60 ಹೊಸ ಮುಖಗಳಿಗೆ ಟಿಕೆಟ್‌ ಕರ್ನಾಟಕದಲ್ಲಿ ದಾಖಲೆ: ಕಟೀಲ್‌

By Kannadaprabha News  |  First Published Apr 16, 2023, 12:53 PM IST

ವೈದ್ಯರು, ಮಹಿಳೆಯರು, ನಿವೃತ್ತ ಐಪಿಎಸ್‌, ನಿವೃತ್ತ ಐಎಎಸ್‌ ಅಧಿಕಾರಿಗಳು ಸೇರಿದಂತೆ ಸಾಮಾನ್ಯರಲ್ಲಿ ಸಾಮಾನ್ಯರಿಗೆ ಟಿಕೆಟ್‌ ನೀಡಿದ್ದೇವೆ. ರಾಷ್ಟ್ರೀಯ ವಿಚಾರಧಾರೆಯಲ್ಲಿ ಬೆಳೆದ ಭಾಗೀರಥಿ, ಗುರುರಾಜ್‌, ಈಶ್ವರ್‌ ಸಿಂಗ್‌ ಠಾಕೂರ್‌ ಅಂಥವರನ್ನು ಗುರುತಿಸಿ ಟಿಕೆಟ್‌ ನೀಡಿದ್ದೇವೆ: ನಳಿನ್‌ ಕುಮಾರ್‌ ಕಟೀಲ್‌ 


ಬೆಂಗಳೂರು(ಏ.16):  ರಾಜ್ಯ ರಾಜಕಾರಣ ಇತಿಹಾಸದಲ್ಲಿ ಮೊದಲ ಬಾರಿಗೆ 60 ಹೊಸ ಮುಖಗಳಿಗೆ ಅವಕಾಶ ನೀಡಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ. ಶನಿವಾರ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈದ್ಯರು, ಮಹಿಳೆಯರು, ನಿವೃತ್ತ ಐಪಿಎಸ್‌, ನಿವೃತ್ತ ಐಎಎಸ್‌ ಅಧಿಕಾರಿಗಳು ಸೇರಿದಂತೆ ಸಾಮಾನ್ಯರಲ್ಲಿ ಸಾಮಾನ್ಯರಿಗೆ ಟಿಕೆಟ್‌ ನೀಡಿದ್ದೇವೆ. ರಾಷ್ಟ್ರೀಯ ವಿಚಾರಧಾರೆಯಲ್ಲಿ ಬೆಳೆದ ಭಾಗೀರಥಿ, ಗುರುರಾಜ್‌, ಈಶ್ವರ್‌ ಸಿಂಗ್‌ ಠಾಕೂರ್‌ ಅಂಥವರನ್ನು ಗುರುತಿಸಿ ಟಿಕೆಟ್‌ ನೀಡಿದ್ದೇವೆ ಎಂದು ಪ್ರತಿಪಾದಿಸಿದರು.

ಡಿಸೆಂಬರ್‌ನಿಂದ ಅಭ್ಯರ್ಥಿಗಳ ಪಟ್ಟಿಬಿಡುಗಡೆ ಮಾಡುವುದಾಗಿ ಹೇಳುತ್ತಿದ್ದ ಕಾಂಗ್ರೆಸ್‌ ಬಹಳ ಕಷ್ಟಪಟ್ಟು ಎರಡು ಹಂತಗಳಲ್ಲಿ ಅಭ್ಯರ್ಥಿಗಳನ್ನು ಘೋಷಿಸಿದೆ. ಗಜ ಪ್ರಸವ ಆಗಿದೆ. ಇನ್ನೂ ಹತ್ತಾರು ಕಡೆ ಟಿಕೆಟ್‌ಗೆ ಕಾದು ಕುಳಿತಿದ್ದಾರೆ. ಆದರೆ, ಬಿಜೆಪಿ ಪಾರ್ಟಿ ಕಾರ್ಯಕರ್ತರ ಆಧರಿತ ಪಕ್ಷ. ಬೂತ್‌ ಮಟ್ಟದಿಂದ ಅಭಿಪ್ರಾಯ ಸಂಗ್ರಹಿಸಿ ಕೇವಲ 10 ದಿನಗಳಲ್ಲಿ 212 ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದೇವೆ ಎಂದರು.

Tap to resize

Latest Videos

ನಳಿನ್‌ ಕಟೀಲ್‌ಗೆ ಸಾಮಾನ್ಯ ಜ್ಞಾನ ಇಲ್ಲ: ಪ್ರಿಯಾಂಕ್‌ ಖರ್ಗೆ ಕಿಡಿ

ಪ್ರಸ್ತುತ ರಾಜ್ಯದಲ್ಲಿ ಬಿಜೆಪಿ ಪರ, ಪ್ರಧಾನಿ ನರೇಂದ್ರ ಮೋದಿ ಪರ ಅಲೆ ಇದೆ. ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯದ ಡಬಲ್‌ ಇಂಜಿನ್‌ ಸರ್ಕಾರ ಅಭಿವೃದ್ಧಿ ಕಾರ್ಯಗಳಿಗೆ ಮತದಾರರು ಆಶೀರ್ವಾದ ಮಾಡಲಿದ್ದಾರೆ. ದೇಶದ ಬೆಳವಣಿಗೆ ಬಿಜೆಪಿ ಒಂದೇ ಭರವಸೆ ಎಂಬ ಘೋಷವಾಕ್ಯದಡಿ ಮತ ಕೇಳಲಿದ್ದೇವೆ ಎಂದರು.

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

click me!