ನಟ ದರ್ಶನ್ ಪ್ರಚಾರಕ್ಕೆ ಹೋದ್ರೆ ತಪ್ಪೇನಿಲ್ಲ: ಎಚ್.ಡಿ.ಕುಮಾರಸ್ವಾಮಿ

By Kannadaprabha NewsFirst Published Apr 19, 2024, 12:27 PM IST
Highlights

ಪ್ರಜಾಪ್ರಭುತ್ವದಲ್ಲಿ ಯಾರು ಯಾರ ಪರ ಬೇಕಾದರೂ ಪ್ರಚಾರ ಮಾಡಬಹುದು. ನಟ ದರ್ಶನ್ ಪ್ರಚಾರಕ್ಕೆ ಹೋಗುವುದರಲ್ಲಿ ತಪ್ಪೇನಿಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು. 

ಶಿವಮೊಗ್ಗ (ಏ.19): ಪ್ರಜಾಪ್ರಭುತ್ವದಲ್ಲಿ ಯಾರು ಯಾರ ಪರ ಬೇಕಾದರೂ ಪ್ರಚಾರ ಮಾಡಬಹುದು. ನಟ ದರ್ಶನ್ ಪ್ರಚಾರಕ್ಕೆ ಹೋಗುವುದರಲ್ಲಿ ತಪ್ಪೇನಿಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ದರ್ಶನ್ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ಹೋಗುವುದರಲ್ಲಿ ತಪ್ಪೇನಿಲ್ಲ. ಅವರ ಕರ್ತವ್ಯ ಅವರು ಮಾಡುತ್ತಿದ್ದಾರೆ. ಅದಕ್ಕೆ ಪ್ರತಿಕ್ರಿಯೆ ನೀಡುವಂಥದ್ದು ಏನೂ ಇಲ್ಲ ಎಂದರು. 

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಚಾರದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ದೇವೇಗೌಡರು ಹೇಳಿದ್ದು 30 ರಿಂದ 35 ವರ್ಷದ ಕಥೆ. ಅದಕ್ಕೆ ದಾಖಲೆ ಇದೆ ಎಂದು ದೇವೇಗೌಡ್ರು ಹೇಳಿದ್ದಾರೆ. ಬಿಜೆಪಿಯಲ್ಲಿ ಭಿನ್ನ ಮತದ ವಿಚಾರವನ್ನು ಬಿಜೆಪಿ ಹೈಕಮಾಂಡ್ ಬಗೆಹರಿಸುತ್ತಿದೆ. ರಾಹುಲ್ ಗಾಂಧಿ ಪಾಪ ಪ್ರಚಾರ ಮಾಡಿದ್ದಾರೆ. ಅಧ್ಯಕ್ಷರು ಯಾರು, ಮುಖ್ಯಮಂತ್ರಿ ಯಾರು ಎಂಬುದು ಅವರಿಗೇ ಗೊತ್ತಿಲ್ಲ. ಇನ್ಯಾವ ರೀತಿ ಪ್ರಚಾರ ಮಾಡಿದ್ದಾರೆಂದು ನೀವೇ ತಿಳಿದುಕೊಳ್ಳಿ ಎಂದು ಕುಟುಕಿದರು. ಜೆಡಿಎಸ್, ಬಿಜೆಪಿ ಒಗ್ಗಟ್ಟಾಗಿ ಹೊಂದಾಣಿಕೆಯಿಂದ ಕೆಲಸ ಮಾಡುತ್ತಿದ್ದೇವೆ. ರಾಜ್ಯದಲ್ಲಿ ಎಲ್ಲಾ 28 ಕ್ಷೇತ್ರಗಳಲ್ಲಿ ಮೈತ್ರಿಕೂಟ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಭವಿಷ್ಯ ನುಡಿದರು.

