ಬಸವಣ್ಣ ವಿಷಯದಲ್ಲಿ ರಾಜಕೀಯ ಎನ್ನುವವರು ಕ್ಷುಲ್ಲಕ ಮನಸಿನವರು: ಸಚಿವ ಎಚ್‌.ಕೆ.ಪಾಟೀಲ್‌

Published : Jan 21, 2024, 09:50 AM IST
ಬಸವಣ್ಣ ವಿಷಯದಲ್ಲಿ ರಾಜಕೀಯ ಎನ್ನುವವರು ಕ್ಷುಲ್ಲಕ ಮನಸಿನವರು: ಸಚಿವ ಎಚ್‌.ಕೆ.ಪಾಟೀಲ್‌

ಸಾರಾಂಶ

ಬಸವೇಶ್ವರ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ರಾಜ್ಯ ಸರಕಾರ ಘೋಷಿಸಿರುವುದನ್ನು ರಾಜಕೀಯ ಎಂದು ಆರೋಪಿಸುವವರು ಕ್ಷುಲ್ಲಕ ಮನಸ್ಥಿತಿಯವರು ಎಂದು ಸಚಿವ ಎಚ್‌.ಕೆ.ಪಾಟೀಲ್‌ ಟೀಕಿಸಿದರು.

ಹುಬ್ಬಳ್ಳಿ (ಜ.21): ಬಸವೇಶ್ವರ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ರಾಜ್ಯ ಸರಕಾರ ಘೋಷಿಸಿರುವುದನ್ನು ರಾಜಕೀಯ ಎಂದು ಆರೋಪಿಸುವವರು ಕ್ಷುಲ್ಲಕ ಮನಸ್ಥಿತಿಯವರು ಎಂದು ಸಚಿವ ಎಚ್‌.ಕೆ.ಪಾಟೀಲ್‌ ಟೀಕಿಸಿದರು. ನಗರದಲ್ಲಿ ಮಾತನಾಡಿದ ಅವರು, ‘ಬಸವಣ್ಣನವರು ಮಾನವ ಕುಲಕ್ಕೆ ಪ್ರಜಾಪ್ರಭುತ್ವದ ಕಲ್ಪನೆ ಕೊಟ್ಟವರು. ಅವರ ವಿಷಯದಲ್ಲಿ ರಾಜಕಾರಣ ಬೆರೆಸುವವರ ತಲೆಯಲ್ಲಿ ಕೇವಲ ರಾಜಕಾರಣ ಇದೆ. ಟೀಕಿಸುವವರು ಏನೂ ಮಾಡಲಿಲ್ಲ. ಅದಕ್ಕೆ ಇಲ್ಲ ಸಲ್ಲದ ಆರೋಪ ಮಾಡುತ್ತಾರೆ. ಇದು ಸರಿಯಲ್ಲ’ಎಂದರು. ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕನೆಂದು ನಿರ್ಣಯ ಮಾಡಿದ್ದಕ್ಕೆ ಸರಕಾರದ ನಿರ್ಣಯಕ್ಕೆ ಜನರು ಅಭಿಮಾನಪಟ್ಡಿದ್ದಾರೆ. 

ಮಠಾಧೀಶರು ಸೇರಿದಂತೆ ಎಲ್ಲ ಸಮುದಾಯಗಳ ಮುಖಂಡು ಅಭಿನಂದಿಸಿದ್ದಾರೆ ಎಂದರು. ಹಾನಗಲ್‌ ಯುವತಿ ರೇಪ್‌ ಪ್ರಕರಣ ಖಂಡಿಸಿ ಎಸ್‌ಐಟಿ ತನಿಖೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅವರಿಗೆ ಪ್ರತಿಭಟನೆ ಮಾಡುವ ಹಕ್ಕು ಇದೆ. ಆದರೆ, ಸರಕಾರ ಎಲ್ಲ ಗಮನಿಸಿ ಹೆಜ್ಜೆ ಇಡುತ್ತಿದೆ. ಪ್ರಕರಣ ನಿರ್ವಹಿಸುವಲ್ಲಿ ಸರಕಾರ ವಿಫಲವಾಗಿಲ್ಲ ಎಂದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂಡಿಯಾ ಒಕ್ಕೂಟದ ಮುಖ್ಯಸ್ಥ ಸ್ಥಾನಕ್ಕೆ ಬಂದಿರುವ ಪ್ರಸ್ತಾವನೆ ಕರ್ನಾಟಕದ ಜನರು ಹೆಮ್ಮೆ ಪಡುವ ವಿಚಾರ. ನ್ಯಾ. ಸದಾಶಿವ ಆಯೋಗದ ವರದಿ ಅನ್ವಯ ಒಳ ಮೀಸಲಾತಿಗೆ ಸಂವಿಧಾನ ತಿದ್ದುಪಡಿ ಕೋರಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲು ನಿರ್ಧರಿಸಲಾಗಿದೆ ಎಂದರು.

ಮೈತ್ರಿ ಬಳಿಕ ಇಂದು ಬಿಜೆಪಿ ನಾಯಕರ ಜತೆ ಎಚ್‌.ಡಿ.ಕುಮಾರಸ್ವಾಮಿ ಮೊದಲ ಸಭೆ!

