ರಾಜ್ಯದಲ್ಲಿ ಇಂದಿನಿಂದ ಎರಡು ದಿನ ರಾಹುಲ್‌ ಗಾಂಧಿ ಪ್ರವಾಸ

By Kannadaprabha News  |  First Published Aug 2, 2022, 12:19 PM IST

AICC ಮಾಜಿ ಅಧ್ಯಕ್ಷ Rahul Gandhi ಅವರು ಆ.2 ಹಾಗೂ 3ರಂದು ರಾಜ್ಯದಲ್ಲಿ ಪ್ರವಾಸ ಹಮ್ಮಿಕೊಂಡಿದ್ದು, ಆ. 2ರಂದು ಹುಬ್ಬಳ್ಳಿಯಲ್ಲಿ ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿ ಸಭೆ ನಡೆಸುವರು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಪ ಸದಸ್ಯ ಸಲೀಂ ಅಹ್ಮದ್‌(Salim Ahmed) ತಿಳಿಸಿದ್ದಾರೆ.


ಹಾವೇರಿ (ಆ.2) : ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಆ.2 ಹಾಗೂ 3ರಂದು ರಾಜ್ಯದಲ್ಲಿ ಪ್ರವಾಸ ಹಮ್ಮಿಕೊಂಡಿದ್ದು, ಆ. 2ರಂದು ಹುಬ್ಬಳ್ಳಿಯಲ್ಲಿ ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿ ಸಭೆ ನಡೆಸುವರು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಪ ಸದಸ್ಯ ಸಲೀಂ ಅಹ್ಮದ್‌(Salim Ahmed) ತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ. 2ರಂದು ಸಂಜೆ 6ಕ್ಕೆ ಹುಬ್ಬಳ್ಳಿ(Hubballi)ಗೆ ಆಗಮಿಸುವರು. ರಾತ್ರಿ 8ಕ್ಕೆ ಪಕ್ಷದ ಮುಖಂಡರೊಂದಿಗೆ ಸಭೆ ನಡೆಸುವರು. ಈ ಸಭೆಯಲ್ಲಿ ಪಕ್ಷದ ಮುಖಂಡರಾದ ಕೆ.ಸಿ. ವೇಣುಗೋಪಾಲ(K.C.Venugopala) ಡಿ.ಕೆ. ಶಿವಕುಮಾರ(D.K.Shivakumar), ಸಿದ್ದರಾಮಯ್ಯ(Siddaramaiah), ಬಿ.ಕೆ. ಹರಿಪ್ರಸಾದ(B.K.Hariprasad) ಸೇರಿ ಎಐಸಿಸಿ(AICC) ಪದಾಧಿಕಾರಿಗಳು, ರಾಜಕೀಯ ವ್ಯವಹಾರಗಳ ಸಮಿತಿಯ 42 ಪದಾಧಿಕಾರಿಗಳು ಪಾಲ್ಗೊಳ್ಳುವರು. ಸಭೆಯಲ್ಲಿ ಮುಂಬರುವ ವಿಧಾನಸಭೆ ಚುನಾವಣೆ ಸಿದ್ಧತೆ, ರಾಜ್ಯ ಸರ್ಕಾರದಲ್ಲಿನ ಭ್ರಷ್ಟಾಚಾರ, ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಕುರಿತು ಚರ್ಚಿಸಲಾಗುವುದು ಎಂದರು.

ಇತಿಹಾಸದಲ್ಲಿಯೇ ಮೊದಲ ಬಾರಿಗೆ ಹುಬ್ಬಳ್ಳಿಯಲ್ಲಿ ರಾಹುಲ್ ಗಾಂಧಿ ಐತಿಹಾಸಿಕ ಸಭೆ

Tap to resize

Latest Videos

undefined

ಆ. 3ರಂದು ಬೆಳಗ್ಗೆ ಚಿತ್ರದುರ್ಗ(Chitradurga)ಕ್ಕೆ ತೆರಳಿ ವಿವಿಧ ಮಠಾಧೀಶರನ್ನು ಭೇಟಿ ಮಾಡುವರು. ಮಧ್ಯಾಹ್ನ 12.30ಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah) ಅವರ 75ನೇ ಜನ್ಮ ದಿನೋತ್ಸವದಲ್ಲಿ ಪಾಲ್ಗೊಳ್ಳುವರು ಎಂದರು.

