ಭ್ರಷ್ಟಾಚಾರ ವಿರುದ್ಧ ಮಾತನಾಡಿದ್ರೆ ಕಾಂಗ್ರೆಸ್‌ನಲ್ಲಿ ಮರ್ಯಾದೆ ಇಲ್ಲ: ಸಂಸದ ಬೊಮ್ಮಾಯಿ

Kannadaprabha News   | Kannada Prabha
Published : Jun 23, 2025, 07:14 AM IST
Basavaraj Bommai

ಸಾರಾಂಶ

ಭ್ರಷ್ಟಾಚಾರದ ವಿರುದ್ಧ ಮಾತನಾಡುವವರಿಗೆ ಕಾಂಗ್ರೆಸ್‌ನಲ್ಲಿ ಮರ್ಯಾದೆ ಇಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಗದಗ (ಜೂ.23): ಭ್ರಷ್ಟಾಚಾರದ ವಿರುದ್ಧ ಮಾತನಾಡುವವರಿಗೆ ಕಾಂಗ್ರೆಸ್‌ನಲ್ಲಿ ಮರ್ಯಾದೆ ಇಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಆಳಂದ ಶಾಸಕ ಬಿ.ಆರ್.ಪಾಟೀಲ ಅವರು ಹಲವಾರು ವಿಚಾರಗಳನ್ನು ಎತ್ತುತ್ತಾರೆ. ಅವರ ಮಾತಿಗೆ ಕಾಂಗ್ರೆಸ್‌ನವರು ಯಾರೂ ಮರ್ಯಾದೆ ಕೊಡುತ್ತಿಲ್ಲ. ಭ್ರಷ್ಟಾಚಾರದ ವಿರುದ್ಧ ಮಾತನಾಡುವವರಿಗೆ ಕಾಂಗ್ರೆಸ್‌ನಲ್ಲಿ ಮರ್ಯಾದೆ ಇಲ್ಲ ಎನ್ನುವುದು ಬಹಳ ಸ್ಪಷ್ಟವಾಗಿದೆ ಎಂದು ಹೇಳಿದರು.

ಎಚ್.ಕೆ.ಪಾಟೀಲ ಅವರು ಗಣಿ ಅಕ್ರಮದಲ್ಲಿ ನೋಂದಾವಣೆಗೊಂಡಿರುವ ಕೇಸ್‌ಗಳ ಪೈಕಿ ಶೇ.90ರಷ್ಟು ಕೇಸ್‌ಗಳು ಇತ್ಯರ್ಥವಾಗಿಲ್ಲ ಎಂದು ಅತ್ಯಂತ ಮಹತ್ವದ ವಿಚಾರ ಪ್ರಸ್ತಾಪಿಸಿದ್ದಾರೆ. ಈ ಕುರಿತು ವಿಶೇಷ ನ್ಯಾಯಾಲಯ ಆರಂಭಿಸಬೇಕು, ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಹೇಳಿದ್ದಾರೆ. ಅವರದೇ ಸಚಿವ ಸಂಪುಟದ ಸದಸ್ಯರು ಎತ್ತಿರುವ ಪ್ರಕರಣಕ್ಕೆ ಮುಖ್ಯಮಂತ್ರಿ ಹೇಗೆ ಸ್ಪಂದಿಸುತ್ತಾರೆ ಎನ್ನುವುದು ರಾಜ್ಯದ ಜನರ ಪ್ರಶ್ನೆಯಾಗಿದೆ ಎಂದರು.

ಸಚಿವ ಎಚ್ಕೆಪಿ ಪತ್ರಕ್ಕೆ ಸಿಎಂ ಸ್ಪಂದನೆ ಏನು?: ಅಕ್ರಮ ಗಣಿ ಪ್ರಕರಣಗಳ ಕುರಿತು ಸರ್ಕಾರದ ಕ್ರಮದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಕಾನೂನು ಸಚಿವ ಎಚ್.ಕೆ. ಪಾಟೀಲ ಬರೆದಿರುವ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯವೇನು ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್.ಕೆ. ಪಾಟೀಲ ಅವರು ಗಣಿ ಅಕ್ರಮದಲ್ಲಿ ನೋಂದಾಗಿರುವ ಕೇಸ್‌ಗಳ ಬಗ್ಗೆ ಶೇ. 90 ಕೇಸ್‌ಗಳು ಇತ್ಯರ್ಥವಾಗಿಲ್ಲ ಎಂದು ಅತ್ಯಂತ ಮಹತ್ವದ ವಿಚಾರ ಪ್ರಸ್ತಾಪಿಸಿದ್ದಾರೆ.