ಬಸವಣ್ಣ ಸಾಂಸ್ಕೃತಿಕ ನಾಯಕ: ಜಗತ್ತಿನಲ್ಲೇ ಮೊಟ್ಟಮೊದಲ ಬಾರಿಗೆ "ಅನುಭವ ಮಂಟಪ" ದ ಮೂಲಕ ಪ್ರಜಾಪ್ರಭುತ್ವದ ಪರಿಕಲ್ಪನೆಗೆ ನಾಂದಿ ಹಾಡಿ, ಸಾಂಸ್ಕೃತಿಕ, ಸಾಮಾಜಿಕ ಹಾಗೂ ರಾಜಕೀಯ ಚಿಂತನೆಗಳಿಗೆ ಹೊಸ ದಿಕ್ಕನ್ನು ತೋರಿಸಿದ ವಚನ ಚಳವಳಿ ಹರಿಕಾರ ವಿಶ್ವಗುರು ಬಸವಣ್ಣ ಅವರನ್ನು “ರಾಜ್ಯದ ಸಾಂಸ್ಕೃತಿಕ ನಾಯಕ” ಎಂದು ಘೋಷಣೆ ಮಾಡುವ ನಿರ್ಣಯ ಐತಿಹಾಸಿಕ ಎಂದು ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಸ್ವಾಗತಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಹೊರಟ್ಟಿ, ಈ ನಿರ್ಣಯ ಕೈಗೊಂಡಿದ್ದಕ್ಕೆ ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟದ ಎಲ್ಲ ಸಚಿವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಂಡಿರುವುದು ನಾಡಿನ ಜನತೆಯಲ್ಲಿ ತೀವ್ರ ಸಂತಸ ಉಂಟು ಮಾಡಿದೆ. 12ನೇ ಶತಮಾನದಲ್ಲಿ ಅಲ್ಲಮಪ್ರಭು ಮತ್ತು ಬಸವಾದಿ ಶರಣರು ನಿರ್ಮಿಸಿದ “ಅನುಭವ ಮಂಟಪ” ಇಡೀ “ವಿಶ್ವದ ಪ್ರಪ್ರಥಮ ಶಾಸನ ಸಭೆ” ಎಂಬ ಹೆಗ್ಗಳಿಕೆ ಪಾತ್ರವಾಗಿದೆ. ಪ್ರಜಾಪ್ರಭುತ್ವದ ಪರಿಕಲ್ಪನೆಗೆ ಮೂಲ ಅಡಿಪಾಯವಾಗಿದೆ ಎಂದು ತಿಳಿಸಿದ್ದಾರೆ. ಸಮಾಜದಲ್ಲಿ ಅಸಮಾನತೆಯನ್ನು ತೊಡೆದು ಹಾಕಿ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಸಂದೇಶ ಸಾರುವ ಸಾರ್ವಕಾಲಿಕ ವಿಚಾರಧಾರೆಯಡಿ ನಿರ್ಮಾಣಗೊಂಡಿದ್ದ, ಅನುಭವ ಮಂಟಪ ಪ್ರಜಾಸತ್ತಾತ್ಮಕ ಮೌಲ್ಯಗಳ ವರ್ಧನೆಗೆ ಬೀಜಾಂಕುರ ಮಾಡಿದಂತಾಗಿದೆ. 

ಮಹಿಳೆಗೆ ನಾಯಿ ಕಚ್ಚಿದ ಕೇಸ್: ನಟ ದರ್ಶನ್‌ಗೆ ಪೊಲೀಸ್ ಕ್ಲೀನ್‌ಚಿಟ್

ಪ್ರಜಾಪ್ರಭುತ್ವದ ಬೇರುಗಳು ಗಟ್ಟಿಗೊಳ್ಳುವಲ್ಲಿ ಪ್ರೇರಣಾ ಶಕ್ತಿಯಾಗಿದೆ. ಬಸವಾದಿ ಶರಣರಿಂದ ರಚಿತಗೊಂಡ ಅಸಂಖ್ಯಾತ ವಚನಗಳೇ ಭಾರತ ಸಂವಿಧಾನದ ಅನುಚ್ಛೇದಗಳಾಗಿ ರೂಪುಗೊಂಡಿರುವುದು ಹೆಮ್ಮೆಯ ವಿಷಯ ಎಂದು ಬಣ್ಣಿಸಿದ್ದಾರೆ. ಇಂತಹ ಮಹನೀಯರನ್ನು ರಾಜ್ಯದ ಮೊದಲ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ್ದು, ಹೆಮ್ಮೆಯ ವಿಷಯ. ಈ ಹಿಂದೆ ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣವರ ಭಾವಚಿತ್ರ ಅಳವಡಿಸುವ ಕುರಿತು ಸಿದ್ದರಾಮಯ್ಯ ಅವರೇ ಆದೇಶ ಹೊರಡಿಸಿದ್ದರು. ಇದೀಗ ಕರ್ನಾಟಕ ಸಾಂಸ್ಕೃತಿಕ ನಾಯಕರನ್ನಾಗಿ ಘೋಷಿಸಿದೆ. ಇದು ಹೆಮ್ಮೆಯ ವಿಷಯ ಎಂದು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