
ರಾಮದುರ್ಗ (ಸೆ.03): ಬಿಜೆಪಿಯಲ್ಲಿ ಟಿಕೆಟ್ ಮಾರಿಕೊಳ್ಳುವ ಪರಿಪಾಠ ಶುರುವಾಗಿದೆ. ಬಿಜೆಪಿಯಲ್ಲಿ ಪರಿಸ್ಥಿತಿ ಮುಂಚಿನಂತಿಲ್ಲ. ಪಕ್ಷ ನಿಷ್ಠೆಗೆ ಬೆಲೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ, ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದರು. ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ಶನಿವಾರ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾನು 7ನೇ ಬಾರಿ ಗೆದ್ದರೇ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ಮಾಡುತ್ತೇನೆಂದು ಕೆಲವರು ನನಗೆ ಟಿಕೆಟ್ ತಪ್ಪಿಸಿದರು. ಬಿಜೆಪಿ ನನಗೆ ಸೋಲಿಸಲು ಹೋಗಿ ರಾಜ್ಯದಲ್ಲಿ ತಾನೇ ಸೋತಿತು.
ರಾಮದುರ್ಗದಲ್ಲಿ ಕೂಡ ಹಿರಿಯರಾದ ಮಹಾದೇವಪ್ಪ ಯಾದವಾಡರಿಗೆ ಟಿಕೆಟ್ ತಪ್ಪಿಸಿದ್ದು, ಬಿಜೆಪಿಯಲ್ಲಿ ಮುಂಚಿನಂತಿಲ್ಲ ಎನ್ನುವುದನ್ನು ತೋರಿಸುತ್ತದೆ ಎಂದರು. ಬಿಜೆಪಿಗೆ ಮುಂಚೆ ಜನ ಬೆಂಬಲ ಇಲ್ಲದಿದ್ದಾಗ ಹಳ್ಳಿ ಹಳ್ಳಿಗಳಿಗೆ ತೆರಳಿ ಸಂಘಟನೆ ಮಾಡಿದ್ದೆ. ಈಗ ಕಾಂಗ್ರೆಸ್‌ನಲ್ಲಿದ್ದು ಪಕ್ಷ ಸಂಘಟನೆಗೆ ಶ್ರಮಿಸುತ್ತೇನೆ. ಯಾವ ಪಕ್ಷದಲ್ಲಿದ್ದರೂ ಪ್ರಾಮಾಣಿಕತೆಯಿಂದ ದುಡಿಯುವೆ. ನನಗೆ ಟಿಕೆಟ್ ತಪ್ಪಿಸಿ ಬಿಜೆಪಿ ನಾಯಕರು ಪಶ್ಚಾತಾಪ ಪಟ್ಟುಕೊಳ್ಳುತ್ತಿದ್ದಾರೆ ಎಂದರು. ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಮಾತನಾಡಿ, ಬಿಜೆಪಿ ನಾಯಕರು ಲಿಂಗಾಯತ ಸಮಾಜದ ನಾಯಕರಿಗೆ ಟಿಕೆಟ್ ತಪ್ಪಿಸಿ ಅನ್ಯಾಯ ಮಾಡಿದ್ದರಿಂದ ಕಾಂಗ್ರೆಸ್ ಗೆಲ್ಲುವಂತಾಗಿದೆ ಎಂದರು.
ಕಾಡನ್ನು ಉಳಿಸಿದರೆ ಕಾಡು ನಮ್ಮನ್ನು ಉಳಿಸುತ್ತದೆ: ಸಚಿವ ಮಹದೇವಪ್ಪ
ಸಂತೋಷ್ ಮೊದ್ಲು ತಮ್ಮವರನ್ನೇ ಪಕ್ಷದಲ್ಲಿ ಉಳಿಸಿಕೊಳ್ಳಲಿ: ಕಾಂಗ್ರೆಸ್ ಶಾಸಕರು ಬಿ.ಎಲ್. ಸಂತೋಷ್ ಸಂಪರ್ಕದಲ್ಲಿದ್ದರೆ ನಾಳೆಯಿಂದಲೇ ‘ಆಪರೇಶನ್’ಆರಂಭಿಸಲಿ. ಕಾಂಗ್ರೆಸ್‌ನ ಯಾವ ಶಾಸಕರು ರಾಜೀನಾಮೆ ಕೊಟ್ಟು ಹೊರ ಹೋಗು ತ್ತಾರೆ ನಾವೂ ನೋಡೋಣ. ರಾಜ್ಯದಲ್ಲಿ ಗಟ್ಟಿಮುಟ್ಟಾದ ಸರ್ಕಾರವಿದೆ. ಬಿಜೆಪಿ ಸದ್ಯ ಅಸ್ತಿತ್ವ ಉಳಿಸಿಕೊಂಡರೆ ಸಾಕಾಗಿದೆ ಎಂಬ ಸ್ಥಿತಿಯಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ವ್ಯಂಗ್ಯವಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸಿನ 40 ಶಾಸಕರು ತಮ್ಮ ಸಂಪರ್ಕದಲ್ಲಿದ್ದಾರೆ ಎಂಬ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿ, ‘ಮೊದಲು ಅವರ ಶಾಸಕರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲಿ’ ಎಂದು ತಿರುಗೇಟು ನೀಡಿದರು.
ಕಾವೇರಿ ಹೋರಾಟಕ್ಕೆ ಧುಮುಕದ ಕನ್ನಡ ಚಿತ್ರರಂಗ: ರೈತರ ಆಕ್ರೋಶ
ಇಡೀ ರಾಷ್ಟ್ರದಲ್ಲಿ ಬರೀ ಆಪರೇಶನ್ ಮಾಡಿಯೇ ಸರ್ಕಾರ ರಚನೆ ಮಾಡುವ ಸ್ಥಿತಿಗೆ ಬಜೆಪಿ ತಲುಪಿದೆ. ಕರ್ನಾಟಕದಲ್ಲಿ ಬಿಜೆಪಿಗೆ ಒಂದು ಸಲವೂ ಬಹುಮತ ಬರಲಿಲ್ಲ. ರಾಜ್ಯ ಬಿಜೆಪಿ ನಾಯಕರ ಪರಿಸ್ಥಿತಿಯಂತೂ ಜಗಜ್ಜಾಹೀರು. ಈಗ ಬಿಜೆಪಿ ಮುಳುಗುತ್ತಿರುವ ಹಡಗಿನಂತಾಗಿದೆ ಎಂದು ಕಿಡಿಕಾರಿದರು. ಕಾಂಗ್ರೆಸ್‌ಗೆ 135 ಸೀಟ್‌ಗಳು ಬಂದಿವೆ. ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಬಿಜೆಪಿ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಇದಕ್ಕೆ ಪ್ರಮುಖ ಕಾರಣ ಬಿಜೆಪಿ ಕೆಲವೇ ಜನರ ಕೈಯಲ್ಲಿರುವುದು ಎಂದು ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.