ಪ್ರಧಾನಿ ನರೇಂದ್ರ ಮೋದಿಯವರು ನುಡಿದಂತೆ ನಡೆಯಲ್ಲ. ಹಾಗಾಗಿ ನುಡಿದಂತೆ ನಡೆಯುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಕೈ ಬಲಪಡಿಸಲು ಈ ಬಾರಿ ಜೆಡಿಎಸ್ ಪಕ್ಷಕ್ಕೆ ಸಂಪೂರ್ಣ ಬಹುಮತ ನೀಡಬೇಕು ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಹೇಳಿದರು.
ಚಿಕ್ಕನಾಯಕನಹಳ್ಳಿ (ಮೇ.03): ಪ್ರಧಾನಿ ನರೇಂದ್ರ ಮೋದಿಯವರು ನುಡಿದಂತೆ ನಡೆಯಲ್ಲ. ಹಾಗಾಗಿ ನುಡಿದಂತೆ ನಡೆಯುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಕೈ ಬಲಪಡಿಸಲು ಈ ಬಾರಿ ಜೆಡಿಎಸ್ ಪಕ್ಷಕ್ಕೆ ಸಂಪೂರ್ಣ ಬಹುಮತ ನೀಡಬೇಕು ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಹೇಳಿದರು. ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಬಿ. ಸುರೇಶ್‌ಬಾಬು ಪರ ಮತಯಾಚಿಸಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಮಹಿಳೆಯರಿಗೆ ಶಕ್ತಿ ತುಂಬುತ್ತೇನೆ ಅಂತ ಹೇಳುತ್ತಾರೆ. ಆದರೆ ಅವರು ನುಡಿದಂತೆ ಮೋದಿ ನಡೆಯುವುದಿಲ್ಲ ಎಂದರು.
ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಕೊಟ್ಟವರು ನಾವು. ಈಗಾಗಲೇ ನಾನು ಲೋಕಸಭೆ, ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಬಿಲ್ ಪಾಸ್ ಮಾಡುವಂತೆ ಪತ್ರ ಬರೆದಿದ್ದೇನೆ. ಯಾವುದೇ ಒಂದು ಸಮಾಜಕ್ಕೆ ದೇವೇಗೌಡರಿಂದ ಅನ್ಯಾಯವಾಗಿಲ್ಲ ಎಂದು ಹೇಳಿದರು. ಸ್ತ್ರೀಶಕ್ತಿ ಸಂಘದ ಸಂಪೂರ್ಣ ಸಾಲ ಮನ್ನಾ ಮಾಡುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ. ಜೆಡಿಎಸ್‌ಗೆ ಸ್ಪಷ್ಟಬಹುಮತ ನೀಡಿ ಅಧಿಕಾರಕ್ಕೆ ತಂದರೆ ಕುಮಾರಸ್ವಾಮಿ ಅವರು ನುಡಿದಂತೆ ನಡೆಯುತ್ತಾರೆ ಎಂದರು. ದೇಶದಲ್ಲಿ ರೈತರ ಸಾಲ ಮನ್ನಾ ಮಾಡಿದ ಏಕೈಕ ಮುಖ್ಯಮಂತ್ರಿ ಎಂದರೆ ಅದು ಕುಮಾರಸ್ವಾಮಿ. ರೈತರಿಗೆ 5 ಸಾವಿರ ಮಾಸಾಶನ ಕೊಡುತ್ತೇನೆ ಎಂದು ಹೇಳಿದ್ದಾರೆ. ಇದಕ್ಕೆಲ್ಲ ರಾಜ್ಯದ ಜನತೆ ಅವರಿಗೆ ಶಕ್ತಿ ತುಂಬಬೇಕು ಎಂದು ಅವರು ಮನವಿ ಮಾಡಿದರು.
ಬಾಗಲಕೋಟೆ ಜಿಲ್ಲೆಯಲ್ಲಿ ಸುದೀಪ್ ಅಬ್ಬರದ ಪ್ರಚಾರ: ಕಿಚ್ಚ ನೋಡಲು ನೆರೆದ ಸಾವಿರಾರು ಅಭಿಮಾನಿಗಳು
ಜೆಡಿಎಸ್ ಮುಖಂಡ ಎಸ್. ಷಫಿ ಅಹಮದ್ ಮಾತನಾಡಿ, ಜೆಡಿಎಸ್ ಪಕ್ಷದ ಪ್ರಣಾಳಿಕೆಯಲ್ಲಿ ಬಡವರು, ರೈತರು, ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗದ ಹಿತ ಕಾಪಾಡಲು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಪ್ರಣಾಳಿಕೆಯಲ್ಲಿರುವ ಅಂಶಗಳು ಜಾರಿಗೆ ಬರಬೇಕಾದರೆ ಜೆಡಿಎಸ್ ಪಕ್ಷವನ್ನು ಗೆಲ್ಲಿಸುವ ಮೂಲಕ ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಮನವಿ ಮಾಡಿದರು. ಅಭ್ಯರ್ಥಿ ಸಿ.ಬಿ. ಸುರೇಶ್‌ಬಾಬು ಮಾತನಾಡಿದರು. ಜೆಡಿಎಸ್ ಮುಖಂಡರಾದ ಮಹದೇವಯ್ಯ, ಜಯಪ್ರಕಾಶ್, ರಾಜಕುಮಾರ್, ರಾಮಚಂದ್ರಯ್ಯ, ಪಾವಗಡ ಶ್ರೀರಾಮ್, ಸೋಲಾರ್ ಕೃಷ್ಣಮೂರ್ತಿ, ಹರ್ಷ, ಪುಷ್ಪಾ, ನಗ್ಮಾ, ಕಲ್ಲೇಶ್ ಮತ್ತಿತರರು ಭಾಗವಹಿಸಿದ್ದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಾಗಿತ್ತು.
ಬಿಜೆಪಿದು ಡಬಲ್ ಎಂಜಿನ್, ಕಾಂಗ್ರೆಸ್‌ದು ಟ್ರಬಲ್ ಎಂಜಿನ್: ಸಚಿವ ಸುಧಾಕರ್
ಪ್ರಧಾನಿ ನರೇಂದ್ರ ಮೋದಿಯವರು ಮಹಿಳೆಯರಿಗೆ ಶಕ್ತಿ ತುಂಬುತ್ತೇನೆ ಅಂತ ಹೇಳುತ್ತಾರೆ. ಆದರೆ ಅವರು ನುಡಿದಂತೆ ಮೋದಿ ನಡೆಯುವುದಿಲ್ಲ. ದೇಶದಲ್ಲಿ ರೈತರ ಸಾಲ ಮನ್ನಾ ಮಾಡಿದ ಏಕೈಕ ಮುಖ್ಯಮಂತ್ರಿ ಎಂದರೆ ಅದು ಕುಮಾರಸ್ವಾಮಿ. ಹಾಗಾಗಿ ನುಡಿದಂತೆ ನಡೆಯುವ ಇವರ ಕೈಗೆ ಅಧಿಕಾರ ಕೊಡಬೇಕು
-ಎಚ್.ಡಿ ದೇವೇಗೌಡ, ಜೆಡಿಎಸ್ ವರಿಷ್ಠ