ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ನಾಮಪತ್ರ ವಾಪಸ್‌ಗೆ ಇಂದು ಕೊನೆ ದಿನ

By Kannadaprabha NewsFirst Published Apr 8, 2024, 7:43 AM IST
Highlights

ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಗೆ 14 ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಸಲ್ಲಿಸಿರುವ ನಾಮಪತ್ರ ವಾಪಸ್ ಪಡೆಯಲು ಸೋಮವಾರ ಕಡೆಯ ದಿನವಾಗಿದೆ. ರಾಜ್ಯದಲ್ಲಿ ಒಟ್ಟು 358 ಅಭ್ಯರ್ಥಿಗಳು 492 ಉಮೇದುವಾರಿಕೆ ಸಲ್ಲಿಸಿದ್ದಾರೆ. 

ಬೆಂಗಳೂರು (ಏ.08): ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಗೆ 14 ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಸಲ್ಲಿಸಿರುವ ನಾಮಪತ್ರ ವಾಪಸ್ ಪಡೆಯಲು ಸೋಮವಾರ ಕಡೆಯ ದಿನವಾಗಿದೆ. ರಾಜ್ಯದಲ್ಲಿ ಒಟ್ಟು 358 ಅಭ್ಯರ್ಥಿಗಳು 492 ಉಮೇದುವಾರಿಕೆ ಸಲ್ಲಿಸಿದ್ದಾರೆ. ಈ ಪೈಕಿ 300 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿದ್ದು, ಉಳಿದವು ಅಮಾನ್ಯಗೊಂಡಿವೆ. ಸೋಮವಾರ ಸಂಜೆ ವೇಳೆಗೆ 14 ಕ್ಷೇತ್ರಗಳಲ್ಲಿ ಕಣದಲ್ಲಿ ಉಳಿಯಲಿರುವ ಅಭ್ಯರ್ಥಿಗಳ ಸ್ಪಷ್ಟ ಚಿತ್ರಣ ಹೊರಬೀಳಲಿದೆ. ಈಗಾಗಲೇ ಪ್ರಮುಖ ಪಕ್ಷಗಳ ಪ್ರಚಾರ, ರೋಡ್‌ ಶೋ ಇತ್ಯಾದಿ ಆರಂಭವಾಗಿದ್ದರೂ ಮಂಗಳವಾರದಿಂದ ಪ್ರಚಾರದ ಅಬ್ಬರ ಇನ್ನಷ್ಟು ಬಿರುಸಾಗಲಿದೆ. ವಿವಿಧ ಪಕ್ಷಗಳ ರಾಷ್ಟ್ರೀಯ ನಾಯಕರು, ಸ್ಟಾರ್‌ ಪ್ರಚಾರಕರ ಸಭೆಗಳನ್ನು ಏರ್ಪಡಿಸಲು ಸಜ್ಜಾಗುತ್ತಿವೆ.

24 ಅಭ್ಯರ್ಥಿಗಳ ನಾಮಪತ್ರ ಮಾನ್ಯ, 14 ತಿರಸ್ಕೃತ: ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳ ನಾಮಪತ್ರ ಪರಿಶೀಲನೆ ವೇಳೆ ಬಾಕಿ ಇದ್ದ ಬೆಂಗಳೂರು ದಕ್ಷಿಣ ಕ್ಷೇತ್ರದ ನಾಮಪತ್ರಗಳ ಪರಿಶೀಲನೆ ಪೂರ್ಣಗೊಂಡಿದ್ದು, 24 ಅಭ್ಯರ್ಥಿಗಳ ನಾಮಪತ್ರಗಳು ಮಾನ್ಯವಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟಾರೆ 358 ಅಭ್ಯರ್ಥಿಗಳ ಪೈಕಿ 300 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ. ಇನ್ನುಳಿದ ಅಭ್ಯರ್ಥಿಗಳ ನಾಮಪತ್ರ ಅಮಾನ್ಯಗೊಂಡಿವೆ.

Latest Videos

ಶುಕ್ರವಾರ 13 ಲೋಕಸಭಾ ಕ್ಷೇತ್ರಗಳ ಉಮೇದುವಾರಿಕೆ ಪರಿಶೀಲನೆ ಪ್ರಕ್ರಿಯೆ ಮುಕ್ತಾಯಗೊಂಡಿತ್ತು. ಆದರೆ, ಬೆಂಗಳೂರು ದಕ್ಷಿಣ ಕ್ಷೇತ್ರದ ನಾಮಪತ್ರ ಪರಿಶೀಲನೆ ಕಾರ್ಯ ಶುಕ್ರವಾರ ತಡರಾತ್ರಿಯಾದರೂ ಮುಕ್ತಾಯಗೊಳ್ಳದ ಕಾರಣ ಶನಿವಾರ ಪೂರ್ಣಗೊಳಿಸಲಾಯಿತು. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸಲ್ಲಿಕೆಯಾಗಿದ್ದ 34 ಅಭ್ಯರ್ಥಿಗಳ 49 ನಾಮಪತ್ರಗಳ ಪೈಕಿ 35 ನಾಮಪತ್ರಗಳು ಪುರಸ್ಕೃತವಾಗಿದ್ದು, 14 ನಾಮಪತ್ರಗಳು ತಿರಸ್ಕೃತಗೊಂಡಿವೆ. 24 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿವೆ.

ಉಚಿತ ವಿದ್ಯುತ್‌ನಿಂದ ಸಾಲದಲ್ಲಿ ಸಿಲುಕುತ್ತೀರಿ: ರಾಜ್ಯಗಳಿಗೆ ಕೇಂದ್ರ ಸರ್ಕಾರದ ಎಚ್ಚರಿಕೆ

ರಾಜ್ಯದಲ್ಲಿ ಒಟ್ಟಾರೆ 358 ಅಭ್ಯರ್ಥಿಗಳು 492 ಉಮೇದುವಾರಿಕೆ ಸಲ್ಲಿಕೆ ಮಾಡಿದ್ದರು. ಈ ಪೈಕಿ ಶುಕ್ರವಾರ 276 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿದ್ದವು. 384 ನಾಮಪತ್ರಗಳು ಸ್ವೀಕೃತಗೊಂಡಿದ್ದರೆ, 60 ನಾಮಪತ್ರಗಳು ತಿರಸ್ಕೃತಗೊಂಡಿದ್ದವು. ಶನಿವಾರ ನಾಮಪತ್ರ ಪರಿಶೀಲನೆ ಕಾರ್ಯ ಸಂಪೂರ್ಣವಾಗಿ ಪೂರ್ಣಗೊಂಡಾಗ 300 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ. 419 ನಾಮಪತ್ರಗಳು ಪುರಸ್ಕೃತಗೊಂಡಿದ್ದು, 74 ನಾಮಪತ್ರಗಳು ತಿರಸ್ಕೃತಗೊಂಡಿವೆ ಎಂದು ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ತಿಳಿಸಿದೆ.

click me!