
ಬೆಂಗಳೂರು (ನ.24): ‘ಈ ಉಪ ಚುನಾವಣೆ ಫಲಿತಾಂಶ ನನ್ನ ಪಾಲಿಗೆ ಮಹತ್ವದ್ದಾಗಿತ್ತು. ದ್ವೇಷ ಸಾಧನೆಗಾಗಿ ಸುಳ್ಳು ಪ್ರಕರಣ, ಅಪಪ್ರಚಾರದಿಂದ ನನ್ನ ಹಾಗೂ ನನ್ನ ಕುಟುಂಬವನ್ನು ಕಟ್ಟಿಹಾಕಲು ರಾಜಭವನದಿಂದ ಕೇಂದ್ರ ತನಿಖಾ ಸಂಸ್ಥೆಗಳವರೆಗೆ ಎಲ್ಲವನ್ನೂ ದುರ್ಬಳಕೆ ಮಾಡಿಕೊಂಡ ಬಿಜೆಪಿ, ಜೆಡಿಎಸ್‌ನವರಿಗೆ ಮತದಾರರು ಫಲಿತಾಂಶದ ಮೂಲಕ ತಕ್ಕ ಉತ್ತರ ನೀಡಿದ್ದಾರೆ.’ ಹೀಗಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪ ಚುನಾವಣೆ ಫಲಿತಾಂಶವನ್ನು ವ್ಯಾಖ್ಯಾನಿಸಿದ್ದಾರೆ.
ನಾನು 2ನೇ ಬಾರಿಗೆ ಸಿಎಂ ಆದ ಬಳಿಕ ಬಿಜೆಪಿ, ಜೆಡಿಎಸ್‌ನವರು ನನ್ನ ಹಾಗೂ ನನ್ನ ಪತ್ನಿಯನ್ನು ಸುಳ್ಳುಗಳಿಂದ ಹಣಿಯಲು ಯತ್ನಿಸಿದರು. ನಾಲ್ಕು ದಶಕಗಳಿಂದ ನನ್ನ ರಾಜಕೀಯ ಜೀವನ ನೋಡಿರುವ ಜನರು ಬಿಜೆಪಿಯ ಸುಳ್ಳುಗಳ ವಿರುದ್ಧ ಸತ್ಯವನ್ನು ಗೆಲ್ಲಿಸಿದ್ದಾರೆ ಎಂದರು. ಉಪ ಚುನಾವಣೆ ವೇಳೆ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಲ್ಲ ನ್ಯಾಯಾಲಯಗಳಿಗಿಂತ ಶ್ರೇಷ್ಠ ನ್ಯಾಯಾಲಯ ಜನತಾ ನ್ಯಾಯಾಲಯ ಎಂದು ಮಹಾತ್ಮ ಗಾಂಧೀಜಿ ಹೇಳಿದ್ದಾರೆ. ಜನತಾ ನ್ಯಾಯಾಲಯದಲ್ಲಿ ನಮ್ಮ ಪರ ತೀರ್ಪು ಬಂದಿದೆ.
ಜನವರಿಯೊಳಗೆ ಕಾಂಗ್ರೆಸ್ ಸರ್ಕಾರ ಪತನ: ಎಚ್.ಡಿ.ದೇವೇಗೌಡ
ಈ ತೀರ್ಪಿನಿಂದ ನಮ್ಮ ಸರ್ಕಾರಕ್ಕೆ ಬಲ ಬಂದಿದೆ ಎಂದರು. ನಿಮ್ಮ ಗೆಲುವಿಗೆ ಹಣದ ಹೊಳೆ ಕಾರಣ ಎಂದು ಬಿಜೆಪಿಯವರು ಹೇಳಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ, ‘ಹಾಗಾದರೆ ಮಹಾರಾಷ್ಟ್ರದಲ್ಲಿ ಬಿಜೆಪಿಯು 149 ಸ್ಥಾನಗಳಲ್ಲಿ 125 ಸ್ಥಾನ ಗೆದ್ದಿದೆ. 24ರಲ್ಲಿ ಮಾತ್ರ ಸೋತಿದೆ. ಅದನ್ನು ಏನೆಂದು ಹೇಳುತ್ತೀರಿ. ಹಣದ ಹೊಳೆ ಎಂದರೆ ಚುನಾವಣಾ ಆಯೋಗ ಸರಿ ಇಲ್ಲ ಎಂಬುದು ಬೊಮ್ಮಾಯಿ ಮಾತಿನ ಅರ್ಥವೇ’ ಎಂದು ಪ್ರಶ್ನಿಸಿದರು.
ನಾನು ಯಾವತ್ತೂ ಸೊಕ್ಕು ತೋರಿಸಿಲ್ಲ: ಸಿದ್ದರಾಮಯ್ಯ ಸೊಕ್ಕು ಮುರಿತೀನಿ ಎಂದಿದ್ದ ದೇವೇಗೌಡರ ಮಾತು ಬೇಸರ ತರಿಸಿತ್ತು. ನಾನು ಮಂತ್ರಿ ಆಗಿ 40 ವರ್ಷ ಆಗಿದೆ. ನಾನು ಯಾವತ್ತೂ ಸೊಕ್ಕು, ಅಹಂಕಾರ ಮಾಡಿಲ್ಲ. ಈ ಮಾತುಗಳಿಗೆ ಜನರೇ ಉತ್ತರ ನೀಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.
2 ಬಾರಿ ರಾಜಕೀಯ ಕುತಂತ್ರದಿಂದ ಸೋಲು ಅನುಭವಿಸಿದೆ: ನಿಖಿಲ್ ಕುಮಾರಸ್ವಾಮಿ
ಚುನಾವಣೆ ವೇಳೆ ದೇವೇಗೌಡ, ಅವರ ಮಗ (ಕುಮಾರಸ್ವಾಮಿ), ಮೊಮ್ಮಗ (ನಿಖಿಲ್) ಎಲ್ಲರೂ ಅಳೋದೇ ಮಾಡಿದ್ದಾರೆ. ಹೃದಯ, ಭಾವನೆಗಳು ಇರುವವರಿಗೆ ಅಳು ಬರುತ್ತದೆ ಎನ್ನುತ್ತಾರೆ. ಇವರ ಮೊಮ್ಮಗ ಪ್ರಜ್ವಲ್ ಕಾರಣಕ್ಕೆ ಹಾಸನದಲ್ಲಿ ಹೆಣ್ಣುಮಕ್ಕಳು ಕಣ್ಣೀರು ಹಾಕಿದ್ರಲ್ಲ. ಆಗ ಹೃದಯ ಕರಗಲಿಲ್ಲವೇ?
- ಸಿದ್ದರಾಮಯ್ಯ, ಮುಖ್ಯಮಂತ್ರಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.