ಕಾಂಗ್ರೆಸ್‌ ನೀಡಿರುವ ಭರವಸೆಗಳನ್ನು ಈಡೇರಿಸಲು ಸಿದ್ದು-ಡಿಕೆಶಿ ಬದ್ದ: ಶಾಸಕ ಇಕ್ಬಾಲ್‌

By Kannadaprabha NewsFirst Published May 28, 2023, 1:58 PM IST
Highlights

ಕ್ಷೇತ್ರದ ಜನರ ಆಶೀರ್ವಾದಿಂದ ಇಂದು ನಾನು ಶಾಸಕನಾಗಿದ್ದು, ಜನರ ಈ ಪ್ರೀತಿ ವಿಶ್ವಾಸಕ್ಕೆ ನಾನೆಂದಿಗೂ ಚಿರಋುಣಿ ಎಂದು ರಾಮನಗರ ಕ್ಷೇತ್ರದ ಶಾಸಕ ಎಚ್‌.ಎ.ಇಕ್ಬಾಲ್‌ ಹುಸೇನ್‌ ತಿಳಿಸಿದರು. 

ರಾಮನಗರ (ಮೇ.28): ಕ್ಷೇತ್ರದ ಜನರ ಆಶೀರ್ವಾದಿಂದ ಇಂದು ನಾನು ಶಾಸಕನಾಗಿದ್ದು, ಜನರ ಈ ಪ್ರೀತಿ ವಿಶ್ವಾಸಕ್ಕೆ ನಾನೆಂದಿಗೂ ಚಿರಋುಣಿ ಎಂದು ರಾಮನಗರ ಕ್ಷೇತ್ರದ ಶಾಸಕ ಎಚ್‌.ಎ.ಇಕ್ಬಾಲ್‌ ಹುಸೇನ್‌ ತಿಳಿಸಿದರು. ತಾಲೂಕಿನ ಕೈಲಾಂಚಾ ಹೋಬಳಿ ವಿಭೂತಿಕೆರೆ, ಬನ್ನಿಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚನ್ನಮಾನಹಳ್ಳಿಯಲ್ಲಿ ಶನಿವಾರ ಮತದಾರರಿಗೆ ಕೃತಜ್ಞತೆ ಸಲ್ಲಿಸಿ ಮಾತನಾಡಿದ ಅವರು, ಕ್ಷೇತ್ರದ ಜನರು ಆಶೀರ್ವಾದ, ಹಾರೈಕೆ ಹಾಗೂ ಸಹಕಾರದಿಂದ ಶಾಸಕನಾಗುವ ಅವಕಾಶ ದೊರೆತಿದೆ. 

ನನ್ನ ಗೆಲುವಿಗೆ ಸಾಕಷ್ಟು ಜನರ ಪರಿಶ್ರಮ ಕಾರಣವಾಗಿದೆ. ಕಾಂಗ್ರೆಸ್‌ ಕಾರ್ಯಕರ್ತರು, ಮುಖಂಡರು ಸೇರಿದಂತೆ ಸಾಕಷ್ಟುಜನ ಚುನಾವಣೆಯಲ್ಲಿ ನನ್ನ ಗೆಲುವಿಗಾಗಿ ಹಗಲು ರಾತ್ರಿ ದುಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ನನ್ನ ಪರವಾಗಿ ಚುನಾವಣೆಯಲ್ಲಿ ಹಗಲಿರುಳು ಶ್ರಮಿಸಿದ ಪಕ್ಷದ ಮುಖಂಡರು, ಕಾರ್ಯಕರ್ತರ ಜೊತೆಗೆ ನನ್ನನ್ನು ಶಾಸಕನಾಗಿ ಆಯ್ಕೆಮಾಡಿಕೊಂಡ ಮತದಾರರಿಗೆ ಆಯಾಯ ಗ್ರಾಮಗಳಿಗೆ ತೆರಳಿ ಅಭಿನಂದನೆ ಸಲ್ಲಿಸುವ ಕೆಲಸ ಆರಂಧಿಸಿದ್ದೇನೆ ಎಂದು ತಿಳಿಸಿದರು.