ಬಿಜೆಪಿ ಸರ್ಕಾರ(BJP Govt)ವು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಮುಖ್ಯಮಂತ್ರಿ(CM Basavaraj Bommai)ಗಳು ಸರ್ವ ಜನಾಂಗದ ಹಿತ ಕಾಪಾಡುವುದಾಗಿ ಪ್ರಮಾಣವಚನ ಸ್ವೀಕರಿಸಿ ಅದಕ್ಕೆ ತದ್ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಸರ್ಕಾರ ಇದೆಯೋ ಇಲ್ಲವೋ ಎಂಬ ಸಂಶಯ ಜನರನ್ನು ಕಾಡುವಂತೆ ಮಾಡಿದೆ. ರಾಜ್ಯದಲ್ಲಿ ಸರಣಿ ಕೊಲೆಗಳು ನಡೆಯುತ್ತಿವೆ. ಗುಪ್ತಚರ ಇಲಾಖೆ ಸಂಪೂರ್ಣ ವಿಫಲವಾಗಿದೆ. ಕೊಲೆಗಳನ್ನು ನಿಯಂತ್ರಿಸುವ ಕೆಲಸ ಮಾಡಬೇಕಿದ್ದ ಸಿಎಂ ಒಂದು ಜನಾಂಗಕ್ಕೆ ಸೀಮಿತವಾದಂತೆ ವರ್ತಿಸುತ್ತಿದ್ದಾರೆ.

ಕೊಲೆಯಾದ ಪ್ರವೀಣ ಮನೆಗೆ ಭೇಟಿ ನೀಡಿದ ಸಿಎಂ .25 ಲಕ್ಷ ಪರಿಹಾರ ನೀಡಿದ್ದಾರೆ. ಇನ್ನಿಬ್ಬರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳದೇ ಪಕ್ಷಪಾತ ನೀತಿ ಅನುಸರಿಸಿದ್ದಾರೆ. ಇವರಿಗೆ ಸಿಎಂ ಆಗಿ ಮುಂದುವರೆಯುವ ನೈತಿಕತೆಯಿಲ್ಲ. ಪ್ರವೀಣ ಹತ್ಯೆ ಪ್ರಕರಣವನ್ನು ಸ್ವತಃ ಸಿಎಂ ಅವರೇ ಎನ್‌ಐಎ ತನಿಖೆಗೆ ಒಪ್ಪಿಸಿದ್ದಾರೆ. ಇವರ ಆಡಳಿತದಲ್ಲಿರುವ ಪೊಲೀಸ್‌ ಇಲಾಖೆಯ ಮೇಲೆ ಇವರಿಗೆ ನಂಬಿಕೆ ಇಲ್ಲದಂತಾಗಿದೆ. ಪೊಲೀಸ್‌ ಇಲಾಖೆ ರಾಜ್ಯದಲ್ಲಿ ವಿಫಲವಾಗಿದೆಯೇ ಎಂದು ಪ್ರಶ್ನಿಸಿದರು.

ಬದ್ಧತೆಯಿಲ್ಲದ ಸರ್ಕಾರ:

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಭ್ರಷ್ಟಾಚಾರದಲ್ಲಿ ಮುಳುಗಿದೆ. ಸರ್ಕಾರದ ನರ ಸತ್ತು ಹೋಗಿದೆ. ಜನರಿಗೆ ರಕ್ಷಣೆ ಸಿಗುತ್ತಿಲ್ಲ. ಬದ್ಧತೆಯಂತೂ ಈ ಸರ್ಕಾರಕ್ಕೆ ಇಲ್ಲವಾಗಿದೆ. ಅಭಿವೃದ್ಧಿ ಬದಲು ಕೊಲೆಗಳು ರಾಜ್ಯದಲ್ಲಿ ನಡೆಯುತ್ತಿವೆ. ಶೇ. 40ರಷ್ಟುಭ್ರಷ್ಟಾಚಾರ ತಾಂಡವಾಡುತ್ತಿದೆ. ಇವರ ಪಕ್ಷದವರೇ ಇವರ ಗೃಹ ಸಚಿವರ ಮನೆ ಎದುರು ಪ್ರತಿಭಟನೆ ನಡೆಸುವ ಸ್ಥಿತಿ ನಿರ್ಮಾಣವಾಗಿದೆ ಎಂದು ಟೀಕಿಸಿದರು.

