ಈ ಬಾರಿ ಕಾಂಗ್ರೆಸ್‌ ಸರ್ಕಾರ ರಚನೆಯಾಗುವುದು ಖಚಿತ: ಯತೀಂದ್ರ ಸಿದ್ದರಾಮಯ್ಯ

By Kannadaprabha NewsFirst Published Feb 6, 2023, 10:02 PM IST
Highlights

ಈ ಬಾರಿ ಕಾಂಗ್ರೆಸ್‌ ಸರ್ಕಾರ ರಚನೆಯಾಗುವುದು ಖಚಿತ ಎಂದು ವರುಣ ಕ್ಷೇತ್ರದ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು. ತಾಲೂಕಿನ ಆಲತ್ತೂರು, ತಾಯೂರು, ಕಾಹಳ್ಳಿ, ನಗರ್ಲೆ, ಮಡಹಳ್ಳಿ, ಆಲಂಬೂರು ಗ್ರಾಮಗಳಲ್ಲಿ 1.51 ಕೋಟಿ ರು. ವೆಚ್ಚದ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. 

ನಂಜನಗೂಡು (ಫೆ.06): ಈ ಬಾರಿ ಕಾಂಗ್ರೆಸ್‌ ಸರ್ಕಾರ ರಚನೆಯಾಗುವುದು ಖಚಿತ ಎಂದು ವರುಣ ಕ್ಷೇತ್ರದ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು. ತಾಲೂಕಿನ ಆಲತ್ತೂರು, ತಾಯೂರು, ಕಾಹಳ್ಳಿ, ನಗರ್ಲೆ, ಮಡಹಳ್ಳಿ, ಆಲಂಬೂರು ಗ್ರಾಮಗಳಲ್ಲಿ 1.51 ಕೋಟಿ ರು. ವೆಚ್ಚದ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. 

ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಎಸ್ಸಿ, ಎಸ್ಟಿ, ಹಿಂದುಳಿದ ವರ್ಗಗಳಿಗೆ, ರೈತರಿಗೆ, ಮಹಿಳೆಯರಿಗೆ ಅನುಕೂಲವಾಗುವಂತಹ ಕಾರ್ಯಕ್ರಮಗಳನ್ನು ರೂಪಿಸಿ ಎಲ್ಲ ವರ್ಗದವರಿಗೂ ಸಾಮಾಜಿಕ ನ್ಯಾಯ ಒದಗಿಸಲಾಗಿತ್ತು. ಆದರೆ ಈಗಿನ ಬಿಜೆಪಿ ಕಳೆದ 4 ವರ್ಷಗಳಿಂದ ರಾಜ್ಯದಲ್ಲಿ ಒಂದು ಆಶ್ರಯ ಮನೆಯನ್ನೂ ನೀಡಿಲ್ಲ, ಬಡವರಿಗೆ ಅನುಕೂಲವಾಗುವಂತಹ ಯಾವುದೇ ಕಾರ್ಯಕ್ರಮ ರೂಪಿಸುವಲ್ಲಿ ವಿಫಲರಾಗಿದ್ದಾರೆ ಎಂದು ದೂರಿದರು.

ಮೋದಿ ಆಡಳಿತದಲ್ಲಿ ಮನೆಮನೆಗೂ ಸವಲತ್ತು: ಕೇಂದ್ರ ಸಚಿವ ನಾರಾಯಣಸ್ವಾಮಿ

ವರುಣ ಕ್ಷೇತ್ರದಲ್ಲೇ ನನ್ನ ಸ್ಪರ್ಧೆ: ಸಿದ್ದರಾಮಯ್ಯ ಅವರು ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವ ಕಾರಣ ವರುಣ ಕ್ಷೇತ್ರದಲ್ಲಿ ನನಗೆ ಟಿಕೆಟ್‌ ನೀಡುವುದು ಖಚಿತವಾಗಿದೆ. ಆದ್ದರಿಂದಲೇ ನಾನು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ, ಎಂದಿನಂತೆ ನನಗೆ ಮತ್ತೊಮ್ಮೆ ಆಶೀರ್ವಾದ ಮಾಡಿ ಎಂದು ಮನವಿ ಮಾಡಿದರು. ನಂಜನಗೂಡು ತಾಲೂಕಿನ ಆಲತ್ತೂರು ಗ್ರಾಮದಲ್ಲಿ 30 ಲಕ್ಷ ರು. ವೆಚ್ಚದಲ್ಲಿ ರಸ್ತೆ ಕಾಮಗಾರಿ, ತಾಯೂರು ಗ್ರಾಮದಲ್ಲಿ 28 ಲಕ್ಷ ವೆಚ್ಚದಲ್ಲಿ ಸೇತುವೆ ಕಾಮಗಾರಿ, ಕಾಹಳ್ಳಿ ಗ್ರಾಮದಲ್ಲಿ 10 ಲಕ್ಷ ವೆಚ್ಚದಲ್ಲಿ ರಸ್ತೆ ಕಾಮಗಾರಿ.