ಕೊಟ್ಟ ಭರವಸೆ ಈಡೇರಿಸುವುದು ಉತ್ತಮ: ಸರ್ಕಾರಕ್ಕೆ ಕಿವಿಮಾತು ಹೇಳಿದ ಬಸವರಾಜ ಹೊರಟ್ಟಿ

ಅಭಿವೃದ್ಧಿಗೆ ಬದ್ಧ: ಶಾಸಕನಾಗಿ ಆಯ್ಕೆಯಾದ ನಂತರ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ್ದು, ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಧಿಕಾರಿಗಳೊಂದಿಗೆ ಆಗಬೇಕಿರುವ ಕೆಲಸಗಳ ಬಗ್ಗೆ ಕುಂದುಕೊರತೆ ಸಭೆ ನಡೆಸುತ್ತೇನೆ. ಜನರ ಸಮಸ್ಯೆಯನ್ನು ಬಗೆಹರಿಸುವುದು ನನ್ನ ಮೂಲ ಉದ್ದೇಶ. ತಾಲೂಕಿನ ಸಮಗ್ರ ಅಭಿವೃದ್ಧಿಗೆ ಬದ್ಧನಾಗಿದ್ದೇನೆ. ಕಳೆದ 25 ವರ್ಷಗಳಿಂದ ಸಾಕಷ್ಟುಅಭಿವೃದ್ಧಿ ಕಾರ್ಯಗಳು ನನೆಗುದಿಗೆ ಬಿದ್ದಿದೆ. ಆದ್ಯತೆ ಮೇರೆಗೆ ಹಂತ ಹಂತವಾಗಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು. ಅನುಷ್ಠಾನಗೊಳಿಸಿದ ಕಾಮಗಾರಿಯನ್ನು ಶೀಘ್ರವಾಗಿ ಮುಗಿಸಲು ಆದ್ಯತೆ ನೀಡಲಾಗುವುದು. ನಾನು ಪ್ರತಿನಿತ್ಯ ಕ್ಷೇತ್ರದ ಜನರ ಜೊತೆ ಇರುತ್ತೇನೆ. ಮುಂದೆಯೂ ನಿಮ್ಮೆಲ್ಲರ ಪ್ರೀತಿ, ಸಹಕಾರ ಹೀಗೆ ಇರಲಿ ಎಂದು ಮನವಿ ಮಾಡಿದರು.

ಗ್ಯಾರಂಟಿಗಳ ಈಡೇರಿಕೆ ನಿಶ್ಚಿತ: ರಾಜ್ಯದ ಜನರಿಗೆ ಕಾಂಗ್ರೆಸ್‌ ನೀಡಿರುವ ಐದು ಭರವಸೆಗಳನ್ನು ಈಡೇರಿಸಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಬದ್ದರಾಗಿದ್ದಾರೆ. ಈಗಾಗಲೇ ಮೊದಲ ಸಚಿವ ಸಂಪುಟದಲ್ಲಿ ಗ್ಯಾರಂಟಿ ಯೋಜನೆಗಳಿಗೆ ತಾತ್ವಿಕ ಒಪ್ಪಿಗೆ ನೀಡಲಾಗಿದೆ. ಪಕ್ಷ ಜನರಿಗೆ ಕೊಟ್ಟಮಾತನ್ನು ಉಳಿಸಿಕೊಳ್ಳಲಿದೆ. ನಾನು ಸರ್ಕಾರದ ಒಂದು ಭಾಗವಾಗಿರುವುದರಿಂದ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಸಹಕಾರ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಶಾಸಕರಾಗಿ ಆಯ್ಕೆಯಾದ ನಂತರ ಮತದಾರರಿಗೆ ಕೃತಜ್ಞತೆ ಸಲ್ಲಿಸಲು ವಿವಿಧ ಗ್ರಾಮಗಳಿಗೆ ತೆರಳಿದ ಇಕ್ಬಾಲ್‌ ಹುಸೇನ್‌ ಅವರನ್ನು ಕಾಂಗ್ರೆಸ್‌ ಮುಖಂಡರು, ಸಾರ್ವಜನಿಕರು ಅದ್ಧೂರಿ ಸ್ವಾಗತ ಕೋರಿ ಬರಮಾಡಿಕೊಂಡರು. ಗ್ರಾಮಗಳ ಮುಂಭಾಗ ತಳಿರು ತೋರಣ, ಬಾಳೆಕಂದುಗಳಿಂದ ಅಲಂಕಾರ ಮಾಡಲಾಗಿತ್ತು. ಕುಂಬಾಪುರ ಕಾಲೋನಿ, ಚಿಕ್ಕೇನಹಳ್ಳಿ, ಅಂಜನಾಪುರ, ವಿಭೂತಿಕೆರೆ, ಕಾವೇರಿದೊಡ್ಡಿ, ಬನ್ನಿಕುಪ್ಪೆ, ಜಕ್ಕಸಂದ್ರ ಸೇರಿದಂತೆ ಹಲವು ಗ್ರಾಮಗಳಲ್ಲಿ ಶಾಸಕರಿಗೆ ಮಹಿಳೆಯರು ಹೂ ಗುಚ್ಚ ನೀಡಿ ಆರತಿ ಬೆಳಗಿ ನೂತನ ಶಾಸಕರಿಗೆ ಸ್ವಾಗತ ಕೋರಿದರು.

