ವಿಧಾನಪರಿಷತ್ ಚುನಾವಣೆಗೆ ಮಹಿಳೆಯರಿಗಿಲ್ಲ ಅವಕಾಶ: ರಾಜ್ಯ ಮಹಿಳಾ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಆಕ್ರೋಶ

Published : Jun 20, 2023, 10:53 AM IST
ವಿಧಾನಪರಿಷತ್ ಚುನಾವಣೆಗೆ ಮಹಿಳೆಯರಿಗಿಲ್ಲ ಅವಕಾಶ: ರಾಜ್ಯ ಮಹಿಳಾ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಆಕ್ರೋಶ

ಸಾರಾಂಶ

ವಿಧಾನ ಪರಿಷತ್ ಚುನಾವಣೆಯಲ್ಲಿ ಮಹಿಳೆಯರಿಗೆ ಅವಕಾಶ ನೀಡದ ಹಿನ್ನೆಲೆ ರಾಜ್ಯ ಮಹಿಳಾ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದ ಕಾಂಗ್ರೆಸ್ ವರಿಷ್ಠರ ನಡೆ ಟ್ವೀಟರ್ ಮೂಲಕ ಖಂಡಿಸಿದ್ದಾರೆ

ಬೆಂಗಳೂರು (ಜೂ.20) ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಕೆಶಿ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಅವರ ಜತೆಗೆ ನೂತನ ಮಂತ್ರಿಗಳಾಗಿ ಎಂಟು ಮಂದಿ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಈ ವೇಳೆ ಮಹಿಳೆಯರನ್ನು ಕಡೆಗಣಿಸಿದ್ದರು. ಇದು ಭಾರೀ ಆಕ್ರೊಶಕ್ಕೂ ಕಾರಣವಾಗಿತ್ತು. ಇದೀಗ ವಿಧಾನಪರಿಷತ್ ಚುನಾವಣೆಯಲ್ಲೂ ಮಹಿಳೆಯರಿಗೆ ಸಾಂವಿಧಾನಿಕ, ಕಾನುನುಬದ್ಧವಾಗಿ ಸಿಗಬೇಕಾದ ಅವಕಾಶ ನೀಡದ ಹಿನ್ನೆಲೆ ಮತ್ತೊಮ್ಮೆ ಆಕ್ರೋಶ ಭುಗಿಲೆದ್ದಿದೆ.

ವಿಧಾನ ಪರಿಷತ್ ಚುನಾವಣೆಯಲ್ಲಿ ಮಹಿಳೆಯರಿಗೆ ಅವಕಾಶ ನೀಡದ ಹಿನ್ನೆಲೆ ರಾಜ್ಯ ಮಹಿಳಾ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದ ಕಾಂಗ್ರೆಸ್ ವರಿಷ್ಠರ ನಡೆ ಟ್ವೀಟರ್ ಮೂಲಕ ಖಂಡಿಸಿದ್ದಾರೆ

ವಿಧಾನ ಪರಿಷತ್‌ ಚುನಾವಣೆಗೆ ಸಚಿವ ಬೋಸರಾಜು, ಜಗದೀಶ್‌ ಶೆಟ್ಟರ್‌ಗೆ ಟಿಕೆಟ್‌ ಕೊಟ್ಟ ಕಾಂಗ್ರೆಸ್‌

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun kharge AICC President) ಗೆ ಟ್ಟೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಮಹಿಳಾ ಕಾಂಗ್ರೆಸ್ ಮುಖಂಡರು, ಚುನಾವಣೆಗೂ ಮುನ್ನ ಮಹಿಳಾ ಮತದಾನ ಪಡೆಯಲು 'ನಾ ನಾಯಕಿ' ಅಂತೀರಾ ಇದೀಗ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದಮೇಲೆ "ನೋ ನಾಯಕಿ' ಅಂತೀರಾ ಎಂದು ಪ್ರಶ್ನಿಸಿದ್ದಾರೆ. 

ದೇಶಗಳಲ್ಲಿ ಒಟ್ಟು 50 % ಮಹಿಳಾ ಮತದಾರರು ಇದಾರೆ. ಆದರೆ ಆದ್ರೆ ವಿಧಾನ ಸಭಾ ಚುನಾವಣೆ ಹಾಗೂ ವಿಧಾನ ಪರಿಷತ್ ಚುನಾವಣೆಯಲ್ಲಿ ಮಹಿಳೆಯರಿಗೆ ಅವಕಾಶ ನೀಡುತ್ತಿಲ್ಲ. ಮಹಿಳೆಯರ ಸಬಲಿಕರಣದ ಮಾತಾಡುವವರು ಯಾಕೆ ಸ್ಥಾನ ಕಲ್ಪಿಸುತ್ತಿಲ್ಲ. ಮಹಿಳೆಯರನ್ನು ಕೇವಲ ಮತಬ್ಯಾಂಕ್‌ಗಾಗಿ ಮಾತ್ರ ಬೇಕಾ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಎಲ್ಲೆಡೆ ಮಹಿಳಾ ಕಾರ್ಯಕರ್ತೆಯರಿಂದ ಪ್ರತಿಕ್ರಿಯೆಗಳು ಬರುತ್ತವೆ. ರಿಟ್ವೀಟ್ ಆಗುತ್ತಿವೆ. ಒಟ್ಟಿನಲ್ಲಿ ಅಧಿಕಾರಕ್ಕೆ ಬಂದ ಬಳಿಕ ರಾಜ್ಯ ಕಾಂಗ್ರೆಸ್ ಪಕ್ಷ ಎರಡನೇ ಬಾರಿಗೆ ಮಹಿಳೆಯ ಆಕ್ರೋಶಕ್ಕೆ ಗುರಿಯಾಗಿದೆ. 

ಶಾಸಕರ ಪ್ರತಿಭಟನೆ ಓಕೆ, ಕಲ್ಲು ಹೊಡೆದಿದ್ದು ಯಾಕೆ? ಆಯನೂರು ಮಂಜುನಾಥ ಪ್ರಶ್ನೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ
ಸಿಸೇರಿಯನ್‌ ಹೆರಿಗೆ ಹೆಚ್ಚಳ ಏಕೆ ಎಂದು ತಿಳಿಯಲು ಆಡಿಟ್‌: ಸಚಿವ ದಿನೇಶ್‌ ಗುಂಡೂರಾವ್