಕ್ ಕಾಲೇಜು, ಎಂಜಿನಿಯರಿಂಗ್ ಕಾಲೇಜುಗಳಿವೆ. ಶಿಕ್ಷಣ ಇಲಾಖೆ ಸೇರಿದಂತೆ ಲೋಕೋಪಯೋಗಿ ಇಲಾಖೆಗಳ ಸರ್ಕಾರಿ ದುಡ್ಡೆಲ್ಲ ಆ ಜಿಲ್ಲೆಗೆ ಹೋಗುತ್ತಿದೆ ಎಂದು ಹೆಸರು ಹೇಳದೆ ದೇವೇಗೌಡರ ಕುಟುಂಬದ ಕಡೆ ಬೆಟ್ಟುತೋರಿಸಿದರು.

ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಮಾತನಾಡಿ ಕ್ಷೇತ್ರದ ಸರ್ವತೋಮು ಅಭಿವೃದ್ದಿಯ ಜೊತೆಗೆ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವುದಾಗಿ ತಿಳಿಸಿದರು. ನಮ್ಮ ಕ್ಷೇತ್ರದ ಅಭಿವೃದ್ದಿಯ ವಿಚಾರದಲ್ಲಿ ನಮ್ಮ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಹೆಚ್ಚಿನ ಕಾಳಜಿವಹಿಸಿ ಅಗತ್ಯ ಅಭಿವೃದ್ದಿ ಕಾರ್ಯಕ್ರಮಗಳಿಗೆ ಹೆಚ್ಚಿನ ಅನುಧಾನವನ್ನು ನೀಡುವ ಮೂಲಕ ಸಹಕರಿಸುತ್ತಿರುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಮನೀಷಾ ಎನ್ ಪತ್ರಿ, ತಾ.ಪಂ ಇಒ ರಮೇಶ್,ಬಿಇಒ ವೆಂಕಟೇಶ್, ಪುರಸಭೆ ಅಧ್ಯಕ್ಷ ಎ.ಶ್ರೀನಿವಾಸ್, ಪ್ರಾಂಶುಪಾಲರಾದ ನಾರಾಯಣ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ರಾಜ್ಯ ನೀರಾವರಿ ಯೋಜನೆ ಸಮಸ್ಯೆ ಬಗೆಹರಿಸಲು ಕೇಂದ್ರ ಭರವಸೆ: ಡಿ.ಕೆ.ಶಿವಕುಮಾರ್‌

ಉದ್ಯೋಗಾಧಾರಿತ ಶಿಕ್ಷಣವೇ ಸರ್ಕಾರದ ಉದ್ದೇಶ: ರಾಜ್ಯದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವುದರ ಜೊತೆಗೆ ಉದ್ಯೋಗಗಳನ್ನು ದೊರಕಿಸಿಕೊಡುವುದೇ ನಮ್ಮ ಸರ್ಕಾರದ ಮುಖ್ಯ ಉದ್ದೇಶವಾಗಿದ್ದು, ಈ ನಿಟ್ಟಿನಲ್ಲಿ ಉದ್ಯೋಗಾಧಾರಿತ ಶಿಕ್ಷಣವನ್ನು ನೀಡಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸುಮಾರು 7 ಕೋಟಿ ವೆಚ್ಚದ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ತುಂಬಾ ಮುಖ್ಯವಾಗಿದೆ. ಕನ್ನಡದ ಜೊತೆಗೆ ಇಂಗ್ಲಿಷ್ ಸಹ ಕಲಿಯಬೇಕು. ಕಾಲೇಜಿನಲ್ಲಿ ತಮ್ಮ ಸಹಪಾಠಿಗಳೊಡನೆ ಇಂಗ್ಲಿಷ್ ನಲ್ಲಿ ಮಾತನಾಡಬೇಕು ಎಂದು ಸಲಹೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್
Karnataka News Live: ವರುಣಾ ಜನತೆಯ ಋಣ ತೀರಿಸಲು ಸಾಧ್ಯವಿಲ್ಲ, ಆದರೂ ಶ್ರಮಿಸುವೆ - ಯತೀಂದ್ರ ಸಿದ್ದರಾಮಯ್ಯ