ನನಗೂ 200 ಯೂನಿಟ್‌ ಕರೆಂಟ್‌ ಬೇಕು, ಇಲ್ಲವಾದರೆ ಪ್ರತಿಭಟನೆ: ಶಾಸಕ ಸಿ.ಸಿ.ಪಾಟೀಲ್‌ ಎಚ್ಚರಿಕೆ

ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ರಾಜು, ಕೆಎಂಎಫ್‌ ಮಾಜಿ ಅಧ್ಯಕ್ಷ ಪಿ.ನಾಗರಾಜು, ಜಿಪಂ ಮಾಜಿ ಅಧ್ಯಕ್ಷ ಕೆ.ರಮೇಶ್‌, ಗ್ರಾಮಾಂತರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ವಿ.ಎಚ್‌.ರಾಜು, ನಗರ ಘಟಕದ ಅಧ್ಯಕ್ಷ ಎ.ಬಿ.ಚೇತನ್‌ಕುಮಾರ್‌, ಜಿಲ್ಲಾ ಕಾರ್ಯದರ್ಶಿ ಷಡಕ್ಷರಿದೇವ, ನಗರಸಭೆ ಮಾಜಿ ಅಧ್ಯಕ್ಷೆ ಬಿ.ಸಿ.ಪಾರ್ವತಮ್ಮ, ಯುವ ಕಾಂಗ್ರೆಸ್‌ ಘಟಕದ ಜಿಲ್ಲಾ ಕಾರ್ಯಾಧ್ಯಕ್ಷ ಅನಿಲ್‌ಜೋಗಿಂದರ್‌, ತಾಲೂಕು ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್‌, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ತೇಜಾ, ಕುರುಬರ ಸಂಘದ ಜಿಲ್ಲಾಧ್ಯಕ್ಷ ಚನ್ನಮಾನಹಳ್ಳಿ ನಾಗೇಶ್‌, ಕಾಂಗ್ರೆಸ್‌ ಮುಖಂಡರಾದ ಗುರುಪ್ರಸಾದ್‌, ಲೋಹಿತ್‌, ಉಮೇಶ್‌, ವಾಸುನಾಯ್ಕ, ಸಿದ್ದೇಗೌಡ, ಅರಳಪ್ಪ, ಭದ್ರಯ್ಯ, ವಾಸುನಾಯ್ಕ, ರಘು, ಪಾರ್ಥ, ಸ್ವಾಮಿ, ಮುನಿರಾಜು ಇತರರಿದ್ದರು.

click me!