ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರು ಇಡಿ ಎಂದು ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಆಗ್ರಹಿಸಿದ್ದಾರೆ. ಅಬ್ಬಯ್ಯ ಒತ್ತಾಯಕ್ಕೆ ಬಿಜೆಪಿ ಸದಸ್ಯರಿಂದ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಲ್ಲದೇ ತೀವ್ರವಾಗಿ ವಿರೋಧಿಸಿದ್ದಾರೆ, ಇದರಿಂದ ಸದನದಲ್ಲಿ ಗದ್ದಲ ಕೋಲಾಹಲ ಉಂಟಾಗಿತ್ತು.
ವಿಧಾನಸಭೆ (ಡಿ.14): ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರು ಇಡಿ ಎಂದು ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಆಗ್ರಹಿಸಿದ್ದಾರೆ. ಅಬ್ಬಯ್ಯ ಒತ್ತಾಯಕ್ಕೆ ಬಿಜೆಪಿ ಸದಸ್ಯರಿಂದ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಲ್ಲದೇ ತೀವ್ರವಾಗಿ ವಿರೋಧಿಸಿದ್ದಾರೆ, ಉದರಿಂದದ ಸದನದಲ್ಲಿ ಗದ್ದಲ ಕೋಲಾಹಲ ಉಂಟಾಗಿತ್ತು.
ಐತಿಹಾಸಿಕ ವ್ಯಕ್ತಿಗಳ ಹೆಸರುಗಳನ್ನ ನೂತನ ವಿಮಾನ ನಿಲ್ದಾಣಕ್ಕೆ ನಾಮಕರಣಕ್ಕೆ ಶಿಫಾರಸ್ಸು ಮಾಡಲು ನಿರ್ಧಾರ ಮಾಡಲಾಗಿದ್ದು, ಕೇಂದ್ರಕ್ಕೆ ಶಿಫಾರಸ್ಸು ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ವಿಚಾರ ಪ್ರಸ್ತಾಪ ಮಾಡಿದ ಸಚಿವ ಎಂ.ಬಿ ಪಾಟೀಲ್, ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೆಸರು, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರು, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕವಿ ಕುವೆಂಪು ಹೆಸರು, ವಿಜಯಪುರ ವಿಮಾನ ನಿಲ್ದಾಣಕ್ಕೆ ಜಗಜ್ಯೋತಿ ಬಸವೇಶ್ವರ ಹೆಸರು ಇಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಆರ್.ಅಶೋಕ್
ಈ ವೇಳೆ ಮಧ್ಯಪ್ರವೇಶ ಮಾಡಿದ ಶಾಸಕ ಸುನಿಲ್ ಕುಮಾರ್, ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯ ಹೆಸರಿಡಿ ಅಂತ ಮನವಿ ಮಾಡಿದರು. ವೀರ ರಾಣಿ ಅಬ್ಬಕ್ಕ ದೇವಿ ಹೆಸರೂ ಕೂಡ ಕೇಳಿ ಬರ್ತಿದೆ ಎಂದು ಸ್ಪೀಕರ್ ಖಾದರ್ ಹೇಳಿದರು. ನಾಲ್ಕು ಕೂಡ ಕ್ಯಾಬಿನೆಟ್ ನಲ್ಲಿ ನಿರ್ಧಾರ ಆಗಿದೆ. ಹೆಸರಿಡುವ ವಿಚಾರಕ್ಕೆ ವಾಗ್ವಾದ ಉಂಟಾಗಿದ್ದು, ಮಂಗಳೂರು, ಮೈಸೂರು ಕೂಡ ಇದೆ.ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡ್ತೀವಿ ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದರಲ್ಲದೇ ಮುಂದೆ ಹೆಸರಿಡ್ತೀವಿ ಅಂತ ಸ್ಪಷ್ಟನೆ ನೀಡಿದರು.
ನೀತಿಪಾಠ ಹೇಳುವ ನೈತಿಕತೆ ಬಿಜೆಪಿಗಿಲ್ಲ: ಬಿಜೆಪಿ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ ಅದನ್ನು ಎತ್ತುವ ಕೆಲಸ ಮಾಡಲಿ. ವಿರೋಧ ಪಕ್ಷದ ನಾಯಕರನ್ನು ನೇಮಿಸಲಾಗದಷ್ಟು ದುಸ್ಥಿತಿಗೆ ಬಂದಿರುವ ಬಿಜೆಪಿ ಮುರುಕಲು ಮನೆಯಾಗಿದ್ದು, ಕಾಂಗ್ರೆಸ್‌ಗೆ ನೀತಿ ಪಾಠ ಹೇಳುವ ಯಾವುದೇ ನೈತಿಕತೆ ಉಳಿಸಿಕೊಂಡಿಲ್ಲ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು. ಈ ಕುರಿತು ಪ್ರಕಟಣೆ ನೀಡಿರುವ ಅವರು, ಬಿಜೆಪಿಗೆ ರಾಜ್ಯದ ಜನ ಕೇವಲ 66 ಸ್ಥಾನ ನೀಡಿ ಅವರ ದುರಾಡಳಿತಕ್ಕೆ ತಕ್ಕ ಪಾಠ ಕಲಿಸಿದ್ದಾರೆ. ಅವರಿಗೆ ಅದು ಜೀರ್ಣಿಸಿಕೊಳ್ಳಲು ಆಗುತ್ತಿಲ್ಲ.
ಹೆಣ್ಣು ಭ್ರೂಣ ಹತ್ಯೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ
ಹೀಗಾಗಿ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದೆ. ನಾಲ್ಕು ಗುಂಪುಗಳಾಗಿವೆ ಎಂದು ಹೇಳುತ್ತಾ ತಿರುಗುತ್ತಿದ್ದಾರೆ. ದೇಶದ ಆಡಳಿತದ ಚುಕ್ಕಾಣಿ ಹಿಡಿದಿರುವ ರಾಷ್ಟ್ರೀಯ ಪಕ್ಷ ಬಿಜೆಪಿಗೆ ರಾಜ್ಯದ ವಿರೋಧ ಪಕ್ಷದ ನಾಯಕರನ್ನು ನೇಮಿಸಲಾಗದಷ್ಟು ದುಸ್ಥಿತಿಗೆ ಬಂದಿದೆ. ಕರ್ನಾಟಕದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ವಿರೋಧ ಪಕ್ಷದ ನಾಯಕನಿಲ್ಲದೆ ಅಧಿವೇಶನ ನಡೆಯುವಂತಾಗಿದೆ. ಬಿಜೆಪಿಯ ಶಾಸಕರು, ನಾಯಕರುಗಳು ಅವರ ಪಕ್ಷದ ವಿರುದ್ಧವೇ ಮಾಧ್ಯಮಗಳ ಮುಂದೆ ಹರಿ ಹಾಯುತ್ತಿದ್ದಾರೆ. ಅದರ ಬಗ್ಗೆ ಗಮನ ಕೊಡುವದನ್ನು ಬಿಟ್ಟು ನಮ್ಮ ಪಕ್ಷದ ಬಗ್ಗೆ ಮಾತನಾಡುತ್ತಿದ್ದಾರೆ.