ಡಿ.ಕೆ.ಶಿವಕುಮಾರ್‌ ರಕ್ಷಿಸಲೆಂದೇ ತನಿಖೆ ಸಮ್ಮತಿ ವಾಪಸ್: ಸಿಬಿಐ

ಗ್ಯಾರಂಟಿ ಮಾತ್ರವೇ ಸಾಧನೆ: ಗ್ಯಾರಂಟಿ ಯೋಜನೆಗಳು ಬಿಟ್ಟರೆ ೧೦೦ ದಿನಗಳ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸರ್ಕಾರ ಜನರಿಗೆ ಯಾವುದೇ ಯೋಜನೆಗಳನ್ನು ತಂದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಕುಹಕವಾಡಿದರು. ಪಟ್ಟಣದ ಮಾಧ್ಯಮಿಕ ಶಾಲಾ ಆವರಣದಲ್ಲಿ ಬುಧವಾರ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಪರ ಪ್ರಚಾರ ಸಭೆಯಲ್ಲಿ ಮಾತನಾಡಿ, ‘ಗ್ಯಾರಂಟಿ ಯೋಜನೆಗಳಿಂದ ಜನ ಹಾಳಾಗುತ್ತಿದ್ದಾರೆ. ಗಂಡಸರು ಹೆಂಡಕ್ಕೆ ಹಾಕುವ ಹಣವನ್ನು ಸರ್ಕಾರ ಪುನಃ ಅವರ ಮನೆ ಹೆಣ್ಣುಮಕ್ಕಳಿಗೆ ನೀಡುತ್ತಿದೆ. 

ಆದರೆ ಇದು ನಮ್ಮೆಲ್ಲಾ ತಾಯಂದಿರಿಗೆ ಗೊತ್ತಾಗುತ್ತಿಲ್ಲ. ಯುವ ನಿಧಿ ಎಲ್ಲಾ ನಿರುದ್ಯೋಗ ವಿದ್ಯಾರ್ಥಿಗಳಿಗೆ ಯೋಜನೆ ಮಾಡಲಾಗಿದೆ ಎಂದು ಹೇಳಿ ೧ ವರ್ಷದ ಒಳಗಿನ ಪದವೀಧರ ವಿದ್ಯಾರ್ಥಿಗಳಿಗೆ ಎಂದು ಉಲ್ಟಾ ಹೊಡೆದ ಸರ್ಕಾರ ಇದಾಗಿದೆ. ರಾಜ್ಯದಲ್ಲಿ ಸುಮಾರು ೨.೫ ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇವೆ, ಇದನ್ನು ಭರ್ತಿ ಮಾಡಬೇಕು. ಸ್ವತಂತ್ರವಾಗಿ ಸರ್ಕಾರ ಮಾಡಲು ಸಾಧ್ಯವಾಗದು. ಆದ್ದರಿಂದ ಈ ಬಾರಿ ಮೋದಿಯವರನ್ನು ಬಲಪಡಿಸಲು ನಮ್ಮ ಪಕ್ಷ ಮೈತ್ರಿ ಮಾಡಿಕೊಂಡಿದೆ’ ಎಂದು ಹೇಳಿದರು.

ಮೋದಿ ಸರ್ಕಾರದಿಂದ ಕಾಂಗ್ರೆಸ್‌ಗೆ ಐಟಿ ದಾಳಿ ಬೆದರಿಕೆ: ಸಂಸದ ಡಿ.ಕೆ.ಸುರೇಶ್ ಆಕ್ರೋಶ

‘ನಾನು ರಾಜಕೀಯಕ್ಕೆ ಅಚಾನಕ್ಕಾಗಿ ಬಂದವನು, ದೇವೇಗೌಡರು ೪ ವರ್ಷ ಮಾತ್ರ ಅಧಿಕಾರದಲ್ಲಿ ಇದ್ದವರು. ದೇವೇಗೌಡರ ಉದ್ದೇಶ ಹಾಗೂ ಕನಸುಗಳನ್ನು ಈಡೇರಿಸುವುದು ನಮ್ಮ ಕರ್ತವ್ಯವಾಗಿದೆ. ಪ್ರಜ್ವಲ್ ರೇವಣ್ಣ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದು ಹುಡುಗ ಏನಾದರೂ ತಪ್ಪು ಮಾಡಿದ್ದರೆ ಕ್ಷಮಿಸಿ ಈ ಬಾರಿ ಮತ ನೀಡಬೇಕು. ತ್ರಿವಳಿ ತಲಾಕ್ ನಿಷೇಧ ಮಾಡಿ ಮುಸ್ಲಿಂ ಮಹಿಳೆಯರಿಗೆ ನ್ಯಾಯ ಕೊಡಿಸಿದ್ದು ಮೋದಿಯವರು. ಚುನಾವಣೆ ಮುಗಿದ ನಂತರ ಹೆಚ್ಚುವರಿಯಾಗಿ ಎರಡು ಲಕ್ಷ ಮೆಟ್ರಿಕ್ ಟನ್ ಕೊಬ್ಬರಿಯನ್ನು ಪುನಹ ಖರೀದಿ ಪ್ರಾರಂಭಿಸಿ ಕ್ವಿಂಟಾಲಿಗೆ ೧೫ ಸಾವಿರ ರು. ಬೆಂಬಲ ಬೆಲೆ ನಿಗದಿ ಮಾಡಿಸುತ್ತೇವೆ’ ಎಂದು ಭರವಸೆ ನೀಡಿದರು.

click me!