
ನವದೆಹಲಿ (ಸೆ.16): ಬಿಜೆಪಿಯಲ್ಲಿ ಟಿಕೆಟ್ ಸೇಲ್‌ಗಿಲ್ಲ, ಹಣ ಕೊಟ್ಟು ಟಿಕೆಟ್ ಖರೀದಿ ನಮ್ಮ ಪಕ್ಷದಲ್ಲಿ ಸಾಧ್ಯವಿಲ್ಲ ಎಂದು ಮಾಜಿ ಶಾಸಕ ಸಿ.ಟಿ.ರವಿ ಹೇಳಿದರು. ವಾಗ್ಮಿ ಚೈತ್ರಾ ಕುಂದಾಪುರ ಅವರು ಟಿಕೆಟ್ ಕೊಡಿಸುವುದಾಗಿ ಹೇಳಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಶುಕ್ರವಾರ ಪ್ರತಿಕ್ರಿಯಿಸಿದ ಅವರು, ಈ ವಂಚನೆ ಪ್ರಕರಣದಲ್ಲಿ ಸಂದರ್ಭದ ದುರ್ಬಳಕೆಯಾಗಿದೆ. ಮೋಸ ಹೋಗುವವರು ಇರುವವರೆಗೆ ಮೋಸ ಮಾಡುವವರು ಇರುತ್ತಾರೆ. ಬಿಜೆಪಿಯಲ್ಲಿ ಟಿಕೆಟ್ ಸೇಲ್ ಗಿಲ್ಲ ಅನ್ನುವುದಕ್ಕೆ ಈ ಘಟನೆಯೇ ಸಾಕ್ಷಿ.
ಹಣದ ಮೂಲಕ ಟಿಕೆಟ್ ಪಡೆಯುವ ಪ್ರಯತ್ನವನ್ನು ಮುಂದೆ ಯಾರೂ ಮಾಡಬಾರದು. ಮೋಸ ಮಾಡಲೆಂದೇ ದೊಡ್ಡವರ ಹೆಸರು ಬಳಕೆ ಮಾಡಲಾಗುತ್ತಿದೆ ಎಂದರು. ಬಿಜೆಪಿ ದೊಡ್ಡ ಪಕ್ಷ. ಎಲ್ಲ ರೀತಿಯ ಜನರೂ ಇರುತ್ತಾರೆ. ಸಿದ್ಧಾಂತ, ಸೇವೆ, ಜನಪ್ರತಿನಿಧಿಯಾಗಲು ನಮ್ಮಲ್ಲಿ ಬರುತ್ತಾರೆ. ಕೆಲವರು ಸಮಯದ ದುರ್ಬಳಕೆ ಮಾಡಿಕೊಳ್ಳಲು ಪಕ್ಷಕ್ಕೆ ಬರುತ್ತಾರೆ. ನಮ್ಮದು ಚಪ್ಪಲಿ ಹಾಕದವರಿಗೆ ಟಿಕೆಟ್ ನೀಡಿದ ಪಕ್ಷ. ಟಿಕೆಟ್ ಇದಕ್ಕೂ ಮುನ್ನ ನಮ್ಮಲ್ಲಿ ಟಿಕೆಟ್ ವಂಚನೆಯ ವಿಚಾರ ನಮ್ಮ ಗಮನಕ್ಕೆ ಬಂದಿಲ್ಲ. ಈ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿಲ್ಲ, ಚಿಕ್ಕಮಗಳೂರು ಮೂಲಕ ನಡೆದಿದೆ ಎಂದರು.
ವಿಜಯೇಂದ್ರರಿಗೆ ಅಧ್ಯಕ್ಷ ಸ್ಥಾನ ಬಗ್ಗೆ ನಾಯಕರು ತಿರ್ಮಾನಿಸುತ್ತಾರೆ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದು ನಾಲ್ಕು ತಿಂಗಳಾಗಿದೆ. ಅಷ್ಟರಲ್ಲಿ ಅಸಮಾಧಾನ ಹೊಮ್ಮಿದೆ. ಜನರು, ರೈತರು ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರ ಪಕ್ಷ ನಾಯಕರು ಆಡಿದ ಮಾತು ಅಸಮಾಧಾನಕ್ಕೆ ಸಾಕ್ಷಿಯಾಗಿದೆ. ನಮಗೆ ಈ ಸರ್ಕಾರದ ಬಗ್ಗೆ ಭಯವಿಲ್ಲ. ಜನರೇ ಈ ಬಗ್ಗೆ ಶಾಪ ಹಾಕುತ್ತಿದ್ದಾರೆ, ರೈತರೂ ಶಾಪ ಹಾಕುತ್ತಿದ್ದಾರೆ ಎಂದರು.
ಬಿಜೆಪಿಯವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ: ಸಚಿವ ಭೈರತಿ ಸುರೇಶ್ ಹೀಗೆ ಹೇಳಿದ್ಯಾಕೆ?
ವಿಜಯೇಂದ್ರ ಅವರಿಗೆ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಕಾರ್ಯಕರ್ತರು ಚರ್ಚೆ ಮಾಡುತ್ತಿದ್ದಾರೆ. ಆದರೆ, ನಾಯಕರು ಈ ಬಗ್ಗೆ ತೀರ್ಮಾನಿಸುತ್ತಾರೆ. ಈ ವಿಚಾರವಾಗಿ ಹೆಚ್ಚು ಮಾತನಾಡುವುದಿಲ್ಲ ಎಂದರು. ಮಾಜಿ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಇಂದಿರಾ ಗಾಂಧಿ ಅವರ ಕುಟುಂಬಕ್ಕೆ ಆಪ್ತರಾಗಿದ್ದ ಹರಿಪ್ರಸಾದ್ ಅವರ ಒಳಕುದಿಯು ಹೊರಕ್ಕೆಬಂದಿದೆ. ಕಾಂಗ್ರೆಸ್ನಲ್ಲಿನ ಬೆಳವಣಿಗೆಗಳನ್ನು ಸಾಕ್ಷೀಕರಿಸುತ್ತಿದೆ. ರಾಹುಲ್ ಗಾಂಧಿ ಅವರು ವಿದೇಶದಲ್ಲಿದ್ದುಕೊಂಡು ರಾಷ್ಟ್ರದ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.