Karnataka election 2023: ಬಿಜೆಪಿ, ಜೆಡಿಎಸ್‌ನಿಂದ ಮೂವರು ಮಾಜಿ ಶಾಸಕರು ಕಾಂಗ್ರೆಸ್‌ಗೆ

Published : Feb 20, 2023, 10:31 PM IST
Karnataka election 2023: ಬಿಜೆಪಿ, ಜೆಡಿಎಸ್‌ನಿಂದ ಮೂವರು ಮಾಜಿ ಶಾಸಕರು ಕಾಂಗ್ರೆಸ್‌ಗೆ

ಸಾರಾಂಶ

ವಿಧಾನಸಭಾ ಚುನಾವಣೆ ರಣಾಂಗಣ ರಂಗೇರುವ ಮುನ್ನವೇ ಪಕ್ಷಾಂತರ ಪರ್ವ ಶುರುವಾಗಿದ್ದು ಬಿಜೆಪಿ, ಜೆಡಿಎಸ್‌ನ ಮೂವರು ಮಾಜಿ ಶಾಸಕರು ಸೋಮವಾರ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.

ಬೆಂಗಳೂರು (ಫೆ.20) : ವಿಧಾನಸಭಾ ಚುನಾವಣೆ ರಣಾಂಗಣ ರಂಗೇರುವ ಮುನ್ನವೇ ಪಕ್ಷಾಂತರ ಪರ್ವ ಶುರುವಾಗಿದ್ದು ಬಿಜೆಪಿ, ಜೆಡಿಎಸ್‌ನ ಮೂವರು ಮಾಜಿ ಶಾಸಕರು ಸೋಮವಾರ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.

ಕೆಪಿಸಿಸಿ(KPCC) ಕಚೇರಿಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ(Randeep singh surjewala), ವಿಧಾನ ಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಮತ್ತಿತರರ ಸಮ್ಮುಖದಲ್ಲಿ ಚಿಕ್ಕನಾಯಕನಹಳ್ಳಿಯ ಬಿಜೆಪಿ ಮಾಜಿ ಶಾಸಕ ಕೆ.ಎಸ್‌.ಕಿರಣ್‌ಕುಮಾರ್‌(KS Kiran kumar), ಮೈಸೂರಿನ ವಿಧಾನ ಪರಿಷತ್‌ ಮಾಜಿ ಸದಸ್ಯ ಬಿಜೆಪಿಯ ಸಂದೇಶ್‌ ನಾಗರಾಜ್‌(Sandesh Nagaraj) ಮತ್ತು ತುಮಕೂರು ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಜೆಡಿಎಸ್‌ನ ಎಚ್‌.ನಿಂಗಪ್ಪ(H Ningappa) ಕಾಂಗ್ರೆಸ್‌(Congress party)ಗೆ ಸೇರ್ಪಡೆಗೊಂಡರು.

ಅವರ ಹೇಳಿಕೆಗೆ ಮಹತ್ವ ಇಲ್ಲ - ನಾನು ಕಾಂಗ್ರೆಸ್ ಸೇರಿದಾಗಿಂದ ಮಾತಾಡಿಲ್ಲ : ಸುಧಾಕರ್

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಕಾಂಗ್ರೆಸ್‌ಗೆ ಪೂರಕ ವಾತಾವರಣವಿದ್ದು ಹಲವರು ಇತ್ತ ಮುಖ ಮಾಡುತ್ತಿದ್ದಾರೆ. ಮಾಜಿ ಶಾಸಕರು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ, ಬೇರೆ ಪಕ್ಷಗಳ ಬಹಳ ಶಾಸಕರು ಸೇರ್ಪಡೆಯಾಗಲಿದ್ದಾರೆ. ಅಷ್ಟೇ ಅಲ್ಲ, ಸಚಿವರಾಗಿದ್ದವರೂ ಕಾಂಗ್ರೆಸ್‌ಗೆ ಆಗಮಿಸಲಿದ್ದಾರೆ ಎಂದು ಬಹಿರಂಗಪಡಿಸಿದರು.

ಬಿಜೆಪಿಯಿಂದ ದ್ವೇಷದ ರಾಜಕಾರಣ:

ಬಿಜೆಪಿಯವರು ರಾಜ್ಯದ ಅಭಿವೃದ್ಧಿ ಕಡೆಗಣಿಸಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಧರ್ಮ-ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ನಳೀನ್‌ಕುಮಾರ್‌ ಕಟೀಲ್‌(Nalin Kumar kateel) ಬಿಜೆಪಿ ರಾಜ್ಯಾಧ್ಯಕ್ಷನಾಗಲು ಅಷ್ಟೆಅಲ್ಲ ರಾಜಕೀಯಕ್ಕೂ ನಾಲಾಯಕ್‌. ಅಭಿವೃದ್ಧಿ ಬಗ್ಗೆ ಚರ್ಚಿಸುವುದನ್ನು ಬಿಟ್ಟು ಲವ್‌ ಜಿಹಾದ್‌(Love jihad) ಬಗ್ಗೆ ಮಾತನಾಡಿ ಎಂದು ಬಿಜೆಪಿಯವರಿಗೆ ಹೇಳಿಕೊಡುತ್ತಾರೆ. ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ತೊರೆದು, ಕಾಂಗ್ರೆಸ್ ಸೇರಿದ ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಶಕುಂತಲಾ ಲಕ್ಕಪ್ಪ

ಚುನಾವಣಾ ಪ್ರಣಾಳಿಕೆ ರಚನಾ ಸಮಿತಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಮಾತನಾಡಿ, ಬಿಜೆಪಿಯವರು ಎಲ್ಲ ವರ್ಗಗಳ ವಿರೋಧಿಗಳು. ಆದ್ದರಿಂದ ಮತದಾರರು ಕಾಂಗ್ರೆಸ್‌ ಬಗ್ಗೆ ಒಲವು ವ್ಯಕ್ತಪಡಿಸುತ್ತಿದ್ದು ಪಕ್ಷ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ಕಾಂಗ್ರೆಸ್‌ನಿಂದ ಹಮ್ಮಿಕೊಳ್ಳುತ್ತಿರುವ ಪ್ರಜಾಧ್ವನಿ ಯಾತ್ರೆಗೂ ಹೆಚ್ಚು ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು ತಿಳಿಸಿದರು.

ಕೇಂದ್ರದ ಮಾಜಿ ಸಚಿವ ಕೆ.ಎಚ್‌.ಮುನಿಯಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್‌(Saleem ahmed), ಶಾಸಕ ರಂಗನಾಥ್‌, ಮಾಜಿ ಸಚಿವರಾದ ಕೆ.ಎನ್‌.ರಾಜಣ್ಣ, ಜಮೀರ್‌ ಅಹಮದ್‌ ಮತ್ತಿತರರು ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕಾಂಗ್ರೆಸ್ ಒಳಜಗಳಕ್ಕೆ ಪ್ರತಿಪಕ್ಷ ಕಿಡಿ.. ನಾಯಕತ್ವವಿಲ್ಲದೆ ರಾಜ್ಯದ ಅಭಿವೃದ್ಧಿ ಅಸಾಧ್ಯ: ಆರ್.ಅಶೋಕ್‌
ಭಗವದ್ಗೀತೆ ಬೋಧನೆ ಪ್ರಸ್ತಾಪ ಹಿಂದೆ ಎಚ್ಜಿಕೆ ಅಜೆಂಡಾ : ಮಧು ಬಂಗಾರಪ್ಪ