ಅವರದೇ ಸಚಿವ ಸಂಪುಟದ ಸದಸ್ಯರು ಎತ್ತಿರುವ ಪ್ರಕರಣಕ್ಕೆ ಮುಖ್ಯಮಂತ್ರಿ ಹೇಗೆ ಸ್ಪಂದಿಸುತ್ತಾರೆ ಎನ್ನುವುದು ರಾಜ್ಯದ ಜನರ ಪ್ರಶ್ನೆಯಾಗಿದೆ.ಎಚ್.ಕೆ. ಪಾಟೀಲ ಅವರು ಈ ಕುರಿತು ವಿಶೇಷ ನ್ಯಾಯಾಲಯ ಆರಂಭಿಸಬೇಕು, ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಹೇಳಿದ್ದಾರೆ. ಈಗಾಗಲೇ ಹಲವಾರು ಕೇಸುಗಳು ನೋಂದಣಿಯಾಗಿ ಎಸ್‌ಐಟಿ ರಚನೆ ಆಗಿವೆ. ಸಿಬಿಐ ತನಿಖೆ ನಡೆಯುತ್ತಿವೆ. ಎಸ್‌ಐಟಿ ಮುಖ್ಯಸ್ಥರ ಮೇಲೆ ಹಲವಾರು ಆರೋಪಗಳು ಕೇಳಿ ಬಂದಿವೆ. ಎಚ್.ಕೆ. ಪಾಟೀಲ ಅವರು 2017-18ರ ಪೂರ್ವದ ಪ್ರಕರಣಗಳ ಬಗ್ಗೆ ಮಾತನಾಡಿದ್ದಾರೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಇದ್ದಾಗ ಇಡಿ ದೇಶದಲ್ಲಿ ಗಣಿಗಳನ್ನು ಇ-ಹರಾಜು ಮಾಡಬೇಕು ಎಂದು ಕೇಂದ್ರ ಸರ್ಕಾರ ಕಾನೂನು ಜಾರಿ ಮಾಡಿತು.

ಕೇಂದ್ರ ಸರ್ಕಾರ ಕಾನೂನು ಜಾರಿ ಮಾಡುವ ಹಿಂದಿನ ದಿನ ಕರ್ನಾಟಕ ಸರ್ಕಾರ ತನಗೆ ಬೇಕಾದವರಿಗೆ ಹಲವಾರು ಗಣಿ ಗುತ್ತಿಗೆ ನವೀಕರಣ ಮಾಡಿತ್ತು. ಅವುಗಳ ಬಗ್ಗೆಯೂ ತನಿಖೆ ಮಾಡಲು ಎಚ್.ಕೆ. ಪಾಟೀಲ ಒಪ್ಪುತ್ತಾರಾ ಎಂದು ಪ್ರಶ್ನಿಸಿದರು.ಇದೇ ವೇಳೆ ಆಳಂದ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ ಅವರು, ಸರ್ಕಾರಿ ಮನೆ ಹಂಚಿಕೆಯಲ್ಲಿ ಭ್ರಷ್ಟಾಚಾರವಾಗುತ್ತಿರುವ ಬಗ್ಗೆ ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು. ಬಿ.ಆರ್. ಪಾಟೀಲ ಹಲವಾರು ವಿಚಾರ ಎತ್ತುತ್ತಾರೆ. ಅವರ ಮಾತಿಗೆ ಕಾಂಗ್ರೆಸ್‌ನವರು ಯಾರೂ ಮರ್ಯಾದೆ ಕೊಡುತ್ತಿಲ್ಲ. ಭ್ರಷ್ಟಾಚಾರದ ವಿರುದ್ಧ ಮಾತನಾಡುವವರಿಗೆ ಕಾಂಗ್ರೆಸ್‌ನಲ್ಲಿ ಮರ್ಯಾದೆ ಇಲ್ಲ ಎನ್ನುವುದು ಬಹಳ ಸ್ಪಷ್ಟವಾಗಿದೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!