
ಚಿಕ್ಕಬಳ್ಳಾಪುರ (ಏ.24): ಕಾಶ್ಮೀರದ ಪೆಹಲ್ಗಾವ್‌ನಲ್ಲಿನ ಉಗ್ರರ ದಾಳಿ ಘಟನೆ ಬಹಳ ದುರಾದೃಷ್ಟಕರ ಹಾಗೂ ಖೇದಕರ. ನನಗೆ ನಂಬಿಕೆಯಿದೆ ನಮ್ಮ ಕೇಂದ್ರ ಸರ್ಕಾರ ಇಂತಹ ಉಗ್ರಗಾಮಿಗಳಿಗೆ ಸರಿಯಾದ ಶಾಸ್ತಿಯನ್ನು ಶೀಘ್ರದಲ್ಲಿ ಮಾಡುತ್ತದೆ. ಪಾಕ್ ಆಕ್ರಮಿತ ಕಾಶ್ಮೀರ ವಶಪಡಿಸಿಕೊಳ್ಳಲು ಇದು ಸೂಕ್ತ ಕಾಲ ಎಂದು ಸಂಸದ ಡಾ.ಕೆ.ಸುಧಾಕರ್ ಹೇಳಿದರು. ನಗರದ ಸಂಸದರ ಗೃಹ ಕಚೇರಿಯಲ್ಲಿ 27ರಂದು ನಡೆಯುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಹಮ್ಮಿಕೊಂಡಿರುವ ಜನಾಕ್ರೋಶ ಯಾತ್ರೆಯ ಪೂರ್ವಭಾವಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಅಮಾಯಕ ಪ್ರವಾಸಿಗರ, ನವದಂಪತಿಗಳ ಪ್ರಾಣವನ್ನು ಅದರಲ್ಲೂ ಧರ್ಮವನ್ನು ಕೇಳಿ ಗುಂಡು ಹಾರಿಸಿ ಹತ್ಯೆ ಮಾಡಿರುವುದು ನೋಡಿದರೆ ಅವರು ಮೃಗಗಳಿಗಿಂತ ಹೀನಾಯ ಎಂದು ಕಿಡಿಕಾರಿದರು.
ಜಮ್ಮು ಕಾಶ್ಮೀರದಲ್ಲಿ ಮೋದಿ ಮತ್ತು ಅಮಿತ್ ಶಾ ಅವರು ಕೈಗೊಂಡ ಕ್ರಮಗಳಿಂದ ಶಾಂತಿ ನೆಲೆಸಿತ್ತು. ಹೀಗಾಗಿ ಹೆಚ್ಚಿನ ಜನ ಪ್ರವಾಸಿಗರು ಜಮ್ಮು ಕಾಶ್ಮೀರಕ್ಕೆ ಹೋಗಲು ಆರಂಭ ಮಾಡಿದ್ದರು. ಆದರೆ ಪಾಕಿಸ್ತಾನ ಪ್ರೋತ್ಸಾಹಿತ ಉಗ್ರಗಾಮಿಗಳು ದಾಳಿ ಮಾಡಿದ್ದಾರೆ. ಆ ಮೂಲಕ ಭಯದ ವಾತಾವರಣ ನಿರ್ಮಾಣ ಮಾಡ್ತಿದ್ದಾರೆ. ದೇಶದ ಜನತಗೆ ಕಾಶ್ಮೀರದಲ್ಲಿ ಶಾಂತಿ ನೆಲೆಸಬೇಕು ಅನ್ನೋ ಇಚ್ಚೆ ಹೊಂದಿದ್ದಾರೆ. ಮೃತ ಕುಟುಂಬದ ಜೊತೆಗೆ ದೇಶ, ಭಾರತ ಸರ್ಕಾರವಿದೆ. ಭಾರತ ದೇಶ ಜಗತ್ತಿನಲ್ಲಿ ಪ್ರಬಲವಾಗಿ ಬೆಳೆಯುತ್ತಿದೆ. ಅದನ್ನು ಸಹಿಸಲು ಪಾಕಿಸ್ತಾನಕ್ಕೆ ಆಗ್ತಿಲ್ಲ. ಪಾಕಿಸ್ತಾನದ ಅವನತಿ ಆರಂಭವಾಗಿದೆ.
