ಮೈಸೂರು ಜಿಲ್ಲೆಯಲ್ಲಿ ಅಪ್ಪ- ಮಗ ಒಟ್ಟಿಗೆ ವಿಧಾನಸಭೆ ಪ್ರವೇಶ ಇದೇ ಪ್ರಥಮ

By Kannadaprabha News  |  First Published May 14, 2023, 9:34 AM IST

ಅವಿಭಜಿತ ಮೈಸೂರು ಜಿಲ್ಲೆಯಲ್ಲಿ ಅಪ್ಪ- ಮಗ ಒಟ್ಟಿಗೆ ವಿಧಾನಸಭೆಗೆ ಪ್ರವೇಶಿಸುತ್ತಿರುವುದು ಇದೇ ಪ್ರಥಮ. ಚಾಮುಂಡೇಶ್ವರಿ ಕ್ಷೇತ್ರದಿಂದ ಜೆಡಿಎಸ್‌ ಟಿಕೆಟ್‌ ಮೇಲೆ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಜಿ.ಟಿ.ದೇವೇಗೌಡರು ಹ್ಯಾಟ್ರಿಕ್‌ ಗೆಲುವಿನನೊಂದಿಗೆ ಐದನೇ ಬಾರಿ ವಿಧಾನಸಭೆ ಪ್ರವೇಶಿಸಿದ್ದಾರೆ. 


ಅಂಶಿ ಪ್ರಸನ್ನಕುಮಾರ್‌

ಮೈಸೂರು (ಮೇ.14): ಅವಿಭಜಿತ ಮೈಸೂರು ಜಿಲ್ಲೆಯಲ್ಲಿ ಅಪ್ಪ- ಮಗ ಒಟ್ಟಿಗೆ ವಿಧಾನಸಭೆಗೆ ಪ್ರವೇಶಿಸುತ್ತಿರುವುದು ಇದೇ ಪ್ರಥಮ. ಚಾಮುಂಡೇಶ್ವರಿ ಕ್ಷೇತ್ರದಿಂದ ಜೆಡಿಎಸ್‌ ಟಿಕೆಟ್‌ ಮೇಲೆ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಜಿ.ಟಿ.ದೇವೇಗೌಡರು ಹ್ಯಾಟ್ರಿಕ್‌ ಗೆಲುವಿನನೊಂದಿಗೆ ಐದನೇ ಬಾರಿ ವಿಧಾನಸಭೆ ಪ್ರವೇಶಿಸಿದ್ದಾರೆ. ಅವರ ಪುತ್ರ ಜಿ.ಡಿ. ಹರೀಶ್‌ಗೌಡ ಹುಣಸೂರಿನಿಂದ ಜೆಡಿಎಸ್‌ ಟಿಕೆಟ್‌ ಮೇಲೆ ಪ್ರಥಮ ಬಾರಿಗೆ ಆಯ್ಕಯಾಗಿದ್ದಾರೆ. ಅಪ್ಪ- ಮಗ ಒಟ್ಟಿಗೆ ಚುನಾವಣೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ ಮೇಲೆ ಸ್ಪರ್ಧಿಸಿದ ಮೊದಲ ಪ್ರಕರಣ 2018 ರಲ್ಲಿ ನಡೆದಿತ್ತು.

Latest Videos

undefined

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2008, 2013 ರಲ್ಲಿ ಪ್ರತಿನಿಧಿಸಿದ್ದ ವರುಣ ಕ್ಷೇತ್ರವನ್ನು ಪುತ್ರ ಡಾ.ಯತೀಂದ್ರಗೆ ಬಿಟ್ಟುಕೊಟ್ಟಿದ್ದರು. ಅವರು ಈ ಹಿಂದೆ ಐದು ಬಾರಿ ಗೆದ್ದು, ಎರಡು ಬಾರಿ ಸೋತಿದ್ದ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸ್ಥಳಾಂತರಗೊಂಡಿದ್ದರು. ದೂರದ ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಿಂದಲೂ ಸ್ಪರ್ಧಿಸಿದ್ದರು. ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ ಮೂರನೇ ಬಾರಿ ಸೋತು, ಬಾದಾಮಿಯಲ್ಲಿ ಗೆದ್ದರು. ಯತೀಂದ್ರ ವರುಣದಿಂದ ಆಯ್ಕೆಯಾದರು. ಆ ಮೂಲಕ ಮೈಸೂರು ಮೂಲದ ತಂದೆ- ಮಗ ಒಟ್ಟಿಗೆ ವಿಧಾನಸಭೆ ಪ್ರವೇಶಿಸಿದರು.

