Assembly election: ತಿಂಗಳಾಂತ್ಯಕ್ಕೆ ಕೈ ಅಭ್ಯರ್ಥಿಗಳಿಗೆ ಟಿಕೆಟ್‌ ಘೋಷಣೆ

By Sathish Kumar KH  |  First Published Dec 12, 2022, 12:02 PM IST

ರಾಜ್ಯದಲ್ಲಿ 2023 ವಿಧಾನಸಭಾ ಚುನಾವಣೆಗೆ ರೆಡಿಯಾಗುತ್ತಿರುವ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ತಿಂಗಳಾಂತ್ಯಕ್ಕೆ ಆಲ್‌ ಇಂಡಿಯಾ ಕಾಂಗ್ರೆಸ್‌ ಕಮಿಟಿ (ಎಐಸಿಸಿ) ವತಿಯಿಂದ ಗುಡ್‌ ನ್ಯೂಸ್ ಸಿಗಲಿದೆ.


ಬೆಂಗಳೂರು (ಡಿ.12): ರಾಜ್ಯದಲ್ಲಿ 2023 ವಿಧಾನಸಭಾ ಚುನಾವಣೆಗೆ ರೆಡಿಯಾಗುತ್ತಿರುವ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ತಿಂಗಳಾಂತ್ಯಕ್ಕೆ ಆಲ್‌ ಇಂಡಿಯಾ ಕಾಂಗ್ರೆಸ್‌ ಕಮಿಟಿ (ಎಐಸಿಸಿ) ವತಿಯಿಂದ ಗುಡ್‌ ನ್ಯೂಸ್ ಸಿಗಲಿದೆ. ಚುನಾವಣೆಗೆ ಐದು ತಿಂಗಳು ಮುಂಚಿತವಾಗಿಯೇ ಟಿಕೆಟ್‌ ಅಭ್ಯರ್ಥಿಗಳಿಗೆ ಟಿಕೆಟ್‌ ನೀಡುವ ಬಗ್ಗೆ ಸ್ಪಷ್ಟ ಸಂದೇಶ ತಿಳಿಸಲಿದೆ ಎಂದು ತಿಳಿದುಬಂದಿದೆ.

ಅಧಿಕೃತವಾಗಿ ಟಿಕೆಟ್ ಘೋಷಣೆ ಮಾಡದೇ ಇದ್ದರೂ ಅಭ್ಯರ್ಥಿಗಳಿಗೆ ಸ್ಪಷ್ಟ ಸಂದೇಶ ನೀಡುವ ಸಾಧ್ಯತೆ ನಿಚ್ಚಳವಾಗಿದೆ. ಡಿಸೆಂಬರ್ ಒಳಗಾಗಿ ಕೈ ಅಭ್ಯರ್ಥಿಗಳಿಗೆ ಎಐಸಿಸಿ ಇಂದಲೇ ಅಧಿಕೃತ ಸ್ಪಷ್ಟ ಸೂಚನೆ ಬರಲಿದೆ. ಈ ಮೂಲಕ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವ ಬಗ್ಗೆ ಖಚಿತ ವ್ಯಕ್ತಪಡಿಸಿ ಕೆಲಸ ಮಾಡಿ ಎಂಬ ಸೂಚನೆ ನೀಡಲಿದೆ. ಈಗಾಗಲೇ ಕ್ಷೇತ್ರದಲ್ಲಿ ಕೆಲಸ ಮಾಡಲು ಡಿಸೆಂಬರ್ ಅಂತ್ಯದೊಳಗೆ ಅಧಿಕೃತವಾಗಿ ಟಿಕೆಟ್ ಘೋಷಣೆ ಮಾಡಬೇಕು ಎಂಬ ಒತ್ತಾಯವೂ ಕೂಡ ಕೇಳಿ ಬಂದಿತ್ತು. ಆದರೆ ಅಧಿಕೃತ ಘೋಷಣೆ ಮಾಡಿದ ನಂತರವೇ ಅಭ್ಯರ್ಥಿಗಳಿಗೆ ಸೂಚನೆ ನೀಡಲು ಹೈಕಮಾಂಡ್ ತೀರ್ಮಾನಿಸಿತ್ತು. 

Tap to resize

Latest Videos

ರಾಜ್ಯ ಬಿಜೆಪಿ-ಕಾಂಗ್ರೆಸ್‌ನಲ್ಲಿ ಗುಜರಾತ್‌ ಮಾಡೆಲ್‌ ಜಪ!

