ಮಹಿಳೆಯರನ್ನು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿಸುವ ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಸುವರ್ಣ ವಿಧಾನಸೌಧ (ಡಿ.20): ಮಹಿಳೆಯರನ್ನು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿಸುವ ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸುವರ್ಣ ವಿಧಾನಸೌಧಕ್ಕೆ ಆಗಮಿಸಿದ್ದ ಗೃಹಲಕ್ಷ್ಮಿ ಯೋಜನೆಯ ಹಲವು ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಗೃಹಲಕ್ಷ್ಮಿ ಯೋಜನೆಯ ಹಣದಿಂದ ಬದುಕಿನ ಅವಕಾಶಗಳನ್ನು ಸೃಷ್ಟಿಸಿಕೊಂಡ 25 ಕ್ಕೂ ಹೆಚ್ಚು ಮಂದಿ ಫಲಾನುಭವಿಗಳನ್ನು ಭೇಟಿ ಮಾಡಿ ಸಂವಾದ ನಡೆಸಿದ್ದೇನೆ. ಈ ಯೋಜನೆ ತಮ್ಮ ಜೀವನದಲ್ಲಿ ಹೊಸ ಚೈತನ್ಯ ತಂದಿದೆ ಎಂದು ಫಲಾನುಭವಿಗಳು ವಿವರಿಸಿದರು. ಇದಕ್ಕಾಗಿ ಸರ್ಕಾರಕ್ಕೆ ಕೃತಜ್ಞರಾಗಿರುವುದಾಗಿ ಹೇಳಿದರು ಎಂದು ತಿಳಿಸಿದರು.
ಗೃಹಲಕ್ಷ್ಮಿ ಯೋಜನೆ ಒಂದೇ ಮನೆಯ ಅತ್ತೆ ಸೊಸೆಯ ಮಧ್ಯೆ ಜಗಳ ತಂದಿದೆ ಎಂದು ಬಿಜೆಪಿಯವರು ಆರೋಪಿಸಿದ್ದರು. ಆದರೆ ಇಂದಿನ ಕಾರ್ಯಕ್ರಮಕ್ಕೆ ಅತ್ತೆಸೊಸೆಯರೇ ಜೊತೆ ಜೊತೆಯಾಗಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಯೋಜನೆಯಿಂದ ತಮಗಾಗಿರುವ ಲಾಭದ ಬಗ್ಗೆ ತಿಳಿಸಿದರು. ಈ ಯೋಜನೆಯಿಂದ ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರಾಗುತ್ತಿರುವುದು ಸಂತೋಷದ ವಿಚಾರ. ಆದ್ದರಿಂದ ಮಹಿಳೆಯರನ್ನು ಸಶಕ್ತಗೊಳಿಸುವ ಈ ಯೋಜನೆಯನ್ನು ನಿಲ್ಲಿಸುವ ಮಾತೇ ಇಲ್ಲ, ಮುಂದುವರೆಸಿಕೊಂಡು ಹೋಗುತ್ತೇವೆ ಎಂದು ತಿಳಿಸಿದರು.
undefined
ಈಶ ಫೌಂಡೇಶನ್ ಮೈದಾನದಲ್ಲಿ ಗ್ರಾಮೋತ್ಸವದಲ್ಲಿ ಪಾಲ್ಗೊಂಡ ನಟಿ ಶ್ರೀನಿಧಿ ಶೆಟ್ಟಿ
ವಕ್ಫ್ ಗೊಂದಲ ನಿವಾರಣೆಗೆ ಸಮಿತಿ: ವಕ್ಫ್ ಮಂಡಳಿ ಆಸ್ತಿ ವಿವಾದ ಮತ್ತು ಗೊಂದಲ ಬಗೆಹರಿಸಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಸಮಿತಿ ರಚಿಸಲಾಗುವುದು ಎಂದು ರಾಜ್ಯ ಸರ್ಕಾರ ಘೋಷಿಸಿದೆ. ಅಲ್ಲದೆ, ಇನಾಂ ರದ್ದತಿ ಕಾಯ್ದೆ ಮತ್ತು ಭೂ ಸುಧಾರಣಾ ಕಾಯ್ದೆ ಅಡಿ ರೈತರಿಗೆ ಮಂಜೂರಾದ ಭೂಮಿಯು ವಕ್ಫ್‌ಗೆ ಸೇರಿದ್ದಾಗಿದ್ದರೆ, ದೇವಸ್ಥಾನ, ಹಿಂದೂ ರುದ್ರಭೂಮಿ, ಸರ್ಕಾರಿ ಶಾಲೆಗಳು ವಕ್ಫ್ ಆಸ್ತಿಯಲ್ಲಿದ್ದರೆ ಅಂಥವನ್ನು ತೆರವು ಮಾಡುವುದಿಲ್ಲ. ಬದಲಾಗಿ ಪಹಣಿಯಲ್ಲಿ ನಮೂದಾಗಿರುವ ವಕ್ಫ್ ಅನ್ನು ತೆಗೆದು ಖಾತೆ ಮಾಡಿಕೊಡಲಾಗುವುದು ಎಂದೂ ಪ್ರಕಟಿಸಿದೆ.