Chikkaballapur Constituency: ಅಭಿವೃದ್ಧಿಯ ಹರಿಕಾರ ಡಾ.ಸುಧಾಕರ್‌ ಸೋಲಿಗೆ ಕಾರಣವೇನು?

ಈ ಬಾರಿ ಮಾಜಿ ಸಚಿವ, ಹಾಲಿ ಶಾಸಕ ಜಿ.ಟಿ. ದೇವೇಗೌಡರು ಚಾಮುಂಡೇಶ್ವರಿ, ಅವರ ಪುತ್ರ, ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಹಾಗೂ ರಾಜ್ಯ ಅಪೆಕ್ಸ್‌ ಬ್ಯಾಂಕ್‌ ಉಪಾಧ್ಯಕ್ಷ ಜಿ.ಡಿ. ಹರೀಶ್‌ಗೌಡ ಹುಣಸೂರಿನಿಂದ ಜೆಡಿಎಸ್‌ ಟಿಕೆಟ್‌ ಮೇಲೆ ಸ್ಪರ್ಧಿಸಿದ್ದರು. ಜಿ,ಟಿ. ದೇವೇಗೌಡರು ಹುಣಸೂರಿನಿಂದ 1998ರ ಉಪ ಚುನಾವಣೆ, 2004ರ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದು, 1999 ಹಾಗೂ 2008ರ ಚುನಾವಣೆಯಲ್ಲಿ ಸೋತವರು. ಚಾಮುಂಡೇಶ್ವರಿಯಿಂದ 2013, 2018 ರಲ್ಲಿ ಗೆದ್ದವರು. 2006 ರಲ್ಲಿ ಜೆಡಿಎಸ್‌- ಬಿಜೆಪಿ, 2018 ರಲ್ಲಿ ಜೆಡಿಎಸ್‌- ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದಲ್ಲಿ ಮಂತ್ರಿಯಾಗಿ ಜಿಲ್ಲಾ ಉಸ್ತುವಾರಿಯನ್ನು ನಿರ್ವಹಿಸಿದರು.

ಸವದಿ-ಹೆಬ್ಬಾಳ್ಕರ್-ಸತೀಶ್‌ ಕಾಂಬಿನೇಷನ್: ಬೆಳಗಾವಿ ಕೇಸರಿ ಕೋಟೆ ಛಿದ್ರ

ಹರೀಶ್‌ಗೌಡ ಕಳೆದ ಬಾರಿ ಹುಣಸೂರಿನಿಂದ ಸ್ಪರ್ಧಿಸಬೇಕಿತ್ತು. ಅವರೇ ಅಭ್ಯರ್ಥಿ ಎಂದು ಘೋಷಣೆಯೂ ಆಗಿತ್ತು. ಆದರೆ ಕೊನೆ ಕ್ಷಣದಲ್ಲಿ ಕೆ.ಆರ್‌. ನಗರದಿಂದ ಹಾಗೂ ಕಾಂಗ್ರೆಸ್‌ ಪಕ್ಷದಿಂದ ವಲಸೆ ಬಂದ ಎಚ್‌. ವಿಶ್ವನಾಥ್‌ ಅವರಿಗೆ ಅವಕಾಶ ಕಲ್ಪಿಸಲಾಗಿತ್ತು. ಇದಲ್ಲದೇ 2019ರ ಉಪ ಚುನಾವಣೆಯಲ್ಲಿಯೂ ಸ್ಪರ್ಧಿಸುವ ಅವಕಾಶ ಇತ್ತಾದರೂ ಸಮ್ಮಿಶ್ರ ಸರ್ಕಾರದ ಪತನಾನಂತರ ಜಿ.ಟಿ. ದೇವೇಗೌಡರು ಜೆಡಿಎಸ್‌ನಿಂದ ದೂರ ಇದ್ದಿದ್ದರಿಂದ ಸಾಧ್ಯವಾಗಿರಲಿಲ್ಲ. ಇಬ್ಬರು ಗೆದ್ದು ಅವಿಭಜಿತ ಜಿಲ್ಲೆಯಿಂದ ಅಪ್ಪ- ಮಗ ಇಬ್ಬರು ಒಟ್ಟಿಗೆ ವಿಧಾನಸಭೆ ಪ್ರವೇಶಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

click me!