ಮೊದಲ ಹಂತದಲ್ಲಿ 150 ಕ್ಷೇತ್ರಗಳ ಅಭ್ಯರ್ಥಿ ಅಂತಿಮ: ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ರಾಷ್ಟ್ರೀಯ ಪಕ್ಷಗಳ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಇನ್ನು ಪ್ರಾದೇಶಿಕ ಪಕ್ಷವಾಗಿರುವ ಜೆಡಿಎಸ್‌ ಕೂಡ ಭರಪೂರ ಪ್ರಚಾರ ಮತ್ತು ಮತಯಾಚನೆ ಕಾರ್ಯಕ್ಕೆ ಮುಂದಾಗಿದೆ. ಈಗ ಜೆಡಿಎಸ್‌ ತನ್ನ ಅಭ್ಯರ್ಥಿಗಳ ಪಟ್ಟಿ ಈಗಾಗಲೇ ಅಂತಿಮಗೊಂಡಿದೆ. ಆದರೆ, ಈಗ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್‌ ಮತ್ತು ಬಿಜೆಪಿಗೆ ಅಭ್ಯರ್ಥಿಗಳ ಟಿಕೆಟ್‌ ಪಡೆಯುವ ಜಟಾಪಟಿ ಜೋರಾಗಿದೆ. ಕಾಂಗ್ರೆಸ್‌ನಿಂದ ಟಿಕೆಟ್‌ ಹಂಚಿಕೆಗೆ ಸಿದ್ಧತೆಯೂ ಭರಪೂರದಿಂದ ನಡೆಯುತ್ತಿದೆ. ರಾಜ್ಯದ 224 ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ ಸುಮಾರು 150 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಹೈಕಮಾಂಡ್ ಫೈನಲ್ ಮಾಡಲಿದೆ. 

ದೆಹಲಿಯಲ್ಲಿ ಟಿಕೆಟ್‌ ಹಂಚಿಕೆ ಮೀಟಿಂಗ್: ದೇಶದ ದಕ್ಷಿಣ ರಾಜ್ಯಗಳಲ್ಲಿ ಕರ್ನಾಟಕದಲ್ಲಿ ಮಾತ್ರ ಕಾಂಗ್ರೆಸ್‌ ಇನ್ನೂ ಪ್ರಭಲವಾಗಿ ಅಸ್ತಿತ್ವದಲ್ಲಿದೆ. ಇದಕ್ಕೆ ಪೂರಕ ಎಂಬಂತೆ ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಕೂಡ ಆಯ್ಕೆಯಾಗಿದ್ದಾರೆ. ಇಂದು ರಾಜ್ಯದ ಎಲ್ಲ ಕ್ಷೇತ್ರಗಳ ಅಭ್ಯರ್ಥಿಗಳಿಗೆ ಟಿಕೆಟ್‌ ಹಂಚಿಕೆ ವಿಚಾರವಾಗಿ ದೆಹಲಿಯಲ್ಲಿ ಹೈಕಮಾಂಡ್‌ ಹೈವೋಲ್ಟೇಜ್‌ ಮೀಟಿಂಗ್‌ ನಡೆಯುತ್ತಿದೆ. ಇಂದು ನಡೆಯುವ ಸಭೆಯಲ್ಲಿ ಎಷ್ಟು ಕ್ಷೇತ್ರಗಳ ಆಭ್ಯರ್ಥಿ ಫೈನಲ್ ಎಂಬುದು ತೀರ್ಮಾನ ಆಗಲಿದೆ. ನಂತರ ಮುಂದಿನ ಹಂತದಲ್ಲಿ ಉಳಿದ ಅಭ್ಯರ್ಥಿಗಳ ಆಯ್ಕೆ ಅಂತಿಮವಾಗಲಿದೆ ಎಂದು ತಿಳಿದುಬಂದಿದೆ.

ಬಳ್ಳಾರಿ: ಗಣಿ ನಾಡಲ್ಲಿ ಕಾಂಗ್ರೆಸ್‌ ಟಿಕೆಟ್‌ಗೇ ಹೆಚ್ಚು ಕಾದಾಟ..!

ಆರು ಪಟ್ಟು ಆಕಾಂಕ್ಷಿಗಳು: 2023ರ ರಾಜ್ಯ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡುವ ಎಲ್ಲ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಂತೆ ಕೆಪಿಸಿಸಿ ಅಧ್ಯಕ್ಷರು ನಿಯಮ ಮಾಡಿದ್ದರು. ಈ ಹಿನ್ನೆಲೆಯಲ್ಲಿ 224 ವಿಧಾನ ಸಭಾ ಕ್ಷೇತ್ರಗಳಿಗೆ ಬರೋಬ್ಬರೊ 1,330ಕ್ಕೂ ಅಧಿಕ ಆಕಾಂಕ್ಷಿಗಳು ಟಿಕೆಟ್‌ ನೀಡುವಂತೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಅಂದರೆ ಒಂದು ವಿಧಾನ ಸಭಾ ಕ್ಷೇತ್ರಕ್ಕೆ ಸರಾಸರಿ 6 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದಂತಾಗಿದೆ. ಇನ್ನು ನೈಜ ಚಿತ್ರಣ ಬೇರೆಯಾಗಿದ್ದು, ಕೆಲವೊಂಡು ಕ್ಷೇತ್ರಕ್ಕೆ 10ಕ್ಕೂ ಅಧಿಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದರೆ, ಮತ್ತೆ ಕೆಲವು ಕ್ಷೇತ್ರಗಳಿಗೆ ಒಂದರಿಂದ ಎರಡು ಅರ್ಜಿಗಳು ಸಲ್ಲಿಕೆಯಾಗಿವೆ.

click me!