ಮಡಹಳ್ಳಿ ಗ್ರಾಮದಲ್ಲಿ 52 ಲಕ್ಷ ವೆಚ್ಚದಲ್ಲಿ ನಾಲಾ ರಸ್ತೆ ಅಭಿವೃದ್ದಿ, ನಗರ್ಲೆ ಗ್ರಾಮದಲ್ಲಿ 15 ಲಕ್ಷ ರು. ವೆಚ್ಚದಲ್ಲಿ ರಸ್ತೆ ನಿರ್ಮಾಣ ಕಾಮಗಾರಿ, ಆಬಂಬೂರು ಮಂಟಿ ಗ್ರಾಮದಲ್ಲಿ ಕನಕಭವನ, ಆಲಂಬೂರು ಗ್ರಾಮದಲ್ಲಿ ಉಪ್ಪಾರ ಭವನ ನಿರ್ಮಾಣ ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸಲಾಗಿದ್ದು, ಶೀಘ್ರದಲ್ಲೇ ಕಾಮಗಾರಿ ಮುಕ್ತಾಯಗೊಂಡು ಜನರಿಗೆ ಅನುಕೂಲವಾಗಲಿದೆ ಎಂದರು. ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಎಸ್‌.ಸಿ. ಬಸವರಾಜು, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಹಾಡ್ಯ ರಂಗಸ್ವಾಮಿ, ನಂಜುಂಡಸ್ವಾಮಿ, ತಾಯೂರು ಗ್ರಾಪಂ ಅಧ್ಯಕ್ಷ ಬಸವರಾಜು, ಬಿ. ಮರಯ್ಯ ಇದ್ದರು.

ಶ್ರೀನಿವಾಸಗೌಡರರಿಗೆ ಕೃತಜ್ಞತೆ ಸಲ್ಲಿಸಿದ ಯತೀಂದ್ರ: ಶಾಸಕ ಶ್ರೀನಿವಾಸಗೌಡರು ತಮ್ಮ ಕ್ಷೇತ್ರದವನ್ನು ಬಿಟ್ಟು ಕೊಟ್ಟಿದ್ದಾರೆ, ಅದು ಅವರ ದೊಡ್ಡತನ. ನಾನು ವೈಯುಕ್ತಿಕ ವಾಗಿ ಹಾಗೂ ನಮ್ಮ ಕುಟುಂಬದ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಎಂದು ಸಿದ್ದರಾಮಯ್ಯ ಪುತ್ರ ಹಾಗೂ ಶಾಸಕ ಡಾ.ಯತೀಂದ್ರ ತಿಳಿಸಿದರು. ಕೋಲಾರಕ್ಕೆ ಭೇಟಿ ನೀಡಿ ಡಾ.ಯತೀಂದ್ರ ಶಾಸಕ ಶ್ರೀನಿವಾಸಗೌಡರ ಮನೆಗೆ ಊಟಕ್ಕೆ ತೆರಳಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಬಿಜೆಪಿಯದು ಮಂಚದ ಸರ್ಕಾರ, ಸಿಎಂ ಬೊಮ್ಮಾಯಿ ರಾಜೀನಾಮೆ ನೀಡಬೇಕು: ಸಿ.ಎಂ.ಇಬ್ರಾಹಿಂ

ಕೋಲಾರದಲ್ಲಿ ಅಭಿವೃದ್ಧಿ ಕೆಲಸಗಳು ಕುಠಿತವಾಗಿವೆ, ನಮ್ಮ ಸರ್ಕಾರ ಇದ್ದಾಗ ಎತ್ತಿನ ಹೊಳೆ, ಕೆಸಿ ವ್ಯಾಲಿ ಯಂತಹ ಯೋಜನೆಗಳು ಜಿಲ್ಲೆಗೆ ಕೊಡುಗೆ ನೀಡಿದ್ದೇವೆ ಎಂದು ತಿಳಿಸಿದರು. ನಮಗೆ ಇಲ್ಲಿಯ ಸ್ಪರ್ದೆ ಕುರಿತು ಯಾವುದೇ ಆತಂಕ ಇಲ್ಲ, ಇಲ್ಲಿಯ ಜನರ ಮತದಾರರ ಮನಸ್ಥಿತಿ ಗೊತ್ತಿದೆ, ಹಲವು ಕ್ಷೇತ್ರಗಳಲ್ಲಿ ಸೂಟಬಲ್‌ ಎನ್ನುವ ಕ್ಷೇತ್ರವೆಂದರೆ ಅದು ಕೋಲಾರ. ಅಲ್ಲದೇ ಬೆಂಗಳೂರಿಗೆ ಹತ್ತಿರವಾಗಿ ಇರುವ ಕ್ಷೇತ್ರ ಅಂದರೆ ಕೋಲಾರ ಅದಕ್ಕಾಗಿ ಇದನ್ನೇ ಆಯ್ಕೆ ಮಾಡಿಕೊಂಡಿದ್ದಾರೆ ಎಂದು ವಿವರಿಸಿದರು.

click me!