ಚಿತ್ರದುರ್ಗ: ಮುರುಘಾ ಮಠಕ್ಕೆ ರಾಹುಲ್ ಗಾಂಧಿ ಭೇಟಿ, ಸ್ಥಳ ಪರಿಶೀಲನೆ ನಡೆಸಿದ ಡಿಕೆಶಿ

ಇತ್ತೀಚೆಗೆ ಕೆಲ ಘಟನೆಗಳಿಂದ ರಾಜ್ಯದ ಹೆಸರು ಹಾಳಾಗುತ್ತಿದೆ. ಇವರಿಗೆ ಬದ್ಧತೆ ಇದ್ದರೆ ಕೂಡಲೇ ಸಮಾಜಘಾತುಕ ಶಕ್ತಿಗಳು, ಸಂಘಟನೆಗಳ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಸಮಾಜಘಾತುಕ ಕೆಲಸ ಮಾಡುವ ಸಂಘಟನೆಗಳನ್ನು ಬ್ಯಾನ್‌ ಮಾಡಬೇಕು ಎಂದು ಸಲೀಂ ಅಹ್ಮದ್‌ ಒತ್ತಾಯಿಸಿದರು.

ಪಕ್ಷದಿಂದ ಈಗಾಗಲೇ ವಿಧಾನಸಭೆ ಚುನಾವಣೆ ಪೂರ್ವ 2ಹಂತ ಸಮೀಕ್ಷೆ ನಡೆಸಲಾಗಿದೆ. 150 ಸ್ಥಾನಗಳ ಗುರಿಯನ್ನು ರಾಹುಲ್‌ ಗಾಂಧಿಯವರು ನೀಡಿದ್ದು, ಈಗಾಗಲೇ ನಮ್ಮ ಆಂತರಿಕ ಸಮೀಕ್ಷೆಯಲ್ಲಿ 130 ಸ್ಥಾನಗಳನ್ನು ಗೆಲ್ಲುವ ಸೂಚನೆ ಸಿಕ್ಕಿದೆ. ಇನ್ನಷ್ಟುಸಂಘಟನೆಯೊಂದಿಗೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ಅಧಿಕಾರಕ್ಕೆ ಬರುವ ಸಂಪೂರ್ಣ ವಿಶ್ವಾಸವಿದೆ ಎಂದರು.

ಪಕ್ಷವನ್ನು ಅಧಿಕಾರಕ್ಕೆ ತರುವುದೇ ನಮ್ಮ ಉದ್ದೇಶ:

ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ ನಡುಗೆ ಸಿಎಂ ಕುರ್ಚಿಗಾಗಿ ಕಿತ್ತಾಟ ವಿಚಾರ ಕುರಿತು ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯ್ಯಕ್ಷ ಸಲೀಂ ಅಹ್ಮದ್‌, ನಮ್ಮ ಎಲ್ಲ ಮುಖಂಡರ ಕರ್ತವ್ಯ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ತರುವುದಷ್ಟೆ. ಸಿದ್ದರಾಮಯ್ಯ, ಶಿವಕುಮಾರ್‌ ಯಾರೇ ಆದರೂ ಎಲ್ಲರೂ ಕಾರ್ಯಕರ್ತರು ಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ. ಗೆದ್ದ ಬಳಿಕ ಹೈಕಮಾಂಡ್‌ ಈ ರಾಜ್ಯಕ್ಕೆ ಯಾರು ಸಿಎಂ ಆಗಬೇಕು ಅಂತ ತೀರ್ಮಾನ ಮಾಡ್ತಾರೆ. ಕಾರ್ಯಕರ್ತರ ನಡುವೆ ಕೆಲ ಭಿನ್ನಾಭಿಪ್ರಾಯ ಇರಬಹುದು. ಆದರೆ, ಖಂಡಿತವಾಗಿ ನಾವು ಈ ಬಾರಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ಬರುತ್ತೇವೆ ಎಂದು ಭವಿಷ್ಯ ನುಡಿದರು.

ಮಾಜಿ ಸಚಿವ ಬಸವರಾಜ ಶಿವಣ್ಣನವರ, ರುದ್ರಪ್ಪ ಲಮಾಣಿ, ಎಸ್‌.ಆರ್‌. ಪಾಟೀಲ, ಡಾ. ಪ್ರಕಾಶಗೌಡ ಪಾಟೀಲ ಇತರರು ಇದ್ದರು.

click me!