ಮುಡಾ ತನಿಖೆಗೆ ಅನುಮತಿ ಪ್ರಶ್ನಿಸಿ ಇಂದು ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೊರೆ

By Kannadaprabha News  |  First Published Aug 19, 2024, 6:52 AM IST

ಮುಡಾ (ಮೈಸೂರು ಅಭಿವೃದ್ಧಿ ಪ್ರಾಧಿಕಾರ) 'ಸೈಟು ಅಕ್ರಮ' ಪ್ರಕರಣದ ಸಂಬಂಧ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ತಮ್ಮ ವಿರುದ್ಧ ತನಿಖೆಗೆ ಆದೇಶಿಸಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರದಿಂದ ಕಾನೂನು ಹೋರಾಟ ಆರಂಭಿಸಲಿದ್ದು, ಹೈಕೋರ್ಟ್ ಮುಂದೆ ಅರ್ಜಿ ಸಲ್ಲಿಸಲಿದ್ದಾರೆ. 


ಬೆಂಗಳೂರು (ಆ.19): ಮುಡಾ (ಮೈಸೂರು ಅಭಿವೃದ್ಧಿ ಪ್ರಾಧಿಕಾರ) 'ಸೈಟು ಅಕ್ರಮ' ಪ್ರಕರಣದ ಸಂಬಂಧ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ತಮ್ಮ ವಿರುದ್ಧ ತನಿಖೆಗೆ ಆದೇಶಿಸಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರದಿಂದ ಕಾನೂನು ಹೋರಾಟ ಆರಂಭಿಸಲಿದ್ದು, ಹೈಕೋರ್ಟ್ ಮುಂದೆ ಅರ್ಜಿ ಸಲ್ಲಿಸಲಿದ್ದಾರೆ. ಸುಪ್ರೀಂ ಕೋರ್ಟ್ ಹಿರಿಯ ವಕೀಲರಾದ ಕಪಿಲ್ ಸಿಬಲ್ ಹಾಗೂ ಅಭಿಷೇಕ್ ಮನು ಸಿಂಘಿ ಅವರು ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ನೀಡಿರುವ ಅನುಮತಿ ರದ್ದುಪಡಿಸುವಂತೆ ಹೈಕೋಟ್೯ಗೆ ಅರ್ಜಿ ಸಲ್ಲಿಸಲಿದ್ದಾರೆ. 

ಖಾಸಗಿ ದೂರಿನ ಆಧಾರದ ಮೇಲೆ ಗೌರ‌ ಭ್ರಷ್ಟಾಚಾರ ನಿಗ್ರಹ ಕಾಯಿದೆ ಸೆಕ್ಷನ್ 17-ಎ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್ 218 ರ ಅಡಿ ತನಿಖೆಗೆ ಅನುಮತಿ ನೀಡಿರುವುದು ಕಾನೂನು ಬಾಹಿರವಾಗಿರುವುದರಿಂದ ರದ್ದುಪಡಿಸ ಬೇಕು ಎಂದು ವಕೀಲರು ವಾದ ಮಾಡಲಿದ್ದಾರೆ ಎನ್ನಲಾಗಿದೆ. ಸೋಮವಾರ ರಿಟ್ ಅರ್ಜಿ ಸಲ್ಲಿಕೆ ಮಾಡಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ತಮ್ಮ ಆಪ್ತ ಸಚಿವರು ಹಾಗೂ ವಕೀಲರು, ತಮ್ಮ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಅವರೊಂದಿಗೆ ಚರ್ಚೆ ನಡೆಸಿದರು. 