ಹಿಂದೂಗಳನ್ನೇ ಟಾರ್ಗೆಟ್ ಮಾಡಿ ದಾಳಿ ಮಾಡಿದ್ದಾರೆ. ಮೋದಿ ಬಲಾಢ್ಯ ರಾಷ್ಟ್ರ ಕಟ್ಟುತ್ತಿದ್ದಾರೆ. ಮೋದಿ ಅವರು ಆದಷ್ಟು ಬೇಗ ಇದಕ್ಕೆ ತಕ್ಕ ಉತ್ತರ ಕೊಡ್ತಾರೆ ಎಂದರು. ಈ ರಾಜ್ಯದ ಭ್ರಷ್ಟ, ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದು, ಏ. 27ರಂದು ಚಿಕ್ಕಬಳ್ಳಾಪುರದಲ್ಲಿ ಒಕ್ಕಲಿಗರ ಕಲ್ಯಾಣ ಮಂಟಪದ ಬಳಿ ಕೆಂಪೇಗೌಡರ ವಿಗ್ರಹಕ್ಕೆ ಮಾಲಾರ್ಪಣೆ ಮಾಡಿ, ಅಲ್ಲಿಂದ ಬೃಹತ್ ರ್ಯಾಲಿಯಲ್ಲಿ ಬಿ,ಬಿ.ರಸ್ತೆಯ ಮೂಲಕ ಅಂಬೇಡ್ಕರ್ ವೃತ್ತದ ವರೆಗೆ ತೆರಳಿ, ಅಲ್ಲಿ ವೇದಿಕೆ ಕಾರ್ಯಕ್ರಮದ ಮೂಲಕ ಜನತೆಗೆ ಕಾಂಗ್ರೆಸ್ಲ್ಲಿ ಸರ್ಕಾರದ ವೈಫಲ್ಯಗಳ ಕುರಿತು ತಿಳಿಸಲಾಗುವುದು ಎಂದರು.
ಸರಣಿ ವರದಿಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ: ಸಚಿವ ಈಶ್ವರ ಖಂಡ್ರೆ
ಈ ವೇಳೆ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಕೋನಪ್ಪರೆಡ್ಡಿ, ಜಿ.ಪಂ. ಮಾಜಿ ಅಧ್ಯಕ್ಷ ಪಿ.ಎನ್.ಕೇಶವರೆಡ್ಡಿ, ಖಾದಿ ಮಂಡಳಿ ಮಾಜಿ ಅಧ್ಯಕ್ಷ ಕೆ.ವಿ.ನಾಗರಾಜ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಮುರಳಿಧರ್, ಮುಖಂಡರಾದ ಸೀಕಲ್ ರಾಮಚಂದ್ರಗೌಡ, ಕೆ.ವಿ.ನವೀನ್ ಕಿರಣ್, ಮರಳಕುಂಟೆ ಕೃಷ್ಣಮೂರ್ತಿ, ಹರಿನಾಥರೆಡ್ಡಿ, ಚಂಗ್ರಶೇಖರ್, ಚಿ. ರಾಮಲಿಂಗಪ್ಪ, ಮಾರ್ಕೆಟ್ ಮೋಹನ್, ನಾರಾಯಣಸ್ವಾಮಿ, ಲಿಂಗಾರೆಡ್ಡಿ, ಆವುಲಕೊಂಡರಾಯಪ್ಪ, ಲೀಲಾವತಿ ಶ್ರೀನಿವಾಸ್, ರಾಜಶೇಖರ್, ಮತ್ತಿತರರು ಇದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.