
ಬೆಂಗಳೂರು(ಜು.30): ‘ಭ್ರಷ್ಟರ ರಕ್ಷಣೆಗಾಗಿ ಬಿಬಿಎಂಪಿ ಆಯುಕ್ತರ ವರ್ಗಾವಣೆ ಮಾಡಿದ ನೀವು, ಕೊಲೆ ಬೆದರಿಕೆ ಎದುರಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯನ್ನೇ ಇದೀಗ ಕೋಮುವಾದಿ ಪುಂಡರ ರಕ್ಷಿಸಲು ವರ್ಗಾವಣೆ ಮಾಡಿದ್ದೀರಿ. ಇದೇನಾ ಕೊರೋನಾ ವಾರಿಯರ್ಸ್‌ಗೆ ನೀವು ಕೊಡುವ ಗೌರವ?’
- ಹೀಗಂತ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಪ್ರಶ್ನಿಸಿದ್ದಾರೆ.
'ಮೊದಲು ಇವಳನ್ನು ಕಡಿದು ಕೊಲ್ಲಬೇಕು': ಡಿಸಿ ಸಿಂಧೂ ರೂಪೇಶ್‌ಗೆ ಕೊಲೆ ಬೆದರಿಕೆ ಹಾಕಿದವ ಅಂದರ್
ಈ ಬಗ್ಗೆ ಬುಧವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಶಹಬ್ಬಾಸ್ ಯಡಿಯೂರಪ್ಪ ಅವರೇ ಕೊರೋನಾ ವಾರಿಯರ್ಸ್‌ಗೆ ಆಕಾಶದಿಂದ ಹೂಮಳೆ ಸುರಿಸಿ ಗೌರವ ಸೂಚಿಸಿದಿರಿ. ಇದೀಗ ಕೊಲೆ ಬೆದರಿಕೆ ಎದುರಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರಿಗೆ ರಕ್ಷಣೆ ನೀಡದೆ ವರ್ಗಾವಣೆ ಮಾಡಿದ್ದಿರಿ. ಇದೇನಾ ಕೊರೋನಾ ವಾರಿಯರ್ಸ್‌ಗೆ ನೀಡುವ ಗೌರವ?’ ಎಂದು ಪ್ರಶ್ನಿಸಿದರು.
ಅಕ್ರಮ ಗೋಸಾಗಾಟ: ದ.ಕ ನಿರ್ಗಮನ ಡಿಸಿ ಸಿಂಧು ರೂಪೇಶ್‌ಗೆ ಕೊಲೆ ಬೆದರಿಕೆ..!
‘ಕೊರೋನಾ ಅಕ್ರಮ ಬಯಲಿಗೆಳೆದರೆ ಅಧಿಕಾರಿಗಳ ನೈತಿಕ ಸ್ಥೈರ್ಯ ಕುಸಿಯುವಂತೆ ಮಾಡ್ತೀರಿ ಎಂದು ದೂರುತ್ತೀರಿ. ಮೊದಲು ಭ್ರಷ್ಟರ ರಕ್ಷಣೆಗಾಗಿ ಬಿಬಿಎಂಪಿ ಆಯುಕ್ತರ ವರ್ಗಾವಣೆ ಮಾಡಿದಿರಿ. ಈಗ ಕೋಮುವಾದಿ ಪುಂಡರ ರಕ್ಷಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಿದ್ದೀರಿ. ಇದೇನಾ ನಿಮ್ಮ ಕೊರೋನಾ ವಿರುದ್ಧದ ಹೋರಾಟ’ ಎಂದು ಕಿಡಿ ಕಾರಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.