Tap to resize

Latest Videos

ಒದ್ದರೆ ಬೀಳುವಂತಿದೆ ಬೆಂಗಳೂರಿನ ಫುಟ್‌ಬಾಲ್‌ ಸ್ಟೇಡಿಯಂ: ಭೂತದ ಬಂಗಲೆಯಂತೆ ಕಾಣುವ ಮೈದಾನ

ಮಂತ್ರಾಲಯ ಪ್ರವಾಸ ರದ್ದು: ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಿರುವ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ ಬೆಂಗಳೂರಿಗೆ ಆಗಮಿಸಲಿರುವ ಅಭಿಷೇಕ್ ಮನು ಸಿಂಘಿ ಮತ್ತು ಕಪಿಲ್ ಸಿಬಲ್ ಅವರೊಂದಿಗೆ ಸಿದ್ದರಾಮಯ್ಯ ಸುದೀರ್ಘ ಚರ್ಚಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಸೋಮವಾರ ಮಂತ್ರಾಲಯದ ಪ್ರವಾಸ ರದ್ದು ಮಾಡಿದ್ದಾರೆ. ಕಾವೇರಿಗೆ ಆಪ್ತ ಸಚಿವರ ಭೇಟಿ: ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಗೆ ಭಾನುವಾರ ಹಲವು ಸಚಿವರು ಹಾಗೂ ಆಪ್ತರು ಆಗಮಿಸಿ ಚರ್ಚಿಸಿದರು. ಸಚಿವರಾದ ಲಕ್ಷ್ಮೀ ಹೆಬ್ಬಾಳರ್, ಕೃಷ್ಣ ಬೈರೇಗೌಡ, ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್ ಸೇರಿ ಕೆಲ ಕಾಂಗ್ರೆಸ್‌ ಶಾಸಕರು ಭೇಟಿ ನೀಡಿ ಸಮಾಲೋಚನೆ ನಡೆಸಿದರು.

ಜನರ ಸ್ವಾಭಿಮಾನ ಕೆಣಕಿದ್ದಾರೆ: ಇಬ್ರಾಹಿಂ: ಸಿದ್ದರಾಮಯ್ಯ ಭೇಟಿ ಬಳಿಕ ಮಾತನಾಡಿದ ಜೆಡಿಎಸ್‌ ಮಾಜಿ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ, ಕೇಂದ್ರ ಸರ್ಕಾರಕರ್ನಾಟಕದಜನರಸ್ವಾಭಿಮಾನವನ್ನು ಕೆಣಕಿದೆ. ಜೆಡಿಎಸ್‌ನ ಭ್ರಷ್ಟ ನಾಯಕರು ಸಿದ್ದರಾಮಯ್ಯ ಬಗ್ಗೆ ಮಾತನಾಡುತ್ತಿದ್ದಾರೆ. ಅವರ ಲೆಕ್ಕವೆಲ್ಲವನ್ನೂ ಬಿಚ್ಚಿಡುತ್ತೇನೆ. ಈ ಸಮಯದಲ್ಲಿ ಎಲ್ಲರೂ ಸಿದ್ದರಾಮಯ್ಯ ಪರನಿಲ್ಲಬೇಕಿದೆ. ಅವರು ಟಗರು, ಅವರಿಗೆ ಧೈರ್ಯ ಹೇಳಿದ್ದೇನೆ. ಅವರು ಹೋರಾಡಿ ಗೆಲ್ಲಲಿದ್ದಾರೆ ಎಂದರು.

ಕರ್ನಾಟಕದ ಎಲ್‌ಐಸಿ ಏಜೆಂಟರ ಮಾಸಿಕ ಅದಾಯ 13,265: ಆದಾಯದಲ್ಲಿ ಅಂಡಮಾನ್‌ ಏಜೆಂಟ್‌ಗಳು ನಂ.1

ಶನಿವಾರವೇ ದೂರುದಾರರ ಕೇವಿಯಟ್: ಸೋಮವಾರ ಸಿದ್ದರಾಮಯ್ಯ ಅವರ ಪರ ವಕೀಲರು ಸಲ್ಲಿಸುವ ಅರ್ಜಿ ಆಧರಿಸಿ ಯಾವುದೇ ತೀರ್ಮಾನ ತೆಗೆದುಕೊಳ್ಳುವ ಮುನ್ನ ತಮ್ಮ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಬೇಕು ಹಾಗೂ ವಾದ ಆಲಿಸಬೇಕೆಂದು ಸಿದ್ದರಾಮಯ್ಯ ವಿರುದ್ಧ ದೂರುದಾರ ಪ್ರದೀಪಕುಮಾ‌ ಶನಿವಾರವೇ ಹೈಕೋರ್ಟ್‌ಗೆ ಕೇವಿಯಟ್ ಅರ್ಜಿ ಸಲ್ಲಿಸಿದ್ದಾರೆ.

click me!