ವಕ್ಫ್ ಆಸ್ತಿ ನೆಪದಲ್ಲಿ ರಾಜ್ಯದ ರೈತರಿಗೆ ನೋಟಿಸ್ ನೀಡುತ್ತಿರುವ ಕುರಿತು ನಡೆದ ಚರ್ಚೆಗೆ ಬಿಜೆಪಿ ಶಾಸಕರ ಸಭಾತ್ಯಾಗದ ಬಳಿಕ ಉತ್ತರಿಸಿದ ಸಿದ್ದರಾಮಯ್ಯ, ವಕ್ಫ್ ಮಂಡಳಿ ಆಸ್ತಿ ಕುರಿತು ಎದ್ದಿರುವ ವಿವಾದವನ್ನು ಬಗೆಹರಿಸಲು ಸರ್ಕಾರ ಬದ್ಧವಾಗಿದೆ. ವಕ್ಫ್ ಆಸ್ತಿಯಲ್ಲಿರುವ ಕೃಷಿ ಭೂಮಿ, ದೇವಸ್ಥಾನ ಮತ್ತು ಹಿಂದೂ ರುದ್ರಭೂಮಿಗಳ ಕುರಿತು ಪರಿಶೀಲಿಸಿ ವರದಿ ನೀಡಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು ಎಂದು ತಿಳಿಸಿದರು.
Kodagu: ವಿರಾಜಪೇಟೆ ಪಟ್ಟಣದ ಮಗ್ಗುಲಲ್ಲಿಯೇ ಹುಲಿ ಓಡಾಟ ಆತಂಕದಲ್ಲಿ ಜನರು
ಇನಾಂ ರದ್ದತಿ ಕಾಯ್ದೆ ಮತ್ತು ಭೂ ಸುಧಾರಣಾ ಕಾಯ್ದೆ ಅಡಿ ರೈತರಿಗೆ ಮಂಜೂರಾದ ಭೂಮಿ ವಕ್ಫ್‌ಗೆ ಸೇರಿದ್ದಾಗಿದ್ದರೆ, ದೇವಸ್ಥಾನ, ಹಿಂದೂ ರುದ್ರಭೂಮಿ, ಸರ್ಕಾರಿ ಶಾಲೆಗಳು ವಕ್ಫ್ ಆಸ್ತಿಯಲ್ಲಿದ್ದರೆ ಅಂತಹವನ್ನು ತೆರವು ಮಾಡದಿರುವ ಸರ್ಕಾರ ಈಗಾಗಲೇ ನಿರ್ಧರಿಸಿದೆ. ಮಸೀದಿ, ಮದರಸಾ, ದರ್ಗಾ, ಈದ್ಗಾ ಮೈದಾನ, ಖಬರಸ್ತಾನದ ಭೂಮಿಗಳನ್ನು ಮಾತ್ರ ವಕ್ಫ್‌ಗೆ ಸೇರ್ಪಡೆ ಮಾಡಲಾಗುವುದು. ಅದರೊಂದಿಗೆ ಸರ್ಕಾರ ನಿರ್ಧರಿಸಿದ ಅಂಶಗಳನ್ನು ಹೊರತುಪಡಿಸಿ ಉಳಿದ ಅಕ್ರಮ ಒತ್ತುವರಿಯನ್ನು ತೆರವು ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.